ಕುಷ್ಟಗಿಯಲ್ಲಿ ಪ್ರತ್ಯೇಕ ಅಪಘಾತ: ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿ ಮೃತ್ಯು
Team Udayavani, Mar 15, 2023, 10:23 PM IST
ಕುಷ್ಟಗಿ: ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತ್ಯೇಕ ಬೈಕ್ ಅಪಘಾತದಲ್ಲಿ ಓರ್ವ ಯುವಕ ದುರ್ಮರಣಕ್ಕೀಡಾಗಿದ್ದು ಇಬ್ಬರು ಬೈಕ್ ಸವಾರರು ಗಾಯಗೊಂಡಿರುವ ಘಟನೆ ನಡೆದಿದೆ.
ಕುಷ್ಟಗಿ – ಗಜೇಂದ್ರಗಡ ರಾಜ್ಯ ಹೆದ್ದಾರಿಯಲ್ಲಿ ಹಿರೇಬನ್ನಿಗೋಳ ಸಮೀಪ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತನಾಗಿದ್ದಾನೆ. ಕುಷ್ಟಗಿಯ ವಿಜಯಕುಮಾರ ಮನ್ನೇರಾಳ (22) ಮೃತ ದುರ್ದೈವಿ. ಮೃತ ಯುವಕ ವಿಜಯಕುಮಾರ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶವಗಾರದಲ್ಲಿರಿಸಲಾಗಿದೆ.
ಕಳೆದ ಫೆ.18 ರಂದು ಶಿವರಾತ್ರಿಯಂದು ಇಟಗಿ ಭೀಮಾಂಬಿಕೆ ದೇವಸ್ಥಾನದಲ್ಲಿ ಸಾಮೂಹಿಕ ಮದುವೆಯಲ್ಲಿ ಮದುವೆಯಾಗಿತ್ತು. ಮದುವೆಯಾಗಿ ತಿಂಗಳಾಂತ್ಯದಲ್ಲಿ ಯುವಕ ವಿಜಯಕುಮಾರ ಸಾವಿನ ಸುದಿ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ.
ರಾಷ್ಟ್ರೀಯ ಚತುಷ್ಪಥ ಹೆದ್ದಾರಿಯಲ್ಲಿ ಯು ಟರ್ನ್ ಮಾಡುವ ವೇಳೆ ವಣಗೇರಾ ಯುವಕರಾದ ಮಂಜುನಾಥ ಪೂಜಾರಿ, ಮೌನೇಶ ಬೈಕ್ ನಿಂದ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಕುಣಿಗಲ್: ಲಾರಿ ಢಿಕ್ಕಿ ಹೊಡೆದು ಬೆಂಗಳೂರಿನ ಖಾಸಗಿ ಕಂಪೆನಿ ಉದ್ಯೋಗಿ ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ