7 ವರ್ಷದಿಂದ ಗ್ರಂಥಾಲಯ ಬಂದ್‌

Team Udayavani, Oct 26, 2019, 2:27 PM IST

kopala-tdy-1

ತಾವರಗೇರಾ: ಕುಷ್ಟಗಿ ತಾಲೂಕಿನ ಅತಿ ದೊಡ್ಡ ಹೋಬಳಿ ಕೇಂದ್ರ ಹಾಗೂ ಹೆಚ್ಚಿನ ಜನ ಸಾಂದ್ರತೆ ಹೊಂದಿರುವ ತಾವರಗೇರಾ ಪಟ್ಟಣದಲ್ಲಿ ಏಳು ವರ್ಷಗಳಿಂದ ಗ್ರಂಥಾಲಯ ಇಲ್ಲದಿರುವುದು ಇಲ್ಲಿಯ ಓದುಗರಿಗೆ ಹಾಗೂ ಸಾಹಿತ್ಯ ಆಸ್ತಕರಿಗೆ ನಿರಾಸೆ ಮೂಡಿಸಿದೆ.

ಜ್ಞಾನ ವಿಕಾಸಕ್ಕೆ ದಾರಿಯಾಗಿರುವ ಹಾಗೂ ಸಾಮಾನ್ಯ ಜ್ಞಾನ ಹೆಚ್ಚಳಕ್ಕೆ ಗ್ರಂಥಾಲಯ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಹಿಂದೆ ಪ್ರತಿ ಮಂಡಲ ಪಂಚಾಯಿತಿಗೊಂದು ಗ್ರಂಥಾಲಯ ಮಂಜೂರು ಮಾಡಲಾಗಿದೆ. ಅದರಂತೆ ಪಟ್ಟಣದ ಭಜಂತ್ರಿಯವರ ಓಣಿಯಲ್ಲೂ ಈ ಹಿಂದೆ ಜನ ಶಿಕ್ಷಣ ನಿಲಯ ಎಂಬ ಕಟ್ಟಡದಲ್ಲಿ ಸಾರ್ವಜನಿಕ ಗ್ರಂಥಾಲಯ ನಡೆಸಲಾಗುತ್ತಿತ್ತು. ಅದನ್ನು ಹಿಂದಿನ ಗ್ರಾಪಂ ಆಡಳಿತ ಮಂಡಳಿಯೇ ನಿರ್ವಹಿಸುತ್ತಿತ್ತು. ಜೊತೆಗೆ ಗ್ರಂಥಪಾಲಕನಿಗೆ ಗೌರವ ಧನ ನೀಡುತ್ತಿತ್ತು. ಹಳೆಯ ಕಟ್ಟಡದಲ್ಲಿ ಕೆಲ ಪತ್ರಿಕೆಗಳು ಮಾತ್ರ ಓದುಗರಿಗೆ ಸಿಗುತ್ತಿದ್ದವು. ನಂತರದಲ್ಲಿ ಕಟ್ಟಡವು ಶಿಥಿಲಗೊಂಡು ಬೀಳುವ ಹಂತದಲ್ಲಿದ್ದ ಕಾರಣ ಅಂದಿನ ಗ್ರಂಥಪಾಲಕರು ಎರಡು ವರ್ಷಗಳ ಕಾಲ ಖಾಸಗಿ ಕಟ್ಟಡದಲ್ಲಿ ಗ್ರಂಥಾಲಯ ನಡೆಸಿದರು.

ಆದರೆ ಗ್ರಾಮ ಪಂಚಾಯತ್‌ ಮೇಲ್ದರ್ಜೆಗೇರಿ ಪಟ್ಟಣ ಪಂಚಾಯಿತಿ ಆದ ನಂತರ ಗ್ರಂಥಾಲಯಕ್ಕೆ ಅನುದಾನ ಹಾಗೂ ನಿರ್ವಹಣೆಯ ವೆಚ್ಚ ನೀಡುವುದನ್ನು ನಿಲ್ಲಿಸಲಾಯಿತು. ಈ ಹಿನ್ನೆಲೆಯಲ್ಲಿ ಗ್ರಂಥಪಾಲಕ ಆರೇಳು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿದ್ದ ಗ್ರಂಥಾಲಯವನ್ನು ಮುಚ್ಚಿಕೊಂಡು ಹೋಗಿದ್ದಾರೆ.

ಆದರೆ ಗ್ರಂಥಾಲಯದಲ್ಲಿ ಎಷ್ಟು ಪುಸ್ತಕಗಳು ಇದ್ದವು, ಈಗ ಅವೆಲ್ಲ ಪುಸ್ತಕ ಎಲ್ಲಿವೆ ಎಂಬುದು ತಿಳಿಯದಂತಾಗಿದೆ. ಪಟ್ಟಣದಲ್ಲಿ ಸುಮಾರು 15 ಸಾವಿರ ಜನಸಂಖ್ಯೆ ಹಾಗೂ ಒಂದು ಪ್ರಥಮ ದರ್ಜೆ ಕಾಲೇಜು, ನಾಲು ಪಿಯು ಕಾಲೇಜ್‌, ಹಲವು ಪ್ರೌಢಶಾಲೆ, ವಿವಿಧಸಂಘ, ಸಂಸ್ಥೆಗಳಿವೆ. ಆದರೆ ಎಲ್ಲಕ್ಕಿಂತ ಅಗತ್ಯವಿರುವ ಗ್ರಂಥಾಲಯ ಮಾತ್ರ ಇಲ್ಲದಂತಾಗಿದೆ. ಜೊತೆಗೆ ಇದುವರೆಗೂ ಕೂಡ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಗ್ರಾಪಂನವರು ಪುನಃ ಗ್ರಂಥಾಲಯ ಪ್ರಾರಂಭಿಸುವ ಕುರಿತು ಚಕಾರವೆತ್ತಿಲ್ಲ.

ಈಗಸ್ಥಳೀಯ ಸಾಹಿತ್ಯ ಆಸಕ್ತರು ಮತ್ತು ಕನ್ನಡ ಸಾಹಿತ್ಯ ಪರಿಷತ್‌ ಪದಾಧಿ ಕಾರಿಗಳು ಸೇರಿಕೊಂಡು ಹೊಸ ಕಟ್ಟಡ ನಿರ್ಮಾಣ ಮಾಡುವಂತೆ ಶಾಸಕರಲ್ಲಿಮನವಿ ಮಾಡಿಕೊಂಡಿದ್ದರಿಂದ ಶಾಸಕರ 25 ಲಕ್ಷ ರೂ. ಅನುದಾನ ನೀಡಿದ್ದು, ಈಗ ಹೊಸ ಕಟ್ಟಡದ ಕಾಮಗಾರಿ ಪ್ರಾರಂಭದಲ್ಲಿದೆ.ಆದರೆ ಇಷ್ಟೂ ವರ್ಷ ಕಳೆದರೂ ಇಲಾಖೆಯವರು ಮೌನಕ್ಕೆ ಶರಣಾಗಿದ್ದು ಸಾರ್ವಜನಿಕರ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಇದಕ್ಕೆ ಪೂರಕ ಎಂಬಂತೆ ಸ್ಥಳೀಯ ಆಸಕ್ತ ಯುವಕರು ಸೇರಿ ಖಾಸಗಿ ಗ್ರಂಥಾಲಯ ನಡೆಸುತ್ತಿರುವುದು ಸ್ವಲ್ಪ ಮಟ್ಟಿಗೆ ಇಲ್ಲಿಯ ಓದುಗರಿಗೆ ಅನುಕೂಲವಾದಂತಾಗಿದೆ.

-ಎನ್‌. ಶಾಮೀದ್‌

ಟಾಪ್ ನ್ಯೂಸ್

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.