ಇಒ ಇಲ್ಲದೇ ಅಭಿವೃದ್ಧಿ ಕುಂಠಿತ

Team Udayavani, Aug 26, 2019, 11:43 AM IST

kopala-tdy-1

ಗಂಗಾವತಿ: ತಾಲೂಕು ಪಂಚಾಯತ್‌ಗೆ ಕಾಯಂ ಕಾರ್ಯನಿರ್ವಾಹಕ ಅಧಿಕಾರಿ ಇಲ್ಲದೇ ಸರಕಾರದ ಹಲವು ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ಪ್ರಭಾರಿ ಅಧಿಕಾರಿಗಳಿಂದ ನಿರೀಕ್ಷಿತ ಕಾರ್ಯವಾಗುತ್ತಿಲ್ಲ. ಇದರಿಂದ ಸರಕಾರ ಮಹತ್ವಾಕಾಂಕ್ಷಿ ಯೋಜನೆಗಳು ನನೆಗುದಿಗೆ ಬಿದ್ದಿವೆ.

ಎರಡು ವರ್ಷಗಳ ಹಿಂದೆ ತಾಪಂ ಇಒ ಆಗಿದ್ದ ವೆಂಕೋಬಪ್ಪ ಎಂಬ ಅಧಿಕಾರಿಯನ್ನು ವರ್ಗಾವಣೆ ಮಾಡಿದ ನಂತರ ಪೂರ್ಣಾವಧಿಗೆ ಇಬ್ಬರು ಇಒಗಳು ಬಂದರೂ ಸರಿಯಾಗಿ ಆರು ತಿಂಗಳು ಕಾರ್ಯ ನಿರ್ವಹಿಸದೇ ವರ್ಗಾವಣೆಗೊಂಡಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಕುಡಿಯವ ನೀರು ಉದ್ಯೋಗಖಾತ್ರಿ ಯೋಜನೆ ಅನುಷ್ಠಾನ ಶೌಚಾಲಯ ನಿರ್ಮಾಣದಂತಹ ಮಹತ್ವದ ಯೋಜನೆಗಳು ಕುಂಠಿತಗೊಂಡಿವೆ. ಇಡೀ ತಾಲೂಕಿನ ಹಲವು ಅನುದಾನ ಮತ್ತು ಕೆಲ ಇಲಾಖೆಗೆ ಸಿಬ್ಬಂದಿ ವೇತನ ಇಒ ಅವರ ರುಜುವಿನಲ್ಲಿ ಆಗಬೇಕಾಗಿದ್ದು ಪ್ರತಿ 6 ತಿಂಗಳಿಗೊಮ್ಮೆ ಇಒ ಬದಲಾವಣೆಯಿಂದ ಖಜಾನೆ ಇಲಾಖೆ ಮತ್ತು ತಾಪಂ ಬ್ಯಾಂಕ್‌ ಖಾತೆಯಲ್ಲಿ ಇಒ ಸಹಿ ಗುರುತು ಪದೇ ಪದೆ ಬದಲಾವಣೆ ಮಾಡುತ್ತಿರುವುದರಿಂದ ಕಿರಿಕಿರಿಯುಂಟಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ಯ ಇಲಾಖೆಯಿಂದ ಪ್ರತಿ ತಾಪಂ ಇಒ ಅವರಿಗೆ ನೀಡಲಾಗುವ ಡೊಂಗಲ್ ಮಿಷನ್‌ ವಿತರಣೆ ಮಾಡಲಾಗು ತ್ತದೆ. ಪ್ರತಿ 6 ತಿಂಗಳಿಗೊಬ್ಬ ಇಒ ಬದಲಾವಣೆ ಯಿಂದ ಡೊಂಗಲ್ ಮಿಷನ್‌ ವಿತರಣೆ ವಿಳಂಬವಾಗುತ್ತಿದೆ.

ಅಭಿವೃದ್ಧಿ ಕಾರ್ಯ ಕುಂಠಿತ: ತಾಪಂಗೆ ಖಾಯಂ ಇಒ ಇಲ್ಲದೇ ಇರುವುದರಿಂದ ಗ್ರಾಮೀಣ ಭಾಗದ ಗ್ರಾಪಂ.ಆಡಳಿತಕ್ಕೆ ತೊಂದರೆಯಾಗಿದೆ. ತಾಪಂ ಇಒ ಅವರು ಪಿಡಿಒಗಳ ಮೇಲುಸ್ತುವಾರಿಯಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ಗಂಗಾವತಿ ಅಖಂಡ ತಾಲೂಕಿನಲ್ಲಿ 42 ಗ್ರಾಪಂಗಳಿದ್ದು ಕುಡಿಯುವ ನೀರು, ಗ್ರಾಮಸಭೆ, ಮಹಾತ್ಮ ಗಾಂಧಿ ಉದ್ಯೋಗಖಾತ್ರಿ ಯೋಜನೆ ಅನುಷ್ಠಾನ ವೈಯಕ್ತಿಕ ಶೌಚಾಲಯ ನಿರ್ಮಾಣ, ಮನೆಗಳ ಖಾತಾ ಮ್ಯುಟೇಶನ್‌ ಸೇರಿ ಶಿಕ್ಷಣ, ಮಹಿಳಾ ಮಕ್ಕಳ ಕಲ್ಯಾಣ ಕೃಷಿ, ತೋಟಗಾರಿಕೆ ಸೇರಿ ಹಲವು ಇಲಾಖೆ ಪ್ರತಿ ವರ್ಷದ ಬಜೆಟ್ ಮಾಡುವುದು ವೇತನ ಬಿಲ್ ಮಾಡುವ ಕಾರ್ಯವನ್ನು ಇಒ ಅವರು ಮಾಡಬೇಕಾಗುತ್ತದೆ. ತಾಪಂ ಕೆಡಿಪಿ ಸಭೆ, ಸಾಮಾನ್ಯ ಸಭೆ ಕರೆದು ತಾಲೂಕಿನಲ್ಲಿ ಕೈಗೊಳ್ಳಬೇಕಾಗಿರುವ ಅಭಿ ವೃದ್ಧಿ ಕಾರ್ಯಗಳನ್ನು ಕುರಿತು ಚರ್ಚೆ ಮಾಡ ಬೇಕಾಗಿದ್ದು ಖಾಯಂ ಇಒ ಅಧಿಕಾರಿಗಳಿದ್ದರೆ ಅನುಕೂಲವಾಗುತ್ತದೆ.

ನೂತನ ತಾಪಂ ರಚನೆ ವಿಳಂಬ: ಕನಕಗಿರಿ, ಕಾರಟಗಿ ಪ್ರತ್ಯೇಕ ತಾಲೂಕುಗಳಾಗಿದ್ದು, ಗಂಗಾವತಿ ತಾಪಂನಿಂದ ವಿಭಜಿಸಿ ಪ್ರತ್ಯೇಕ ತಾಪಂ ರಚನೆ ಮಾಡಲು ಹಲವು ದಾಖಲೆ ಸೇರಿ ಅಗತ್ಯ ಮಾಹಿತಿ ಸರಕಾರಕ್ಕೆ ರವಾನೆ ಮಾಡಬೇಕಿದೆ. ಪದೇ ಪದೇ ಇಒ ವರ್ಗಾವಣೆಯಿಂದ ಪ್ರತ್ಯೇಕ ತಾಪಂ ರಚನೆ ಕಾರ್ಯ ವಿಳಂಬವಾಗುತ್ತಿದೆ. ಗಂಗಾವತಿ ತಾಪಂ ವ್ಯಾಪ್ತಿಗೆ ಗಂಗಾವತಿ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರಗಳು ಬರುತ್ತಿದ್ದು, ಶಾಸಕರು ಮತ್ತು ಅವರ ಬೆಂಬಲಿಗರು ಹಲವು ಕೆಲಸಗಳ ಒತ್ತಡಕ್ಕೆ ಹೆದರಿ ಗಂಗಾವತಿ ಇಒ ಆಗಿ ಕಾರ್ಯನಿರ್ವಹಿಸಲು ಹಲವು ಇಒಗಳು ಹಿಂದೇಟು ಹಾಕುತ್ತಿದ್ದಾರೆ. ತಾಲೂಕಿನಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಅನುಷ್ಠಾನವಾಗಲು ಖಾಯಂ ಆಗಿ ಇಒ ಒಬ್ಬರ ಅಗತ್ಯವಿದೆ. ಪ್ರಭಾರಿ ಇಒಗಳಿಂದ ಕೆಲಸಗಳ ನಿರೀಕ್ಷೆ ಮಾಡಲಾಗದು.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.