Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Team Udayavani, May 2, 2024, 7:53 PM IST

1-wqqwqw

ಗಂಗಾವತಿ :ಕಾಂಗ್ರೆಸ್ ಪಕ್ಷಕ್ಕೆ ದಲಿತರ ಮತ ಬೇಕು ಮತ್ತು ದಲಿತರ ಹೆಸರಿನಲ್ಲಿ ರೂಪಿಸಿದ ಯೋಜನೆಗಳನ್ನು ಅನ್ಯ ಯೋಜನೆಗೆ ಬಳಸುವ ಮೂಲಕ ದಲಿತ ಸಮಾಜವನ್ನು ಇನ್ನಷ್ಟು ಹಿಂದುಳಿಯುವಂತೆ ಮಾಡಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ. ಕಾಂಗ್ರೆಸ್ ಗೆ ಬುದ್ದಿ ಕಲಿಸಲು ಈ ಬಾರಿ ಬಿಜೆಪಿ ಅಭ್ಯರ್ಥಿಗಳಿಗೆ ಎಲ್ಲಾ ದಲಿತರು ಮತ ನೀಡುವ ಮೂಲಕ ಮತ್ತೊಮ್ಮೆ ಮೋದಿ ಅವರು ಪ್ರಧಾನ ಮಂತ್ರಿಯಾಗಲು ನೆರವಾಗುವಂತೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಮನವಿ ಮಾಡಿದರು.

ನಗರದ ಗಾಂಧಿನಗರ,ಅಂಬೇಡ್ಕರ್ ನಗರ, ಹಿರೇ ಜಂತಕಲ್ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು. ಗಂಗಾ ಕಲ್ಯಾಣ ಯೋಜನೆ, ವಿದ್ಯಾರ್ಥಿ ವೇತನ ಮತ್ತು ದಲಿತ ಸಮಾಜಕ್ಕೆ ಮೀಸಲಿಟ್ಟಿದ್ದ 11000 ಕೋಟಿ ರೂಪಾಯಿಗಳನ್ನು ಸಿದ್ದರಾಮಯ್ಯ ಸರ್ಕಾರ ಬೇರೆ ಯೋಜನೆಗಳಿಗೆ ಬಳಸಿಕೊಂಡಿದೆ. ಇದರಿಂದ ದಲಿತರು ಸಮಾಜದ ಮಕ್ಕಳು ಮತ್ತು ರೈತರಿಗೆ ಬಹಳ ಅನ್ಯಾಯವಾಗಿದೆ. ದಲಿತರ ಹೆಸರಿನಲ್ಲಿ ಮತ ಪಡೆಯುತ್ತಾರೆ.ಅಧಿಕಾರಕ್ಕೆ ಬಂದ ನಂತರ ದಲಿತರನ್ನು ಕಡೆಗಣಿಸುತ್ತಾರೆ. ಪ್ರಧಾನ ಮಂತ್ರಿ ಮೋದಿಯವರು ದಲಿತ ಸಮಾಜ ಸೇರಿದಂತೆ ಒಬಿಸಿ ಸಮಾಜಕ್ಕೆ ಅನೇಕ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದಾರೆ. ಆದ್ದರಿಂದ ಮತ್ತೊಮ್ಮೆ ವಿಶ್ವ ಮೆಚ್ಚಿದ ನಾಯಕ ಮೋದಿ ಅವರು ಪ್ರಧಾನಮಂತ್ರಿಯಾಗಲು ಎಲ್ಲಾ ಸಮಾಜದವರು ಆಶೀರ್ವಾದ ಮಾಡಬೇಕು ಎಂದರು.

ಶಾಸಕ ಗಾಲಿ ಜನಾರ್ದನ ರೆಡ್ಡಿ ಮಾತನಾಡಿ, ದಲಿತರ ಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಜನರಿಗೆ ಮೋಸ ಮಾಡುತ್ತಿದೆ. ದಲಿತರು,ಓಬಿಸಿಗಳನ್ನು ಮುಖ್ಯವಾಹಿನಿಗೆ ತರಲು ಬಿಜೆಪಿ ಸರ್ಕಾರದ ಹಲವು ಯೋಜನೆಗಳ ರೂಪಿಸಿತ್ತು ಕಾಂಗ್ರೆಸ್ ಈಗ ರದ್ದು ಮಾಡಿತು.ಗಂಗಾವತಿಯಲ್ಲಿ ದಲಿತ ಸಮಾಜ ಸೇರಿದಂತೆ ಮನೆ ಇರದೆ ಇರುವ ಸಮಾಜದವರಿಗೆ 10,000 ಮನೆಗಳನ್ನು ಕೇಂದ್ರ ಸರ್ಕಾರದಿಂದ ಪಡೆದು ಅವುಗಳನ್ನು ನಿರ್ಮಿಸಲಾಗುತ್ತದೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ನನ್ನ ವಿರುದ್ಧ ಮಾಡುತ್ತಿರುವ ಆರೋಪ ಹೊಟ್ಟೆ ಕಿಚ್ಚಿನಿಂದ ಕೂಡಿದೆ ಹೊಟ್ಟೆ ಕಿಚ್ಚಿಗೆ ಮದ್ದಿಲ್ಲ ಕ್ಷೇತ್ರದ ಜನರು ನನ್ನ ಅಭಿವೃದ್ಧಿಯನ್ನು ಕಂಡು ಗಂಗಾವತಿಯಲ್ಲಿ ಗೆಲ್ಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಗಂಗಾವತಿಯನ್ನು ಮಾದರಿಯ ನಗರ ಮಾಡಲಾಗುತ್ತದೆ.ಅಂಜನಾದ್ರಿ ಬೆಟ್ಟ ಸೇರಿದಂತೆ ಐತಿಹಾಸಿಕ ಸ್ಥಳಗಳನ್ನು ಅವಧಿಪಡಿಸಲಾಗುತ್ತದೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪರಣ್ಣ ಮನವಳ್ಳಿ, ಬಿಜೆಪಿ ಮುಖಂಡರಾದ ಹುಸೇನಪ್ಪ ಮಾದಿಗ, ಶಿವಪ್ಪ ಮಾದಿಗ, ಬಸವರಾಜ್ ಕಟ್ಟಿಮನಿ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.