ನೀರು ಪೂರೈಕೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಧರಣಿ

Team Udayavani, May 10, 2019, 2:49 PM IST

kopala-tdy-2…

ಕೊಪ್ಪಳ: ಕುಣಕೇರಿ ತಾಂಡಾಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.

ಕೊಪ್ಪಳ: ತಾಲೂಕಿನ ಕುಣಿಕೇರಿ ತಾಂಡಾದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸಿದ್ದು, ಜಿಲ್ಲಾಡಳಿತ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿ ಸ್ಥಳೀಯ ಜನರು ಸೇರಿದಂತೆ ಕರವೇ ಯುವ ಸೈನ್ಯದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿತು.

ತಾಂಡಾದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸಿದೆ. ಆದರೆ ಸಂಬಂಧಪಟ್ಟ ಯಾರೊಬ್ಬರು ಈ ಬಗ್ಗೆ ಗಮನ ನೀಡುತ್ತಿಲ್ಲ. ಸುಮಾರು 15 ವರ್ಷಗಳ ಹಿಂದೆ ಬೃಹತ್‌ ಟ್ಯಾಂಕ್‌ ನಿರ್ಮಾಣವಾಗಿದ್ದು, ಈ ಟ್ಯಾಂಕರ್‌ ಕಾಮಗಾರಿ ಕೂಡ ಕಳಪೆಯಾಗಿದೆ. ಟ್ಯಾಂಕ್‌ನಿಂದ ಗ್ರಾಮಕ್ಕೆ ಸರಿಯಾಗಿ ನೀರನ್ನು ಪೂರೈಸುತ್ತಿಲ್ಲ. ಸಮರ್ಪಕ ಕುಡಿವ ನೀರಿನ ವ್ಯವಸ್ಥೆ ಮಾಡದ ಕಾರಣ ಸ್ಥಳೀಯರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.

2001-02ನೇ ಸಾಲಿನಲ್ಲಿ ಬಂದ ಅನುದಾನದಲ್ಲಿ ತುಂಗಭದ್ರಾ ಜಲಾಶಯದಿಂದ ಹೊಸಳ್ಳಿ ಮಾರ್ಗವಾಗಿ ಕರೆಯಗುಡ್ಡದ ಹತ್ತಿರ ನೀರು ಸಂಗ್ರಹ ಮಾಡಲಾಗುತ್ತಿದೆ. ಅಲ್ಲಿಂದ 3-4 ಗ್ರಾಮಕ್ಕೆ ಹಾದು ಹೋಗಿರುವ ಪೈಪ್‌ಲೈನ್‌ ಕಾಸನಕಂಡಿ ಮಾರ್ಗವಾಗಿ ಹಿರೇಬಗನಾಳ ರಸ್ತೆಗಳ ಮೂಲಕ ಅಲ್ಲಾನಗರ ಗ್ರಾಮಕ್ಕೆ ಹೋಗಿ ಹಾಲವರ್ತಿ ಗ್ರಾಮದ ರಸ್ತೆಯ ಮೂಲಕ ಕುಣಿಕೇರಿ ತಾಂಡಕ್ಕೆ ಕುಡಿವ ನೀರಿನ ಪೈಪ್‌ ಬಂದಿದೆ. ಆದರೂ ಕುಡಿವ ನೀರು ಪೂರೈಕೆಯಾಗುತ್ತಿಲ್ಲ. ಕುಣಿಕೇರಿ ತಾಂಡಾ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಅಂತರ್ಜಲ ಕಡಿಮೆಯಾಗಿ ಕೊಳವೆ ಬಾವಿ ಕೊರೆಸಿದರೂ ನೀರು ದೊರೆಯುತ್ತಿಲ್ಲ. ಕೂಡಲೇ ಕುಡಿವ ನೀರಿನ ಸಮಸ್ಯೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಸಂಘಟನೆ ಮುಖಂಡ ಶರಣಪ್ಪ ಚೌಡ್ಕಿ, ಮುಖಂಡರಾದ ನಂದಯ್ಯ ಹಿರೇಮಠ, ಹುಲಿಗೇಶ ಹಾಲವರ್ತಿ, ಮಂಜುನಾಥ ರಾಠೊಡ, ಪ್ರಕಾಶ ಬಾಳಮ್ಮನವರ, ಕೃಷ್ಣಕುಮಾರ ಮಾಳಗಿ, ಚನ್ನಪ್ಪ ಮಾಳಗಿ, ಪ್ರತಾಪ ಹ್ಯಾಟಿ, ಭರತ ರಾಠೊಡ, ರವಿ ರಾಠೊಡ, ಅನಂತ ಕುಮಾರ, ರಾಮಚಂದ್ರ ಇತರರು ಪಾಲ್ಗೊಂಡಿದ್ದರು.

•ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

16

Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-koppala

ತೈಲ ಬೆಲೆ ಏರಿಕೆ ಖಂಡಿಸಿ ಜೂ.20 ರಂದು ವಿಧಾನಸಭಾ ಕ್ಷೇತ್ರವಾರು ಪ್ರತಿಭಟನೆ: ಗುಳಗಣ್ಣನವರ್

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

8-kushtagi

Kushtagi: ಅರೆಸ್ಟ್ ಮಾಡುವುದಾದರೆ 3 ಸಾವಿರ ಅಂಗನವಾಡಿ ಕಾರ್ಯಕರ್ತೆಯರನ್ನು ಅರೆಸ್ಟ್ ಮಾಡಿ

8-

Tawargera: ವಿದ್ಯುತ್ ತಂತಿ ತಗುಲಿ ರೈತ ಮತ್ತು ಎತ್ತು ಸಾವು

1-asdsadsad

Bakrid ಶಾಂತಿಸಭೆ: ಗಂಗಾವತಿಯಲ್ಲಿ ಮುಸ್ಲಿಂ ಮುಖಂಡರ ಪರಸ್ಪರ ವಾಗ್ವಾದ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

16

Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

16-koppala

ತೈಲ ಬೆಲೆ ಏರಿಕೆ ಖಂಡಿಸಿ ಜೂ.20 ರಂದು ವಿಧಾನಸಭಾ ಕ್ಷೇತ್ರವಾರು ಪ್ರತಿಭಟನೆ: ಗುಳಗಣ್ಣನವರ್

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.