ಬೆಳಗಾವಿ ಜಿಲ್ಲೆ ಇಬ್ಭಾಗ ಮಾಡುವುದಿಲ್ಲ: ಕಾರಜೋಳ

ನೆರೆ ಹಾನಿಗೆ ಹಣದ ಕೊರತೆಯಿಲ್ಲ ಕೇಂದ್ರದಿಂದ ಪರಿಹಾರ ಕೇಳಿದ್ದೇವೆ

Team Udayavani, Sep 20, 2019, 8:50 PM IST

u-3

ಕೊಪ್ಪಳ: ಬೆಳಗಾವಿ ಜಿಲ್ಲೆಯಲ್ಲಿ ಗಡಿ ಸಮಸ್ಯೆಯಿದೆ. ಅದೊಂದು ಸೂಕ್ಷ್ಮ ವಿಚಾರ. ಆ ಜಿಲ್ಲೆಯನ್ನು ನಾವು ಇಬ್ಭಾಗ ಮಾಡಲ್ಲ. ಮಾಡುವುದೂ ಇಲ್ಲ. ಇದನ್ನು ಪ್ರತಿಯೊಬ್ಬ ಕನ್ನಡಿಗರು ತಿಳಿದುಕೊಳ್ಳಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಇನ್ನೂ ಬಳ್ಳಾರಿಯಿಂದ ವಿಜಯನಗರ ಜಿಲ್ಲೆಯನ್ನಾಗಿ ಮಾಡುವ ವಿಚಾರಕ್ಕೆ ನಾನು ಬೀದಿಯಲ್ಲಿ ನಿಂತುಕೊಂಡು ಹೇಳಲ್ಲ. ಆ ವಿಷಯ ಸಚಿವ ಸಂಪುಟಕ್ಕೆ ಬರುತ್ತೆ. ಆಗ ನನ್ನ ಅಭಿಪ್ರಾಯ ತಿಳಿಸುತ್ತೇನೆ ಎಂದರು.

ಕುಮಾರಸ್ವಾಮಿ ಅವರು ಬಿಎಸ್‌ವೈ ಪತ್ನಿ ಸಾವಿನ ಬಗ್ಗೆ ಪ್ರಸ್ತಾಪಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಯಾರೂ ವಯಕ್ತಿಕ ವಿಷಯ ಮಾತನಾಡಬಾರದು. ಅದರ ಬಗ್ಗೆ ನಾನು ಚರ್ಚೆ ಮಾಡಲ್ಲ ಎಂದರು.

ಸಿದ್ದರಾಮಯ್ಯ ಅವರು ನೆರೆ ಹಾನಿ ಸಂಬಂಧ ಬಿಜೆಪಿಗರಿಗೆ ಕೇಳಲು ಧಮ್ ಇಲ್ಲ ಎಂದಿದ್ದಕ್ಕೆ ಪ್ರತಿಕ್ರಿಯಿಸಿದ ಕಾರಜೋಳ, ಈ ಹಿಂದೆ 1994-95ರ ಅವಧಿಯಲ್ಲಿ ರಾಜ್ಯದಲ್ಲಿ ನೆರೆ ಬಂದಾಗ ಸಿದ್ದರಾಮಯ್ಯ ಅವರು ಏಷ್ಟು ಪರಿಹಾರ ಕೊಟ್ಟಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಆಗ ನೆರೆ ಹಾನಿಯಾದಾಗ ಜನರಿಗೆ ನಯಾಪೈಸೆ ಪರಿಹಾರ ಕೊಟ್ಟಿಲ್ಲ. 2009- 10ನೇ ಸಾಲಿನಲ್ಲೂ ನೆರೆ ಹಾವಳಿಯಾಗಿತ್ತು. ಆಗ ನಾವು ಪರಿಹಾರ ಕೊಟ್ಟಿದ್ದೇವೆ. ಕೇಂದ್ರದ ಎನ್‌ಡಿಆರ್‌ಎಫ್ ನಿಯಮಾವಳಿ 3800 ರೂ. ಪರಿಹಾರ ಕೊಡಲು ಅವಕಾಶ ಇದೆ. ಆದರೆ ಇಷ್ಟು ಹಣದಲ್ಲಿ ಜನರಿಗೆ ಏನೂ ನೆರವಾಗಲ್ಲ ಎಂಬುದನ್ನರಿತು ನಾವು ಪ್ರತಿ ನೆರೆ ಹಾನಿ ಅನುಭವಿಸಿದ ಕುಟುಂಬಕ್ಕೆ ತಲಾ 10 ಸಾವಿರ ರೂ. ಕೊಟ್ಟಿದ್ದೇವೆ. ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಕೊಡಲು ನಿರ್ಧರಿಸಿದೆ. ಮನೆ ಕಟ್ಟಿಕೊಳ್ಳಲು ಮೊದಲ ಕಂತಿನಲ್ಲಿ 1 ಲಕ್ಷ ರೂ. ಕೊಡಲು ನಿರ್ಧರಿಸಿದ್ದೇವೆ. ಪ್ರಸ್ತುತ ಸಾವಿರ ಕೋಟಿ ರೂ. ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿಡೆ ಎಂದರು.

ಬೆಳೆ ಪರಿಹಾರ ಕೊಡಲು ಸರ್ವೆ ಮಾಡಿಸಿದ್ದೇವೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ನಡಿ 1 ಹೆಕ್ಟೇರ್ ನೀರಾವರಿಗೆ 13600 ರೂ., ಒಣ ಬೇಸಾಯಕ್ಕೆ 6600 ರೂ. ಪ್ರತಿ ಹೆಕ್ಟೇರ್, ದ್ರಾಕ್ಷಿ, ದಾಂಳಿಂಬೆ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 18 ಸಾವಿರ ರೂ. ಪರಿಹಾರ ಕೊಡಲು ನಿರ್ಧರಿಸಿದೆ. ಕೇಂದ್ರಕ್ಕೆ 32 ಸಾವಿರ ಕೋಟಿ ರೂ. ನೆರೆ ಹಾನಿಯಾಗಿದೆ ಎಂದು ಕೇಳಿದ್ದೇವೆ. ಪ್ರಧಾನಿ ಈಗಾಗಲೆ ಅಧಿಕಾರಿಗಳಿಂದ ವರದಿ ಪಡೆದಿದ್ದಾರೆ. ನೆರೆ ಹಾನಿಗೆ ನಮ್ಮಲ್ಲಿ ಹಣದ ಕೊರತೆಯಿಲ್ಲ. ಬೇಕಾದಷ್ಟು ಅನುದಾನ ಇದೆ. ನಮ್ಮ ಖಜಾನೆಯ ಹಣ ಖರ್ಚು ಮಾಡಲು ಮುಂದಾಗಿದ್ದೇವೆ ಎಂದರು.

ನನ್ನ ಕ್ಷೇತ್ರದಲ್ಲಿ ಕೆಲವರು ಸುಮ್ಮನೆ ಆರೋಪ ಮಾಡಿ ಪರಿಹಾರ ಬಂದಿಲ್ಲ ಎಂದಿದ್ದಾರೆ. ಅದು ಸತ್ಯಕ್ಕೆ ದೂರವಾದದ್ದು, ನಾವು ಪರಿಹಾರದಲ್ಲಿ ತಾರತಮ್ಯ ಮಾಡಿಲ್ಲ. ದಾಖಲೆಗಳ ಆಧರಿಸಿ ನಾವು ಪರಿಹಾರ ನೀಡಿದ್ದೇವೆ. ಕ್ಷೇತ್ರದಲ್ಲಿನ ಎಲ್ಲರೂ ನನ್ನ ಬೆಂಬಲಿಗರೆ ಎಂದರು.

ಮಾಜಿ ಸಚಿವ ಬಸವರಾಜ ರಾಯರಡ್ಡಿ ಅವರೇ ಈ ಹಿಂದೆ ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಆಗಬೇಕು. ಹೈದ್ರಾಬಾದ್ ನಿಜಾಮರ ಸಂಕೋಲೆಯ ಹೆಸರು ಕೈ ಬಿಡಬೇಕು ಎಂದು ಹೇಳಿದ್ದಾರೆ. ಈ ನಾಡಿನ ಬಹು ದಿನದ ಬೇಡಿಕೆಯ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದೇವೆ. ಈ ನಾಡಿನ ಶರಣರ ಕ್ರಾಂತಿ, ಬಸವಣ್ಣನವರ ಕಲ್ಯಾಣ ಕ್ರಾಂತಿಯ ಆಸೆಯದಿಂದಾಗಿ ಜನರ ಭಾವನೆಗೆ ಸ್ಪಂದಿಸಿ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿದ್ದೇವೆ ಎಂದರು.

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ರಾಜ್ಯದಲ್ಲಿ 257ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ: ಐವರು ಸಾವು

ರಾಜ್ಯದಲ್ಲಿ 257ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ: ಐವರು ಸಾವು

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ

ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ 7 ಕೋವಿಡ್ ಪ್ರಕರಣ ಪತ್ತೆ

ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ 7 ಕೋವಿಡ್ ಪ್ರಕರಣ ಪತ್ತೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.