ರಾಜಕೀಯ ಪುನರ್ ಜನ್ಮ?; ಸರ್ವ ಸಿದ್ಧತೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ

ಗಂಗಾವತಿಯಲ್ಲಿ ಮನೆ ಮಾಡಿದ ಗಣಿಧಣಿ; ವಿಧಾನಸಭೆಗೆ ಸ್ಪರ್ಧೆ ಸಾಧ್ಯತೆ

Team Udayavani, Dec 5, 2022, 6:36 PM IST

Reddy

ಗಂಗಾವತಿ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಳ್ಳಾರಿಯ ಮನೆಯಲ್ಲಿ ಖಾಯಂ ಆಗಿ ವಾಸ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶೀಘ್ರವೇ ಗಂಗಾವತಿಯಲ್ಲಿ ಖರೀದಿಸಿರುವ ಮನೆಯಲ್ಲಿ ವಾಸ ಮಾಡಲು ಮಾಜಿ ಸಚಿವ ಹಾಗೂ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ನಿರ್ಧರಿಸಿದ್ದಾರೆ. ಗಂಗಾವತಿಯಿಂದ ಅಸೆಂಬ್ಲಿಗೆ ಸ್ಪರ್ಧೆ ಮಾಡುತ್ತಾರೆ ಎನ್ನುವ ಉಹಾಪೋಹಾಗಳಿಗೆ ಸೋಮವಾರ ತೆರೆ ಎಳೆದಿದ್ದಾರೆ.

ಗಂಗಾವತಿ ಅಥವಾ ಆನೆಗೊಂದಿ ಭಾಗದಲ್ಲಿ ರೆಡ್ಡಿ ಮನೆ ಮಾಡಿ ವಾಸ ಮಾಡಲಿದ್ದಾರೆಂಬ ಸುದ್ದಿ ಕಳೆದ ಒಂದು ವರ್ಷದಿಂದಲೂ ಚಾಲ್ತಿಯಲ್ಲಿತ್ತು. ಕನಕಗಿರಿ ರಸ್ತೆಯಲ್ಲಿರುವ ಕ್ರಿಯೇಟಿವ್ ಪಾರ್ಕ್ ಲೇಔಟ್‌ನಲ್ಲಿ ಐದು ಬೆಡ್ ರೂಂಗಳಿರುವ ಬೃಹತ್ ಬಂಗಲೆ, ಇದಕ್ಕೆ ಹೊಂದಿಕೊಂಡಿರುವ ಮೂರು ಖಾಲಿ ನಿವೇಶನ ಖರೀದಿಸಿದ್ದು ವಾಹನಗಳ ನಿಲುಗಡೆಗಾಗಿ ಪಕ್ಕದಲ್ಲಿರುವ ಮೂರು ಎಕರೆ ಗದ್ದೆಯನ್ನು ಲೀಜ್ ಗೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

2008 ರಲ್ಲಿ ಗಾಲಿ ಕುಟುಂಬ ಹಾಗೂ ಸಚಿವ ಬಿ.ಶ್ರೀರಾಮುಲು ಇಡೀ ಸರಕಾರದ ಪ್ರಮುಖ ಹುದ್ದೆಗಳಲ್ಲಿದ್ದು ಆಡಳಿತ ನಡೆಸಿದ್ದರು. ಗಣಿಹಗರಣದ ಕೇಸ್‌ಗಳಿಂದಾಗಿ ಮಾಜಿ ಸಚಿವ ರೆಡ್ಡಿಯವರಿಗೆ ಜೈಲು ಶಿಕ್ಷೆಯಾಗಿದ್ದು ಜಾಮೀನಿನ ಮೇಲೆ ಸುಪ್ರೀಂಕೋರ್ಟ್ ನಿರ್ದೇಶನದಂತೆ ಬಳ್ಳಾರಿಯ ಹೊರಗಿನ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಾರೆ. ಈ ಮಧ್ಯೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಹೊಂದಿರುವ ರೆಡ್ಡಿ ಕರ್ಮ ಭೂಮಿ ಬಳ್ಳಾರಿಯನ್ನು ಬಿಟ್ಟು ಬಿಜೆಪಿಯಿಂದ ಗಂಗಾವತಿ ಅಥವಾ ಕುಷ್ಟಗಿ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಂಗಿತವನ್ನು ಆಪ್ತರಲ್ಲಿ ವ್ಯಕ್ತಪಡಿಸಿದ್ದಾರೆನ್ನಲಾಗಿದ್ದು, ಅದಕ್ಕಾಗಿಯೇ ಗಂಗಾವತಿಯ ಕನಕಗಿರಿ ರಸ್ತೆಯಲ್ಲಿ ವಿಶಾಲವಾದ ಮನೆಯನ್ನು ಖರೀದಿಸಿದ್ದಾರೆ.

ತಾಲೂಕಿನ ಪಂಪಾಸರೋವರ, ವಾಲೀಕಿಲ್ಲಾ ಆದಿಶಕ್ತಿ ದೇಗುಲ ಮತ್ತು ಅಂಜನಾದ್ರಿ ಬೆಟ್ಟಕ್ಕೆ ಪದೇ ಪದೇ ಸಚಿವ ಬಿ.ಶ್ರೀರಾಮುಲು ಅವರ ಜತೆ ಆಗಮಿಸುವ ರೆಡ್ಡಿಯವರು ಗಂಗಾವತಿ ತಾಲೂಕಿನ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದಾರೆ. ಪ್ರವಾಸೋದ್ಯಮ ಸಚಿವರಾಗಿದ್ದ ಸಂದರ್ಭದಲ್ಲಿ ಹಂಪಿ ಉತ್ಸವದ ಜತೆ ಆನೆಗೊಂದಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಿದ್ದರು. ಆಪ್ತ ಸಚಿವ ಬಿ.ಶ್ರೀರಾಮುಲು ಜಿರ್ಣೋದ್ಧಾರ ಮಾಡುತ್ತಿರುವ ಪಂಪಾಸರೋವರ ಮತ್ತು ವಾಲೀಕಿಲ್ಲಾ ಆದಿಶಕ್ತಿ ದೇಗುಲಗಳಿಗೆ ಆಗಾಗ ಭೇಟಿ ನೀಡಿ ನಿರ್ಮಾಣದ ಕುರಿತು ಸಲಹೆ ನೀಡಿದ್ದಾರೆ.

ಗಂಗಾವತಿ ಮತ್ತು ಕುಷ್ಟಗಿ ಕ್ಷೇತ್ರಗಳಲ್ಲಿ ಇತರೆ ಸಮುದಾಯದ ಮತದಾರರ ಜತೆಗೆ ರಡ್ಡಿ ಮತ್ತು ಹಿಂದುತ್ವದ ಆಧಾರದಲ್ಲಿ ಮತಗಳ ಸಂಖ್ಯೆ ಹೆಚ್ಚಿರುವುದರಿಂದ ಎರಡು ಕ್ಷೇತ್ರಗಳ ಮೇಲೆ ರಡ್ಡಿ ಆಪ್ತರ ಕಣ್ಣು ಬಿದ್ದಿದ್ದು ಶೀಘ್ರವೇ ಗಂಗಾವತಿಯಲ್ಲಿ ಮನೆಯ ಗೃಹಪ್ರವೇಶ ನಡೆಸುವ ಯೋಜನೆಯಲ್ಲಿದ್ದಾರೆ.

ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸುರಕ್ಷಿತವಾಗಿ ಗೆಲ್ಲಲು ಅನುಕೂಲವಾಗಿರುವ ಕ್ಷೇತ್ರಗಳ ಸರ್ವೇ ನಡೆಸಿದ್ದು ಈ ಪೈಕಿ ಕುಷ್ಟಗಿ ಕ್ಷೇತ್ರವೂ ಒಂದಾಗಿದೆ. ಈ ಕ್ಷೇತ್ರದಿಂದ ಬಿಜೆಪಿ ಮಾಜಿ ಸಚಿವ ಜನಾರ್ದನ ರೆಡ್ಡಿಯವರನ್ನು ನಿಲ್ಲಿಸುವ ಯೋಜನೆ ರೂಪಿಸಿದೆ ಎನ್ನಲಾಗುತ್ತಿದ್ದು. ಸಿದ್ದರಾಮಯ್ಯನವರನ್ನು ಚಾಮುಂಡಿ ಕ್ಷೇತ್ರದಲ್ಲಿ ಸೋಲಿಸಿದ ತಂತ್ರಗಳನ್ನು ಕುಷ್ಟಗಿ ಕ್ಷೇತ್ರದಲ್ಲಿ ಬಿಜೆಪಿ ಅಳವಡಿಸಿರುವುದಾಗಿ ತಿಳಿದು ಬಂದಿದೆ. ರೆಡ್ಡಿ ರಾಜಕೀಯ ತಂತ್ರಗಳನ್ನು ರೂಪಿಸುವಲ್ಲಿ ಪರಿಣಿತರಾಗಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪಕ್ಷದ ಮುಖಂಡರು ಗಾಲಿಯವರ ಮೊರೆ ಹೋಗಿದ್ದಾರೆನ್ನಲಾಗುತ್ತಿದೆ.

ಕಿಷ್ಕಿಂದಾ ಅಂಜನಾದ್ರಿ ಹನುಮದ್ ವೃತ ನಿಮಿತ್ತ ಹನುಮಮಾಲಾಧಾರಿಯಾಗಿ ಆಂಜನೇಯ ಸ್ವಾಮಿಯ ದರ್ಶನವನ್ನು ಸೋಮವಾರ ಪಡೆದಿದ್ದಾರೆ.

ಬಳ್ಳಾರಿಯಂತೆ ಗಂಗಾವತಿಯೂ ನನ್ನ ಕರ್ಮಭೂಮಿಯಾಗಿದ್ದು ಗಂಗಾವತಿಯಲ್ಲಿ ಮನೆ ಖರೀದಿಸಿದ್ದೇನೆ. ಇಲ್ಲಿಯೇ ರಾಜಕೀಯ, ಸಾಮಾಜಿಕವಾಗಿ ಜನರ ಸೇವೆ ಮಾಡಲು ಉತ್ಸುಕನಾಗಿದ್ದೇನೆ. ನನ್ನ ಅಭಿಮಾನಿಗಳು ಸೇರಿ ಎಲ್ಲಾ ಸಮುದಾಯಗಳ ಆಶೀರ್ವಾದ ನನ್ನ ಮೇಲಿದೆ ಎಂದು ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಕೆ.ನಿಂಗಜ್ಜ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.