
ಗಂಗಾವತಿ: ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ವಶಕ್ಕೆ
Team Udayavani, Jul 17, 2021, 3:15 PM IST

ಗಂಗಾವತಿ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಕಂದಾಯ ಅಧಿಕಾರಿಗಳು ದಾಳಿ ನಡೆಸಿ ಟ್ರ್ಯಾಕ್ಟರ್ ವಶಪಡಿಸಿಕೊಂಡ ಪ್ರಕರಣ ತಾಲ್ಲೂಕಿನ ದೇವಿ ನಗರದ ಬಳಿ ಜರುಗಿದೆ.
ತುಂಗಭದ್ರಾ ನದಿಯಿಂದ ಚಿಕ್ಕಜಂತಕಲ್ ಅಯೋಧ್ಯಾ ಭಾಗದಲ್ಲಿ ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗಳ ಮೇಲೆ ತಹಶೀಲ್ದಾರ್ ಯು.ನಾಗರಾಜ ನೇತೃತ್ವದಲ್ಲಿ ದಾಳಿ ನಡೆಸಿ ಟ್ರ್ಯಾಕ್ಟರ್ ವಶಕ್ಕೆ ಪಡೆಯಲಾಗಿದೆ. ಅಧಿಕಾರಿಗಳ ಕಟ್ಟೆಚ್ಚರದ ಮಧ್ಯೆಯೂ ತುಂಗಭದ್ರಾ ನದಿಪಾತ್ರದಲ್ಲಿ ನಿರಂತರವಾಗಿ ಮರಳು ಅಕ್ರಮ ದಂಧೆ ನಡೆಯುತ್ತಿದೆ. ಎತ್ತಿನ ಬಂಡಿ, ಟ್ರ್ಯಾಕ್ಟರ್, ಮಿನಿ ಲಾರಿಗಳಲ್ಲಿ ಮರಳನ್ನು ಅಂತರ್ ಜಿಲ್ಲಾ ಮಟ್ಟದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿದೆ.
ಇದನ್ನೂ ಓದಿ:ಯಡಿಯೂರಪ್ಪ ಜೊತೆ ಆರು ದೊಡ್ಡ ದೊಡ್ಡ ಬ್ಯಾಗ್ ಗಳೂ ದೆಹಲಿಗೆ ಹೋಗಿದೆ!: ಎಚ್ ಡಿಕೆ ಹೊಸ ಬಾಂಬ್
ಶನಿವಾರ ಬೆಳಿಗ್ಗೆ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿ ದೇವಿ ನಗರದ ಪೆಟ್ರೋಲ್ ಬಂಕ್ ಹತ್ತಿರ ಟ್ರ್ಯಾಕ್ಟರ್ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ದಾಳಿಯಲ್ಲಿ ಕಂದಾಯ ನಿರೀಕ್ಷಕ ಹನುಮಂತಪ್ಪ ಹಾಗೂ ಇಲಾಖೆಯ ಅಧಿಕಾರಿಗಳು ಇದ್ದರು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

Shivamogga: ಸಿಡಿಲು ಬಡಿದು ಮಹಿಳೆ ಮೃತ್ಯು

Koratagere ಟೋಲ್ ತೆರವಿಗೆ ಗಡುವು ನೀಡಿದ ಸಚಿವ ಕೆ.ಎನ್.ರಾಜಣ್ಣ

ಪಣಜಿ: ಜೂನ್ 1ರಿಂದ ಮೀನುಗಾರಿಕೆ ನಿಷೇಧ… ದಡ ಸೇರುತ್ತಿವೆ ಬೋಟುಗಳು