ಉರ್ದು ಶಾಲೆಯಲ್ಲಿ ಬೆರಳೆಣಿಕೆ ಮಕ್ಕಳು

•ವಿದ್ಯಾರ್ಥಿಗಳಿಲ್ಲದೇ ಬಣಗುಡುತ್ತಿದೆ ಶಾಲೆ •ತರಗತಿಗೆ ಸರಾಸರಿ ಇಬ್ಬರು ವಿದ್ಯಾರ್ಥಿಗಳಿಲ್ಲ •3 ತರಗತಿಗಳಲ್ಲಿ ಹಾಜರಿ ಶೂನ್ಯ

Team Udayavani, Aug 5, 2019, 10:10 AM IST

kopala-tdy-2

ತಾವರಗೇರಾ: ತರಗತಿಯಲ್ಲಿ ಕುಳಿತ ಬೆರಳೆಣಿಕೆ ವಿದ್ಯಾರ್ಥಿಗಳು.

ತಾವರಗೇರಾ: ಪಟ್ಟಣದ ಉರ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಣಗುಡುತ್ತಿದೆ. ಈ ಶಾಲೆಯಲ್ಲಿ ಒಂದರಿಂದ ಎಂಟನೇ ತರಗತಿವರೆಗಿದ್ದು, ಒಂದರಿಂದ ಏಳನೇಯ ತರಗತಿವರೆಗೆ ಮಾತ್ರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತಿದ್ದಾರೆ. ಏಳೂ ತರಗತಿಗಳು ಸೇರಿ ಕೇವಲ 15 ವಿದ್ಯಾರ್ಥಿಗಳು ಮಾತ್ರವಿದ್ದು, ಇವರಿಗೆ ಪಾಠ ಬೋಧನೆ ಮಾಡಲು ನಾಲ್ವರು ಶಿಕ್ಷಕರು, ಮೂವರು ಅಡುಗೆ ಸಿಬ್ಬಂದಿ ಇದ್ದಾರೆ. ಈ ಶಾಲೆಯಲ್ಲಿ ಸುಸಜ್ಜಿತವಾದ ಏಳು ಕೊಠಡಿಗಳಿವೆ. ಆದರೆ ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳಿಲ್ಲ.

ಶಾಲೆಯಲ್ಲಿ 1ನೇ ತರಗತಿಯಲ್ಲಿ ಇಬ್ಬರು, 2ನೇ ತರಗತಿಯಲ್ಲಿ ಐವರು, 4ನೇ ತರಗತಿಯಲ್ಲಿ ಐವರು, 5ನೇ ತರಗತಿಯಲ್ಲಿ ಮೂವರು ಸೇರಿದಂತೆ ಒಟ್ಟು 15 ವಿದ್ಯಾರ್ಥಿಗಳಿದ್ದಾರೆ. ಇನ್ನೂಳಿದಂತೆ 3, 6, 7ನೇ ತರಗತಿಯಲ್ಲಿ ಯಾವುದೇ ವಿದ್ಯಾರ್ಥಿಗಳಿಲ್ಲ. ಇರುವ 15 ವಿದ್ಯಾರ್ಥಿಗಳಲ್ಲಿ ನಿತ್ಯ ಮೂರ್‍ನಾಲ್ಕು ವಿದ್ಯಾರ್ಥಿಗಳು ಗೈರಾಗಿರುತ್ತಾರೆ.

ಕೊಠಡಿ: ಪಟ್ಟಣದ ಉರ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಸಜ್ಜಿತವಾದ ಏಳು ಕೊಠಡಿಗಳಿವೆ. ಅದರಲ್ಲಿ ಒಂದು ಶಿಕ್ಷಕರ ಕೊಠಡಿ, ಇನ್ನೊಂದು ಅಡುಗೆ ಕೊಠಡಿಯನ್ನಾಗಿ ಬಳಸಲಾಗುತ್ತಿದೆ. ಉಳಿದ ಐದು ತರಗತಿಯ ಕೊಠಡಿಗಳಿದ್ದು, ವಿದ್ಯಾರ್ಥಿಗಳ ಕೊರತೆಯಿಂದ ಕೊಠಡಿಗಳು ಬಣಗುಡುತ್ತಿವೆ.

ಶಿಕ್ಷಕರು: ನಾಲ್ವರು ಶಿಕ್ಷಕರಲ್ಲಿ ಒಬ್ಬರೂ ಮುಖ್ಯ ಶಿಕ್ಷಕರು, ಮೂವರು ಸಹ ಶಿಕ್ಷಕರಿದ್ದಾರೆ. ಕೇವಲ 15 ವಿದ್ಯಾರ್ಥಿಗಳಿಗೆ ನಾಲ್ವರು ಪಾಠ ಬೋಧನೆ ಮಾಡುತ್ತಿರುವುದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ. ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಲು ಮೂವರು ಸಿಬ್ಬಂದಿಗಳಿದ್ದಾರೆ. ಸರಕಾರಕ್ಕೆ ಮೂವರು ಅಡುಗೆ ಸಿಬ್ಬಂದಿ ವೇತನ ಹೊರೆಯಾಗಿ ಪರಿಣಮಿಸಿದೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪಟ್ಟಣದ ಜನತೆ ಒತ್ತಾಯಿಸಿದ್ದಾರೆ.

ಮಕ್ಕಳ ದಾಖಲಾತಿ ಸಂಖ್ಯೆ 15 ಇದ್ದು, ನಾವೂ ಶಾಲೆ ಪ್ರಾರಂಭದಲ್ಲಿ ದಾಖಲಾತಿ ಆಂದೋಲನ ಮಾಡಿದ್ದೇವೆ. ಆದರೂ ವಿದ್ಯಾಥಿಗಳ ದಾಖಲಾತಿ ಸಂಖ್ಯೆ ಹೆಚ್ಚಾಗಿಲ್ಲ. •ಷಹನಾಜ್‌ ಬೇಗಂ,ಪ್ರಭಾರಿ ಮುಖ್ಯ ಶಿಕ್ಷಕಿ

ಪಟ್ಟಣದ ಉರ್ದು ಸರಕಾರಿ ಹಿರಿಯ  ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಾಖಲಾತಿಯ ಸಂಖ್ಯೆ ಕಡಿಮೆ ಇರುವುದು ಗಮನಕ್ಕೆ ಬಂದಿಲ್ಲ. ಈ ಕುರಿತು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ.•ಎಂ. ಚನ್ನಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ

•ಎನ್‌. ಶಾಮೀದ್‌

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.