ಹನಿ ಹನಿ ನೀರಿಗೂ ತತ್ವಾರ!

Team Udayavani, May 10, 2019, 2:43 PM IST

kopala-tdy-1

ದೋಟಿಹಾಳ: ಅಡವಿಬಾವಿ ಗ್ರಾಮಸ್ಥರು ನೀರಿಗಾಗಿ ಟ್ಯಾಂಕರ್‌ ಮುಂದೆ ಕೊಡಗಳನ್ನು ಇಟ್ಟು ಕಾಯುತ್ತಿರುವುದು.

ದೋಟಿಹಾಳ: ಹೆಚ್ಚುತ್ತಿರುವ ಬಿಸಿಲಿನಿಂದ ಕಾಯ್ದು ಕೆಂಪಾದ ಭೂಮಿ, ಹನಿ ನೀರಿಗೂ ತತ್ವಾರ, ಬತ್ತಿದ ಕೆರೆ, ಬಾವಿ, ಹಳ್ಳ. ಅಂತರ್ಜಲ ಪಾತಾಳ ಕಂಡಿದ್ದು, ಕೊಳೆವೆಬಾವಿಗಳ ಬಾಯಿ ಒಣಗಿವೆ. ಹೀಗಾಗಿ ಅನೇಕ ಹಳ್ಳಿಗಳಲ್ಲಿ ಹನಿ ನೀರಿಗೂ ಜತರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಜುಮಲಾಪುರ ಗ್ರಾಪಂನ ಅಡವಿಬಾವಿ, ಸಾಸ್ವಿಹಾಳ ಗ್ರಾಮಗಳಲ್ಲಿ ನೀರಿನ ಸಮಸ್ಯೆ ವಿಪರೀತವಾಗಿದ್ದು, ಇಲ್ಲಿಯ ಜನರು ಸುಮಾರು ಎರಡು ತಿಂಗಳಿಂದ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಜನರು ನೀರಿಗಾಗಿ ಟ್ಯಾಂಕ್‌ ಮುಂದೆ ಸಾಲುಸಾಲು ಬಿಂದಿಗೆಗಳನ್ನು ಇಟ್ಟು ಕಾಯುವ ದೃಶ್ಯ ಸಾಮಾನ್ಯವಾಗಿದೆ.

ಅಡವಿಬಾವಿ ಗ್ರಾಮದಲ್ಲಿ ಸುಮಾರು 240 ಮನೆಗಳಿದ್ದು, ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಬೇಸಿಗೆ ಆರಂಭವಾದಾಗಿನಿಂದ ನೀರಿನ ಸಮಸ್ಯೆ ಉಲ್ಭವಾಗುತ್ತಿದೆ. ಗ್ರಾಪಂ, ಜಿಪಂ ಆಡಳಿತ ಹಾಗೂ ಶಾಸಕರು ಜನಪ್ರತಿನಿಧಿಗಳು ಕೆಲವೆಡೆ ಬೋರ್‌ವೆಲ್ ಕೊರೆಸಿದರು ಭೂಮಿಯಲ್ಲಿ ಹನಿ ನೀರೂ ಸಿಗುತ್ತಿಲ್ಲ. ಭೌಗಳಿಕವಾಗಿ ಈ ಗ್ರಾಮಗಳು ಗುಡದ ಮೇಲೆ ಇರುವುದರಿಂದ ಈ ಭಾಗದಲ್ಲಿ ನೀರು ಸಿಗುವುದು ಕಷ್ಟ ಸಾಧ್ಯ ಎನ್ನಲಾಗುತ್ತಿದೆ.

ಎರಡು ತಿಂಗಳಿಂದ ಗ್ರಾಮಕ್ಕೆ ಟ್ಯಾಂಕರ್‌ಗಳ ಮೂಲಕ ಕುಡಿಯಲು ಮತ್ತು ಬಳಕೆಗೆ ನೀರು ಪೂರೈಸಲಾಗುತ್ತಿದೆ. ನೀರಿನ ಟ್ಯಾಂಕರ್‌ ಬರುವವರೆಗೂ ಕಾದು ಕೂರುವ ಸ್ಥಿತಿ ಇದೆ. ಸಾಮಾನ್ಯವಾಗಿ ರೈತರೇ ಹೆಚ್ಚಿದ್ದು, ತಮ್ಮ ಕೆಲಸ, ಕಾರ್ಯಗಳನ್ನು ಬಿಟ್ಟು ನೀರಿಗಾಗಿ ಕಾಯುವ ಪರಿಸ್ಥಿತಿ ಇದೆ. ಗ್ರಾಮಕ್ಕೆ ನೀರಿನ ಟ್ಯಾಂಕರ್‌ ಬರುವ ವೇಳೆಗೆ ನೂರಾರು ಬಿಂದಿಗೆಗಳನ್ನು ಸರತಿ ಸಾಲಿನಲ್ಲಿ ಇಟ್ಟಿರುತ್ತಾರೆ. ಇದರ ಮಧ್ಯೆ ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನರಿಗೆ ಸರಿಯಾಗಿ ನೀರು ಸಿಗುತ್ತಿಲ್ಲ. ವಿದ್ಯುತ್‌ ಯಾವಾಗ ಬರುತ್ತದೋ ಆಗ ನೀರು ಬರುತ್ತದೆ. ಅನ್ಯ ಕೆಲಸಕ್ಕೆ ತೆರಳಿದರೆ ನಮಗೆ ನೀರು ಸಿಗುವುದಿಲ್ಲ. ಆದ್ದರಿಂದ ಹೊಲದ ಕೆಲಸ ಬಿಟ್ಟು ನೀರಿಗಾಗಿ ಕಾಯುತ್ತ ಕೂರುವುದು ಅನಿವಾರ್ಯವಾಗಿದೆ ಎನ್ನುತ್ತಾರೆ ಗ್ರಾಮಸ್ಥರು.

ಅಮರಾಪುರ ಗ್ರಾಮಸ್ಥರು ಸದ್ಯ ಕುಡಿಯಲು ಹಾಗೂ ಬಳಕೆಗೆ ಗ್ರಾಮದ ಅನತಿ ದೂರದಲ್ಲಿರುವ ತೋಟಗಳಲ್ಲಿನ ಬೋರ್‌ವೆಲ್ ಅವಲಂಬಿಸಿದ್ದಾರೆ. ಇಲ್ಲಿಯೂ ಕೆಲ ತಿಂಗಳಿಂದ ನೀರಿಗಾಗಿ ಪರದಾಟ ಶುರುವಾಗಿದೆ. ವಿದ್ಯುತ್‌ ಯಾವಾಗ ಬರುತ್ತದೋ ಆಗ ಮಾತ್ರ ನೀರು. ಬೆಳಗ್ಗಿನಿಂದ ಎಲ್ಲ ಕೆಲಸ ಬಿಟ್ಟು ನೀರಿಗಾಗಿ ಕಾದು ಕೂರಬೇಕಾಗಿದೆ ಎಂದು ಮಹಿಳೆಯರು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

•ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

Judge

ಒಂದೇ ದಿನ 600 ಅರ್ಜಿ ವಿಚಾರಣೆ! ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ವಿಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

8-kushtagi

Kushtagi: ಅರೆಸ್ಟ್ ಮಾಡುವುದಾದರೆ 3 ಸಾವಿರ ಅಂಗನವಾಡಿ ಕಾರ್ಯಕರ್ತೆಯರನ್ನು ಅರೆಸ್ಟ್ ಮಾಡಿ

8-

Tawargera: ವಿದ್ಯುತ್ ತಂತಿ ತಗುಲಿ ರೈತ ಮತ್ತು ಎತ್ತು ಸಾವು

1-asdsadsad

Bakrid ಶಾಂತಿಸಭೆ: ಗಂಗಾವತಿಯಲ್ಲಿ ಮುಸ್ಲಿಂ ಮುಖಂಡರ ಪರಸ್ಪರ ವಾಗ್ವಾದ

9-dotihala-1

Dotihala: ಬಸವಣ್ಣ ಮೂರ್ತಿಯ ಮುಂದೇ ಶಿವ; ವಿಶಿಷ್ಟ ದಿಡಗಿನ ಬಸವೇಶ್ವರ ದೇವಸ್ಥಾನ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.