ಕುಷ್ಟಗಿ: ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ; ಮುಖ್ಯಮಂತ್ರಿಯಿಂದ ವಿಳಂಬ ಧೋರಣೆ
Team Udayavani, Nov 18, 2022, 3:00 PM IST
ಕುಷ್ಟಗಿ: ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿಗೆ ಅಧ್ಯಯನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ವಿಳಂಬ ಧೋರಣೆಯನ್ನು ಹಾಲುಮತ ಮಹಾಸಭಾ ಖಂಡಿಸಿದೆ.
ಶುಕ್ರವಾರ ಇಲ್ಲಿನ ಹಳೆಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ವಿಷಯ ಪ್ರಸ್ತಾಪಿಸಿದ ಕುಷ್ಟಗಿ ತಾಲೂಕು ಹಾಲುಮತ ಮಹಾಸಭಾ ಅಧ್ಯಕ್ಷ ಹೊಳೆಯಪ್ಪ ಕುರಿ ಮಾತನಾಡಿ 2018 ರ ಸಮ್ಮಿಶ್ರ ಸರ್ಕಾರದಲ್ಲಿ ಎಸ್.ಟಿ. ಮೀಸಲಾತಿಗಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರ ಮೈಸೂರು ಇವರಿಂದ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶಿಸಿ, ಅಧ್ಯಾಯನ ಸಂಪೂರ್ಣವಾಗಿ ಮುಗಿದಿದೆ. ಸರ್ಕಾರವು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದೇ ಅನಗತ್ಯ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದರು.
ರಾಜ್ಯದಲ್ಲಿರುವ ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿಯಲ್ಲಿ ಅನ್ಯಾಯವಾಗುತ್ತಿದೆ. ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡ(ಎಸ್.ಟಿ) ಮೀಸಲಾತಿ ಪಟ್ಟಿಯಲ್ಲಿ ಕುರುಬರಿಗೆ ಸಂಬಂಧಪಟ್ಟ ಗೊಂಡ, ರಾಜಗೊಂಡ, ಜೇನುಕುರುಬ, ಕಾಡುಕುರುಬ, ಕಾಟ್ಟುನಾಯಕನ್, ಕುರುಮನ್, ಮತ್ತು ಕ್ರಸಂ.28 ರಲ್ಲಿ ಕುರುಬ ಎಂಬ ಜಾತಿಗಳು ಇದ್ದರೂ ಸಹ ರಾಜ್ಯವ್ಯಾಪಿ ವಿಸ್ತಾರ ಮಾಡಿಲ್ಲ. ಈ ಅನ್ಯಾಯವನ್ನು ಸರಿಪಡಿಸಲು ಸರ್ಕಾರಗಳಿಗೆ ಮನವಿ ಮಾಡಲಾಗಿದೆ.
ಕಾಗಿನೆಲೆ ಮಹಾಸಂಸ್ಥಾನದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಹಾಗೂ ಹಾಲುಮತ ಮಹಾಸಭಾದ ರಾಜ್ಯ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡಲಾಗಿತ್ತು. ಕನಕದಾಸರ ಜಯಂತಿಯಂದು ಸರ್ಕಾರದಿಂದ ಶುಭಸುದ್ದಿಯನ್ನು ಕುರುಬ ಸಮುದಾಯಕ್ಕೆ ನಿರೀಕ್ಷೆ ಮಾಡಿತ್ತು. ಆದರೆ ಮುಖ್ಯಮಂತ್ರಿಗಳು ನಿರಾಸೆ ಮಾಡಿದ್ದಾರೆ. ಮೀಸಲಾತಿಯ ವಿಷಯದಲ್ಲಿ ಮುಖ್ಯಮಂತ್ರಿಗಳು ವಿಳಂಬ ಮಾಡದೇ ಅಧ್ಯಯನದ ವರದಿಯನ್ನು ಅಂಗೀಕರಿಸಿ ಶಿಫಾರಸ್ಸು ಮಾಡಬೇಕೆಂಬ ಹಕ್ಕೋತ್ತಾಯಕ್ಕೆ ನ.21 ಸೋಮವಾರ ಬೆಂಗಳೂರಿನ ಫ್ರೀಡಂ ಫಾರ್ಕನಲ್ಲಿ ಧರಣಿಯ ಮೂಲಕ ಮುಖ್ಯಮಂತ್ರಿಗಳೇ ಕುರುಬ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಎಸ್.ಟಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.
ಹುಲಗಪ್ಪ ಚೂರಿ, ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್ ಅಧ್ಯಕ್ಷ ಮಂಜುನಾಥ ನಾಲಗಾರ, ಮುದಕಪ್ಪ ಚೂರಿ, ಶರಣಪ್ಪ ಚೂರಿ, ತೊಂಡೆಪ್ಪ ಚೂರಿ, ವಿಠ್ಠಲ್ ಚಳಗೇರಿ,ಕೊಳ್ಳಪ್ಪ ಬೂದರ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುಷ್ಟಗಿ: ಅಪಾಯದ ವಿದ್ಯುದ್ದಿಪದ ಕಂಬ ತೆರವುಗೊಳಿಸಿದ ಪುರಸಭೆ
ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಪಾಯವನ್ನು ಆಹ್ವಾನಿಸುತ್ತಿದೆ ವಿದ್ಯುತ್ ಕಂಬ
ಅಂಜನಾದ್ರಿ ಬೆಟ್ಟ ಹತ್ತುವ ವೇಳೆ ಹೃದಯಾಘಾತ: ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು
ಎರಡನೇ ಪಟ್ಟಿಯಲ್ಲಿ ಹೆಸರು ಖಂಡಿತ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಅನ್ಸಾರಿ ಆಡಿಯೋ ವೈರಲ್
ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗ ಕೈ ಬಿಡುವ ಭರವಸೆ ನೀಡಿದ ಗಾಲಿ ರೆಡ್ಡಿ
MUST WATCH
ಹೊಸ ಸೇರ್ಪಡೆ
ಸಬ್‌ರಿಜಿಸ್ಟ್ರಾರ್ ಕಚೇರಿಗಳು ಇನ್ನು ಸ್ಮಾರ್ಟ್
ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ
ಶ್ರೀರಾಮನ ವನವಾಸದ ಚಿತ್ರಕೂಟ ಭಾರತೀಯರೆಲ್ಲ ವೀಕ್ಷಿಸಬೇಕಾದ ಸ್ಥಳ;ವಿದ್ಯಾಧೀಶ ತೀರ್ಥ ಸ್ವಾಮೀಜಿ
ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್
ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ