ದೈಹಿಕ ಶಿಕ್ಷಣ ಪಾಠಕ್ಕುಂಟು-ಲೆಕ್ಕಕ್ಕಿಲ್ಲ

•16 ವರ್ಷಗಳಿಂದ ದೈಹಿಕ ಶಿಕ್ಷಕರ ನೇಮಕಾತಿಯಿಲ್ಲ •ಕ್ರೀಡಾಕೂಟಕ್ಕೆ ಎರವಲು ಶಿಕ್ಷಕರೇ ಗತಿ

Team Udayavani, Jul 20, 2019, 12:24 PM IST

kopala-tdy-2

ಕುಷ್ಟಗಿ: ಸಮಗ್ರ ಶಿಕ್ಷಣ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಕೊರತೆ ಮುಂದುವರಿದಿದೆ. ಕಳೆದ 16 ವರ್ಷಗಳಿಂದ ದೈಹಿಕ ಶಿಕ್ಷಕರ ಹೊಸ ನೇಮಕಾತಿಯೇ ಇಲ್ಲ. ಪ್ರಸಕ್ತ ಸಾಲಿನ ಕ್ರೀಡಾಕೂಟದ ಆಟೋಟಕ್ಕೆ ಎರವಲು ಶಿಕ್ಷಕರನ್ನು ಅವಲಂಬಿಸುವಂತಾಗಿದೆ.

ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಶಿಕ್ಷಕರ ಮೂಲ ಸೌಲಭ್ಯಗಳ ಕೊರತೆ ನೀಗಿಸುವ ವಿಷಯದಲ್ಲಿ ಸರ್ಕಾರದ ನಿರ್ಲಕ್ಷ್ಯ ಮುಂದುವರಿದಿದ್ದು, ತಾಲೂಕಿನಲ್ಲಿ ದೈಹಿಕ ಶಿಕ್ಷಣ ನಾಮಕೇವಾಸ್ತೆ ಎನ್ನುವಂತಾಗಿದೆ.

ತಾಲೂಕಿನಲ್ಲಿ 36 ಸರ್ಕಾರಿ ಪೌಢಶಾಲೆ, ಹಿರಿಯ-ಕಿರಿಯ ಹಾಗೂ ಟಿಜಿಟಿ ಸೇರಿದಂತೆ ಒಟ್ಟು 182 ಪ್ರಾಥಮಿಕ ಶಾಲೆಗಳಿವೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಕರ 3 ಸ್ಥಾನ ಖಾಲಿ ಇದ್ದರೆ, ಪ್ರಾಥಮಿಕ ಶಾಲೆಗಳಲ್ಲಿ ಮಂಜೂರಾದ 64 ದೈಹಿಕ ಶಿಕ್ಷಕರ ಪೈಕಿ ಕೇವಲ 38 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಡಾ. ಎಲ್.ಆರ್‌. ವೈದ್ಯನಾಥ ವರದಿ ಪ್ರಕಾರ 6ರಿಂದ 10ನೇ ತರಗತಿವರೆಗೆ ದೈಹಿಕ ಶಿಕ್ಷಣವನ್ನು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಡ್ಡಾಯವಾಗಿ ಬೋಧಿಸಬೇಕು ಮತ್ತು ಪ್ರತಿಯೊಂದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕರು ಇರಲೇಬೇಕೆಂಬ ನಿಯಮವಿದೆ. 6ರಿಂದ 10ನೇ ತರಗತಿವರೆಗೆ ದೈಹಿಕ ಶಿಕ್ಷಣ ಪಠ್ಯಕ್ರಮ ಇದೆ. ಆದರೆ ದೈಹಿಕ ಶಿಕ್ಷಕರ ಕೊರತೆಯೇ ಪ್ರಮುಖ ಸಮಸ್ಯೆಯಾಗಿ ಕಾಡುತ್ತಿದೆ.

ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಪಾಠ ಭೋಧನೆ ಬಹುತೇಕ ಶಾಲೆಗಳಲ್ಲಿ ಇತರೆ ಸಹ ಶಿಕ್ಷಕರು ನಡೆಸುವಂತೆ ಸೂಚಿಸಲಾಗಿದೆ. ಇದರಿಂದ ಮಕ್ಕಳಿಗೆ ಪರಿಣಾಮಕಾರಿಯಾಗಿ ದೈಹಿಕ ಶಿಕ್ಷಣ ಬೋಧನೆಯಾಗುತ್ತಿಲ್ಲ ಎಂಬ ಕೊರಗು ಕೇಳಿ ಬಂದಿದೆ.

ಹೊಸ ನೇಮಕ ಮರೀಚಿಕೆ: ಕಳೆದ 16 ವರ್ಷಗಳ ಹಿಂದೆ ದೈಹಿಕ ಶಿಕ್ಷಕರನ್ನು ನೇಮಿಸಿಕೊಂಡಿದ್ದು, ಬಿಟ್ಟರೆ ಇಲ್ಲಿಯವರೆಗೂ ದೈಹಿಕ ಶಿಕ್ಷಕರ ಹೊಸ ನೇಮಕಾತಿ ಇಲ್ಲ. ನಂತರ ಹೊಸದಾಗಿ ಒಬ್ಬ ದೈಹಿಕ ಶಿಕ್ಷಕರನ್ನು ನೇಮಿಸಿದ ಉದಾಹರಣೆ ಇಲ್ಲ. ಶಾಲೆಗಳು ಹಾಗೂ ಮಕ್ಕಳ ಸಂಖ್ಯೆಯ ಅನುಪಾತದಲ್ಲಿ ಹುದ್ದೆ ಮಂಜೂರು ಮಾಡಲಾಗುತ್ತಿದೆ. ಆದರೆ ಹೊಸ ಹುದ್ದೆಗಳ ಮಂಜೂರಾತಿಗೆ ಅನುಸರಿಸುವ ಮಾನದಂಡ ಮೂರು ದಶಕಗಳಿಗಿಂತ ಹಳೆಯದು. ಶಾಲೆ ಮತ್ತು ಮಕ್ಕಳ ಸಂಖ್ಯೆಯಲ್ಲಿ ಅಗಾಧ ರೀತಿಯಲ್ಲಿ ಹೆಚ್ಚಳ ಕಂಡಿದ್ದರೂ, ಅದಕ್ಕೆ ತಕ್ಕಂತೆ ದೈಹಿಕ ಶಿಕ್ಷಕರನ್ನು ಮಂಜೂರು ಮಾಡುವಲ್ಲಿ ಮಾತ್ರ ಸರ್ಕಾರ ಮುತುವರ್ಜಿ ತೋರಿಸಿಲ್ಲ. ಅಷ್ಟೇ ಅಲ್ಲ ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಂಡಿಲ್ಲ.

ಮೈದಾನ ಕೊರತೆ: ಬಹುತೇಕ ಶಾಲೆಗಳಲ್ಲಿ ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮೂಲ ಸೌಲಭ್ಯಗಳ ಕೊರತೆಯೂ ಎದ್ದು ಕಾಣುತ್ತಿದೆ. ಪ್ರತಿ ಶಾಲೆಗಳಿಗೆ ದೈಹಿಕ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಕ್ರೀಡಾ ಸಾಮಗ್ರಿಗಳು ಮತ್ತು ಬೋಧನಾ ಉಪಕರಣಗಳು ಪೂರೈಸುವಂತಿದ್ದರೂ ಗಮನ ಹರಿಸಿಲ್ಲ. ಬಹಳಷ್ಟು ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ನಡೆಸುವುದಕ್ಕೂ ಜಾಗ ಇಲ್ಲ. ಇನ್ನೂ ಆಟದ ಮೈದಾನವಂತೂ ಕನಸಿನ ಮಾತಾಗಿದೆ. ಜಾಗ ಇರುವ ಶಾಲೆಗಳಲ್ಲಿ ದೈಹಿಕ ಶಿಕ್ಷಕರಿಲ್ಲ. ಮೈದಾನ ಅಭಿವೃದ್ಧಿಗೊಂಡಿಲ್ಲ ಎನ್ನುವ ಸಾರ್ವಜನಿಕರ ದೂರುಗಳಿಗೆ ಸ್ಪಂದನೆ ಇಲ್ಲದಂತಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಶಾಲಾ ಮೈದಾನಗಳ ಅಭಿವೃದ್ಧಿಗೆ ಸಾಕಷ್ಟು ಹಣ ಇದ್ದಾಗ್ಯೂ ಸಮರ್ಪಕ ರೀತಿಯಲ್ಲಿ ಬಳಸಿಕೊಂಡಿಲ್ಲ ಎನ್ನುವ ಅಸಮಾಧಾನ ಕೂಗು ಜನರಲ್ಲಿದೆ.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.