ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ

ಗ್ರಾಪಂಗೆ ಮುತ್ತಿಗೆ ಗ್ರಾಮಸ್ಥರು -ಪಿಡಿಒ ನಡುವೆ ವಾಗ್ವಾದ ಗ್ರಾಮದ ಸಮಸ್ಯೆ ಸ್ಪಂದಿಸುತ್ತಿಲ್ಲ ಪಿಡಿಒ

Team Udayavani, May 1, 2019, 1:03 PM IST

kopala-1-tdy..

ಕುಷ್ಟಗಿ: ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ನವಲಹಳ್ಳಿ ಗ್ರಾಮಸ್ಥರು ಗ್ರಾಪಂಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಕುಷ್ಟಗಿ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಪಿಡಿಒ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ತಾಲೂಕಿನ ನವಲಹಳ್ಳಿ ಗ್ರಾಮಸ್ಥರು ಹಿರೇಮನ್ನಾಪುರ ಗ್ರಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಕಳೆದ ಕೆಲ ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಕೆಲ ದಿನಗಳ ಹಿಂದೆ ತಹಶೀಲ್ದಾರ್‌ ಕೆ.ಎಂ. ಗುರುಬಸವರಾಜ ಅವರು ಗ್ರಾಮಕ್ಕೆ ತೆರಳಿ ಸಮಸ್ಯೆಗೆ ಸ್ಪಂದಿಸಿ ಹೊಸ ಕೊಳವೆಬಾವಿ ಕೊರೆಯಿಸಲು ಗ್ರಾಮೀಣ ನೀರು ಸರಬರಾಜು ನೈರ್ಮಲ್ಯ ಇಲಾಖೆಗೆ ಸೂಚಿಸಿದ್ದರು. ತಾತ್ಕಾಲಿಕವಾಗಿ ನೀರಿನ ಸಮಸ್ಯೆ ಬಗೆಹರಿದಿತ್ತು. ಆದರೆ ಕೊಳವೆಬಾವಿಯಲ್ಲಿ ಸೆಲೆ ಬತ್ತಿದ್ದಕ್ಕೆ ಸಮಸ್ಯೆ ಮರುಕಳಿಸಿತು. ಇತ್ತೀಚೆಗೆ ಗ್ರಾಮದ ದಕ್ಷಿಣ ಭಾಗದಲ್ಲಿನ ನಾಲೆ ಬಳಿ ಕೊಳವೆಬಾವಿ ಕೊರೆಯಿಸಲಾಗಿದೆ. ಅದಕ್ಕೆ ಮೋಟರ್‌ ಅಳವಡಿಸಿ, ಪೈಪ್‌ಲೈನ್‌ ಮೂಲಕ ನೀರು ಸರಬರಾಜಿಗೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ತಳ್ಳುಗಾಡಿಯಲ್ಲಿ ನೀರು ತರಲು ಹೋಗಿದ್ದ ಬಾಲಕನಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. 4 ಲಕ್ಷ ರೂ. ಖರ್ಚು ಮಾಡಿದರೂ ಬಾಲಕ ಇನ್ನೂ ಗುಣಮುಖನಾಗಿಲ್ಲ. ನೀರಿನ ಸಮಸ್ಯೆಯಿಂದಾಗಿ ಇಂತಹ ಘಟನೆಗಳು ನಡೆಯುವುದನ್ನು ತಪ್ಪಿಸಲು ಗ್ರಾಪಂ ಹಾಗೂ ತಾಲೂಕು ಆಡಳಿತ ಸ್ಪಂದಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಕುಡಿವ ನೀರಿನ ಸಮಸ್ಯೆ ಪರಿಹರಿಸಲು ಕ್ರಮಕೈಗೊಳ್ಳುವಂತೆ ಪಿಡಿಒ ಚಂದೂಸ್ವಾಮಿ ದೊಡ್ಡಮನಿ ಅವರನ್ನು ಕೇಳಿದರೂ ಪಿಡಿಒ ಸರಿಯಾಗಿ ಸ್ಪಂದಿಸಿಲ್ಲ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಟ್ರ್ಯಾಕ್ಟರ್‌ಗಳಲ್ಲಿ ಗ್ರಾಪಂ ಕಾರ್ಯಾಲಯಕ್ಕೆ ತೆರಳಿ ಮಂಗಳವಾರ ದಿಢೀರ್‌ ಪ್ರತಿಭಟನೆ ನಡೆಸಿದರು. ಗ್ರಾಮಸ್ಥರು ಮತ್ತು ಪಿಡಿಒ ನಡುವೆ ತೀವ್ರ ವಾಗ್ವಾದ ನಡೆಯಿತು. ತಮ್ಮ ಗ್ರಾಮಕ್ಕೆ ತಕ್ಷಣವೇ ಬರಬೇಕೆಂದು ಪಟ್ಟು ಹಿಡಿದು ಕುಳಿತರು. ಗ್ರಾಮಸ್ಥರ ಒತ್ತಡಕ್ಕೆ ಮಣಿದ ಪಿಡಿಒ ನವಲಹಳ್ಳಿಗೆ ತೆರಳಿದರು. ಗ್ರಾಮದಲ್ಲಿ ಸಭೆ ನಡೆಸಿ, ಕೂಡಲೇ ಕೊಳವೆಬಾವಿಗೆ ಹೆಚ್ಚುವರಿ ಪೈಪ್‌ಗ್ಳನ್ನು ಇಳಿಸಬೇಕು. ಪೈಪ್‌ಲೈನ್‌ಗೆ ನೀರಿನ ಸಂಪರ್ಕ ನೀಡಬೇಕು. ಕೆಲಸ ಮುಗಿಯುವವರೆಗೂ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಗ್ರಾಮಸ್ಥರು ಬೇಡಿಕೆಯಿಟ್ಟರು. ಇದಕ್ಕೆ ಒಪ್ಪಿದ ಪಿಡಿಒ ನಿತ್ಯ ನಾಲ್ಕು ಟ್ಯಾಂಕರ್‌ ನೀರು ನೀಡಲಾಗುವುದು. ಕೆಲವೇ ದಿನಗಳಲ್ಲಿ ಕೊಳವೆಬಾವಿಯ ಕೆಲಸ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Shivraj Thangadagi deeply mourns the demise of Dr. Kamala Hampana

ಡಾ.ಕಮಲಾ ಹಂಪನಾ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ

1-gg

CM ವಿರುದ್ಧ ಜನಾರ್ದನ ರೆಡ್ಡಿ ಆಕ್ಷೇಪಾರ್ಹ ಟೀಕೆ: ಕಾಂಗ್ರೆಸ್‌ ಬಣಗಳ ಪ್ರತಿಭಟನೆ

16-koppala

ತೈಲ ಬೆಲೆ ಏರಿಕೆ ಖಂಡಿಸಿ ಜೂ.20 ರಂದು ವಿಧಾನಸಭಾ ಕ್ಷೇತ್ರವಾರು ಪ್ರತಿಭಟನೆ: ಗುಳಗಣ್ಣನವರ್

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

8-kushtagi

Kushtagi: ಅರೆಸ್ಟ್ ಮಾಡುವುದಾದರೆ 3 ಸಾವಿರ ಅಂಗನವಾಡಿ ಕಾರ್ಯಕರ್ತೆಯರನ್ನು ಅರೆಸ್ಟ್ ಮಾಡಿ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.