ಅಲೆಮಾರಿ ಜನಾಂಗಕ್ಕೆ ಸೌಲಭ್ಯ ದೊರೆಯಲಿ

ಅಲೆಮಾರಿ ಜನಾಂಗದ ಆಶ್ರಮ ಶಾಲೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿದೆ.

Team Udayavani, Dec 3, 2021, 5:57 PM IST

ಅಲೆಮಾರಿ ಜನಾಂಗಕ್ಕೆ ಸೌಲಭ್ಯ ದೊರೆಯಲಿ

ಕೊಪ್ಪಳ: ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದಿರುವ ಅಲೆಮಾರಿ ಜನಾಂಗಕ್ಕೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತಾಗಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸಂಬಂಧಿ ಸಿದ ಅಧಿ ಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಲೆಮಾರಿ ಜನಾಂಗದವರ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸುವ ಕುರಿತು ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರವು ಅಲೆಮಾರಿ, ಅರೆ ಅಲೆಮಾರಿ ಜನಾಂಗ ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಹಲವಾರು ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸಿದೆ. ಅವುಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಇಲಾಖೆಗಳು ಶ್ರಮಿಸಬೇಕು. ತಮ್ಮ ಇಲಾಖೆಗಳ ಮೂಲಕ ಸರ್ಕಾರದ ಸೌಲಭ್ಯವನ್ನು ಅಲೆಮಾರಿ ಜನಾಂಗ ಪಡೆಯಲು ಅರ್ಜಿ ನಮೂನೆ, ಅರ್ಜಿ ಸಲ್ಲಿಕೆ, ದಾಖಲೆಗಳ ಸಲ್ಲಿಕೆ ಕುರಿತಂತೆ ಅರಿವು ಮೂಡಿಸಬೇಕು. ಈ ಜನಾಂಗಕ್ಕೆ ಸರ್ಕಾರದ ಸೌಲಭ್ಯ
ಹಾಗೂ ಮೀಸಲಾತಿ ಕಲ್ಪಿಸುವ ಕುರಿತಂತೆ ಹೆಚ್ಚು ಅರಿವು ಮೂಡಿಸಲು ಸಲಹಾ ಸಮಿತಿ ನಿಯಮಾನುಸಾರ ರಚಿಸಬೇಕು. ಸರ್ಕಾರ ಕಲ್ಪಿಸಿರುವ ಸೌಲಭ್ಯ ಪಡೆದುಕೊಳ್ಳಲು ಅಲೆಮಾರಿ ಜನಾಂಗದವರು ಮುಂದಾಗಬೇಕು ಎಂದರು.

ಅಲೆಮಾರಿ ಜನಾಂಗದವರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಆಶ್ರಮ ಶಾಲೆ ಕೊಪ್ಪಳ ಜಿಲ್ಲೆಯಲ್ಲಿದ್ದು, ಈ ಆಶ್ರಮದ ಮಕ್ಕಳನ್ನು ವಿಶೇಷ ಕಾಳಜಿಯಿಂದ ನೋಡಿಕೊಳ್ಳಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹಾಗೂ ಆಶ್ರಮದ ಅಗತ್ಯ ಮೂಲಕ ಸೌಕರ್ಯ ಒದಗಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕ್ರಮ ಕೈಗೊಳ್ಳಬೇಕು. ಮಕ್ಕಳ ಬ್ಯಾಂಕ್‌ ಖಾತೆಗೆ ಪ್ರೋತ್ಸಾಹಧನ ಜಮೆ ಆಗಿದೆಯೇ ಅಥವಾ ಇಲ್ಲ ಎಂಬುವುದನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅ ಧಿಕಾರಿಗಳು ಪರಿಶೀಲಿಸಬೇಕೆಂದು ಸೂಚನೆ ನೀಡಿದರು.

ಜನಾಂಗದ ಮುಖಂಡ ಯಂಕಣ್ಣ ಬಂಟಿ ಮಾತನಾಡಿ, ಕನಕಗಿರಿಯಲ್ಲಿ ಅಲೆಮಾರಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಕನಕಗಿರಿಯಲ್ಲೂ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಆಶ್ರಮ ಶಾಲೆ ನಿರ್ಮಿಸಿ ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಜಲ್ಲಾಧಿಕಾರಿ, ಅಲೆಮಾರಿ ಜನಾಂಗದ ಆಶ್ರಮ ಶಾಲೆ ನಿರ್ಮಾಣಕ್ಕೆ ಅ ಧಿಕಾರಿಗಳು ನಿವೇಶನದ ಲಭ್ಯತೆ ಬಗ್ಗೆ ವರದಿ ಸಲ್ಲಿಸಿಸಬೇಕು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ಗಮನಕ್ಕೆ ತಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಬಿಸಿಎಂ ಜಿಲ್ಲಾ ಅಧಿಕಾರಿ ಜಿ.ಎಂ. ದೊಡ್ಡಮನಿ ಮಾತನಾಡಿ, ಅಲೆಮಾರಿ ಜನಾಂಗದ ಆಶ್ರಮ ಶಾಲೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿದೆ. ಈ ಆಶ್ರಮ ಶಾಲೆಯಲ್ಲಿ 1ರಿಂದ 5ನೇ ತರಗತಿಯ 120 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, 2021-22ನೇ ಸಾಲಿಗಾಗಿ ಕಳೆದ ಸಾಲಿನಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಿದ ಅಲೆಮಾರಿ ಜನಾಂಗದ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿಗಳನ್ನು ಈ ವರ್ಷದ ನವೀಕರಣ ವಿದ್ಯಾರ್ಥಿಗಳೆಂದು ಪರಿಗಣಿಸಿ, ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುವುದು.

ಅಲೆಮಾರಿ ಜನಾಂಗದ ನಿವೇಶನ ರಹಿತ ಕುಟುಂಬದವರಿಗೆ ನಿವೇಶನ ಒದಗಿಸಲು ಕೊಪ್ಪಳ ತಾಲೂಕಿನ ಹೊಸೂರು, ಯಲಬುರ್ಗಾ ತಾಲೂಕಿನ ಹುಲೇಗುಡ್ಡ, ಕುಷ್ಟಗಿ ತಾಲೂಕಿನ ಬಚಿನಾಳ ಹಾಗೂ ಗುಡ್ಡದ ಹನುಮಸಾಗರ ಸೇರಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಜಮೀನು ಖರೀದಿಸಿದೆ, ನಿವೇಶನ ಹಂಚಿಕೆ ಮಾಡಬೇಕಿದೆ ಎಂದರು.

ಸಭೆಯಲ್ಲಿ ಜಿಪಂ ಯೋಜನಾಧಿಕಾರಿ ಟಿ. ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಗಂಗಪ್ಪ, ಶಿವಶಂಕರ ಕರಡಕಲ್‌, ಬಿಸಿಎಂ ಪತ್ರಾಂಕಿತ ವ್ಯವಸ್ಥಾಪಕ ಬಿ.ವಿ. ಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.