ಭಾರಿ ಗಾಳಿ-ಮಳೆಗೆ ಅಪಾರ ಹಾನಿ

•ಗುಡುಗು ಸಹಿತ ಧಾರಾಕಾರ ಮಳೆ•ಧರೆಗುರುಳಿದ ಮರ-ವಿದ್ಯುತ್‌ ಕಂಬಗಳು

Team Udayavani, May 1, 2019, 1:11 PM IST

kopala-tdy-..2..

ತಾವರಗೇರಾ: ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಗಾಳಿ ಸಮೇತ ಭಾರಿ ಮಳೆಯಾಗಿದ್ದು, ಕೆಲ ಗ್ರಾಮಗಳಲ್ಲಿ ಮನೆಯ ತಗಡುಗಳು ಹಾಗೂ ಜಮೀನಿನಲ್ಲಿರುವ ದನದ ಶೇಡ್‌ಗಳು ಗಾಳಿ ರಭಸಕ್ಕೆ ಕಿತ್ತು ಹೋಗಿವೆ.

ಬೇಸಿಗೆ ಬಿಸಿಲಿನಿಂದ ಬಸವಳಿದ ಜನರಿಗೆ ಸೋಮವಾರ ಸಂಜೆ ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಬಂದ ಮಳೆ ರಾತ್ರಿ 9ರವರೆಗೆ ಜಿಟಿಜಿಟಿ ಮಳೆಯಾಗಿದ್ದು, ಮೆಣೇಧಾಳ, ಮೆತ್ತಿನಾಳ, ಗಂಗನಾಳ, ಹಿರೇತೆಮ್ಮಿನಾಳ, ವಿರುಪಾಪುರ ಸುತ್ತಮುತ್ತಲಿನ ರೈತರ ಜಮೀನುಗಳ ಬದುಗಳಲ್ಲಿ ಅಲ್ಲಿಲ್ಲಿ ನೀರು ನಿಂತಿದೆ. ಮೆಣೇಧಾಳ ಗ್ರಾಮದ ಹೊರ ವಲಯದಲ್ಲಿರುವ ಕೆಲ ಮನೆಗಳ ತಗಡುಗಳು ಗಾಳಿ ರಭಸಕ್ಕೆ ಕಿತ್ತಿದ್ದು. 8-10 ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ.

ಮೆಣೇಧಾಳ ಗ್ರಾಮದ ರೇಣುಕಮ್ಮ ಗುಳೇದ, ಯಮನೂರಪ್ಪ ಸಣ್ಣ ಹನುಮಪ್ಪ ಅವರ ಮನೆ ಮೇಲಿನ ತಗುಡಿನ ಶೀಟ್‌ಗಳು ಗಾಳಿಯ ರಭಸಕ್ಕೆ ಕಿತ್ತುಕೊಂಡು ಹೋಗಿವೆ. ಮನೆಯಲ್ಲಿದ್ದ ಆಹಾರದ ದವಸ, ಧಾನ್ಯಗಳು ಮಳೆಯಯಲ್ಲಿ ತೊಯ್ದು ನಷ್ಟ ಸಂಭವಿಸಿದೆ. ಕೆಲ ರೈತರ ಜಮೀನುಗಳಲ್ಲಿ ಮಾವಿನಕಾಯಿ ಗಾಳಿ ರಭಸಕ್ಕೆ ನೆಲಕಚ್ಚಿವೆ.

ಹಳ್ಳೇರಹಟ್ಟಿ: ಹಳ್ಳೇರಹಟ್ಟಿಯಲ್ಲಿ ಭೀಮಪ್ಪ ಹಳ್ಳಿ, ಶ್ಯಾಮಣ್ಣ ಹಳ್ಳಿ, ಭೀಮವ್ವ ಹಳ್ಳಿಯವರ ಮನೆಗಳ ಮುಂದೆ ಹಾಕಿದ ತಗಡಿನ ಶೆಡ್‌ಗಳು ಕಿತ್ತು ಹೋಗಿವೆ. ಘಟನಾ ಸ್ಥಳಕ್ಕೆ ಗ್ರಾಮಲೇಕ್ಕಿಗ ಆದಯ್ಯಸ್ವಾಮಿ ಹಿರೇಮಠ, ಪಪಂ ಸದಸ್ಯ ವೀರೇಶ ಭೋವಿ, ಕನಕಪ್ಪ ಸಿದ್ದಾಪುರ ಭೇಟಿ ನೀಡಿ ಪರಿಶೀಲಿಸಿದರು. ತಾವರಗೇರಾ ಮಳೆ ಮಾಪನ ಕೇಂದ್ರದಲ್ಲಿ 11 ಎಂಎಂ ಮಳೆ ಪ್ರಮಾಣ ದಾಖಲಾಗಿದೆ.

60ಕ್ಕೂ ಹೆಚ್ಚು ಮನೆಗಳಿಗೆ ಹಾನಿ:

ಗಂಗಾವತಿ ತಾಲೂಕಿನಾದ್ಯಂತ ಸೋಮವಾರ ರಾತ್ರಿ ಸುರಿದ ಮಳೆ ಗಾಳಿಗೆ ತೀವ್ರ ಹಾನಿಯಾಗಿದ್ದು ಮನೆ ತಗಡು, ಹಂಚು ಹಾರಿ ಹೋಗಿವೆ. ಸಿದ್ದಿಕೇರಿ, ಕಲ್ಲಪ್ಪನಕ್ಯಾಂಪ್‌, ಸೂರ್ಯನಾಯಕನ ತಾಂಡದಲ್ಲಿ ಹೆಚ್ಚು ಹಾನಿಯಾಗಿದೆ. ಮನೆ ತಗಡು, ಹಂಚು ಹಾಗೂ ಗುಡಿಸಲು ಮೇಲಿನ ಚತ್ತು ಕಿತ್ತುಹೋಗಿದ್ದು ಅಪಾರ ಹಾನಿ ಸಂಭವಿಸಿದೆ. ಗಿಡ ಮರಗಳು ನೆಲಕ್ಕುರುಳಿದ್ದು, ಭತ್ತದ ರಾಶಿಗೆ ಮಳೆ ನೀರು ನುಗ್ಗಿದೆ. ಮೂರು ಗ್ರಾಮಗಳಲ್ಲಿ ವಿದ್ಯುತ್‌ ಕಂಬಗಳು ನೆಲಕ್ಕುರುಳಿದ್ದು, ವಿದ್ಯುತ್‌ ಸಂಪರ್ಕ ಕಡಿತವಾಗಿದೆ. ಇದರಿಂದ ಕುಡಿಯುವ ನೀರಿಗೆ ತೊಂದರೆಯುಂಟಾಗಿದೆ. ನಿರಾಶ್ರಿತರಿಗೆ ಸರಕಾರಿ ಶಾಲೆಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ. ಸ್ಥಳಕ್ಕೆ ಕಂದಾಯ ನಿರೀಕ್ಷಕ ಮಂಜುನಾಥ ಸ್ವಾಮೀ ಭೇಟಿ ನೀಡಿ ಹಾನಿಯ ಸಮೀಕ್ಷೆ ನಡೆಸಿದ್ದಾರೆ. ಮಳೆ ಗಾಳಿಯಿಂದ ಹಾನಿ ಗೊಳಗಾದ ಗ್ರಾಮಗಳಿಗೆ ಶಾಸಕ ಪರಣ್ಣ ಮುನವಳ್ಳಿ ಪುತ್ರ ಸಾಗರ ಮುನವಳ್ಳಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿರಾಶ್ರಿತರಿಗೆ ವೈಯಕ್ತಿಕ ನೆರವು ನೀಡಿದರು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

KARADI (2)

Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.