ಹವಾಮಾನ ವೈಪರೀತ್ಯ: ನೆಲಕ್ಕುರುಳಿದ ಭತ್ತ

Team Udayavani, Nov 17, 2021, 4:25 PM IST

ಹವಾಮಾನ ವೈಪರೀತ್ಯ: ನೆಲಕ್ಕುರುಳಿದ ಭತ್ತ

ಕಾರಟಗಿ: ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತದ ವಕ್ರದೃಷ್ಟಿ ಭತ್ತದ ಬೆಳೆಯ ಮೇಲೆ ಬಿದ್ದಿದೆ. ಹಲವು ದಿನಗಳಿಂದ ಮೋಡ ಕವಿದ ವಾತಾವರಣ, ನಂತರ ಕೆಲ ದಿನಗಳಿಂದ ಜಿಟಿಜಿಟಿ ಮಳೆ ಹೊಡೆತಕ್ಕೆ ತಾಲೂಕು ವ್ಯಾಪ್ತಿಯ ಲಕ್ಷಾಂತರ ಎಕರೆ ಪ್ರದೇಶದಲ್ಲಿ ಬೆಳೆದ ಭತ್ತ ಮಕಾಡೆ ಮಲಗಿದೆ.

ಕಟಾವು ಹಂತದಲ್ಲಿದ್ದ ಭತ್ತ ನೆಲಕ್ಕೆ ಬಿದ್ದಿರುವುದು ರೈತರನ್ನು ಆತಂಕಕೀಡು ಮಾಡಿದೆ. ಭತ್ತ ನಾಟಿ ಮಾಡಿದಾಗಿನಿಂದ ಬೆಳೆಯ ಕಟಾವಿನವರೆಗೂ ಒಂದೊಂದು ಹಂತದಲ್ಲಿ ಸುರಿದ ಮಳೆಗೆ ಭತ್ತ ಸಣ್ಣಪುಟ್ಟ ರೋಗಕ್ಕೆ ತುತ್ತಾಗಿದೆ. ಆದರೂ ಶಕ್ತಿ ಮೀರಿ ಬೆಳೆ ಉಳಿಸಿಕೊಂಡಿದ್ದ ರೈತನಿಗೆ ಈಗ ಏನು ಮಾಡಬೇಕೋ ಎನ್ನುವುದು ತೋಚುತ್ತಿಲ್ಲ. ಬೆಳೆ ನೆಲಕ್ಕೆ ಬಿದ್ದಿರುವಾಗ ಕಟಾವು ಯಂತ್ರದಿಂದ ಕೊಯ್ಲು ಮಾಡಿಸುವುದೇ ಸವಾಲಿನ ಕೆಲಸವಾಗಿದ್ದು, ನೆಲಕ್ಕೊರಗುವ ಮುಂಚೆಯೇ ತಾಸಿಗೆ 2500 ರೂ. ಕೊಟ್ಟರು ಬಾರದಿದ್ದ ಕಟಾವು ಯಂತ್ರಗಳು ಈಗ ನಿಗ ದಿ ಪಡಿಸಿದ ಬೆಲೆಗಿಂತ ಹೆಚ್ಚು ಬೆಲೆ ಕೇಳುತ್ತಿದ್ದಾರೆ.

ನೆಲಕ್ಕೆ ಬಿದ್ದ ಭತ್ತ ಕಟಾವು ಮಾಡಲು ಎಕರೆಗೆ 2 ಗಂಟೆ ಹಿಡಿಯುತ್ತೇ ದುಬಾರಿ ಬೆಲೆ ತೆರುವುದು ಮಾತ್ರ ತಪ್ಪಿದ್ದಲ್ಲ ಎನ್ನುತ್ತಾರೆ ರೈತರು. ಹವಾಮಾನ ವೈಪರೀತ್ಯದ ಪರಿಣಾಮ ಒಂದೆಡೆ ಮೋಡ ಕವಿದ ವಾತಾವರಣ ಇನ್ನೊಂದೆಡೆ ಜಿಟಿಜಿಟಿ ಮಳೆ. ಭತ್ತ ಕಟಾವು ಸಮಯದಲ್ಲಿ ಮಾರುಕಟ್ಟೆಯಲ್ಲಿ ಹೀಗಾದರೆ ಭತ್ತಕ್ಕೆ ಬೆಲೆ ಸಿಗುವುದಿಲ್ಲ. ಜಿಟಿಜಿಟಿ ಮಳೆ ಶುರುವಾದರೆ ಮಾರುಕಟ್ಟೆಗಳಲ್ಲಿ ಭತ್ತವನ್ನು ಕೇಳುವವರೇ ಇಲ್ಲದಂತಾಗುತ್ತದೆ. ಹವಾಮಾನ ವೈಪರೀತ್ಯ ಪರಿಣಾಮ ಭತ್ತ ಕಟಾವು ಮಾಡುವುದೇ ದೊಡ್ಡ ಸಮಸ್ಯೆಯಾಗಿದೆ.

ಈ ಬಾರಿ ಭತ್ತ ಬೆಳೆ ಚೆನ್ನಾಗಿದೆ. ಇನ್ನು 10-15 ದಿನಗಳಲ್ಲಿ ಭತ್ತ ಕಟಾವು ಆರಂಭಿಸಬೇಕಿತ್ತು. ಆದರೆ ಮೋಡ ಕವಿದ ವಾತಾವರಣ, ಜಿಟಿಜಿಟಿ ಮಳೆಯಿಂದ ಬೆಳೆ ನೆಲಕ್ಕುರಿಳಿದೆ. ಕಳೆದ ವರ್ಷ ಬೆಳೆ ಹಾನಿ ಅನುಭವಿಸಿದ ರೈತರಿಗೆ ಇದುವರೆಗೂ ಸರಕಾರ ಪರಿಹಾರ ನೀಡಲು ಮುಂದಾಗಿಲ್ಲ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ನಾರಾಯಣ ಈಡಿಗೇರ ಆರೋಪಿಸಿದರು. ಕ್ರಿಮಿನಾಶಕ, ರಸಗೊಬ್ಬರ, ಬೀಜ ಇವೆಲ್ಲವುಗಳು ದುಬಾರಿ ಬೆಲೆಗೆ ಖರೀದಿಸಬೇಕು. ಪ್ರತಿ ಎಕರೆಗೆ 35ರಿಂದ 40 ಸಾವಿರ ವ್ಯಯಿಸಬೇಕು. ಭತ್ತ ಕೈ ಸೇರುವವರೆಗೂ ಆಗುವ ತಾಪತ್ರೇಯಗಳನ್ನು ಅನುಭವಿಸಿ ಕೊನೆಯಲ್ಲಿ ಭತ್ತ ಕಟಾವು ಹಂತಕ್ಕೆ ಬಂದಾಗ ವರುಣನ ಅವಕೃಪೆಗೆ ತುತ್ತಾಗಿ ರೈತರ ಬದುಕು ಹಾಳಾಗಿದೆ.

ಪ್ರತಿವರ್ಷ ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಲೇ ಬಂದಿದ್ದೇವೆ. ಮಳೆ, ಮೋಡ ಕವಿದರೆ ಸಾಕು ಭತ್ತಕ್ಕೆ ಬೆಲೆಯೇ ಸಿಗುವುದಿಲ್ಲ. ರೈತರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಸಂಬಂ ಧಿಸಿದ ಜನಪ್ರತಿನಿ ಧಿಗಳು, ಅಧಿಕಾರಿಗಳು ಕೂಡಲೇ ಕೈಗೊಳ್ಳಲಿ. ಸರ್ಕಾರ ಸಂಕಷ್ಟಕ್ಕೆ ತುತ್ತಾಗಿರುವ ರೈತರಿಗೆ ಬೆಳೆ ಪರಿಹಾರ ನೀಡುವುದರ ಮೂಲಕ ರೈತರ ಬೆನ್ನಿಗೆ ನಿಲ್ಲಬೇಕು ಎಂದು ರೈತರಾದ ಪರಶುರಾಮ ಉಪ್ಪಾರ, ಸಣ್ಣರಾಮಣ್ಣ ಹೇಳಿದರು.

-ದಿಗಂಬರ ಎನ್‌. ಕುರ್ಡೆಕರ

ಟಾಪ್ ನ್ಯೂಸ್

ಗ್ರಾಮ ಪಂಚಾಯ್ತಿ ಸದಸ್ಯರಿಗೆ ಮತದಾನ ಹಕ್ಕು ಕೊಡಿಸಿದ ಪುಣ್ಯಾತ್ಮ ಕೊಂಡಯ್ಯ: ಸಂತೋಷ ಲಾಡ್

ಗ್ರಾಮ ಪಂಚಾಯ್ತಿ ಸದಸ್ಯರಿಗೆ ಮತದಾನ ಹಕ್ಕು ಕೊಡಿಸಿದ ಪುಣ್ಯಾತ್ಮ ಕೊಂಡಯ್ಯ: ಸಂತೋಷ ಲಾಡ್

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

ರಾಜ್ಯದಲ್ಲಿಂದು 299 ಕೋವಿಡ್‌ ಸೋಂಕು ಪತ್ತೆ: 6 ಸಾವು

ರಾಜ್ಯದಲ್ಲಿಂದು 299 ಕೋವಿಡ್‌ ಸೋಂಕು ಪತ್ತೆ: 6 ಸಾವು

ಗೋವಾ: ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಶಾಸಕ ರವಿ ನಾಯ್ಕ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ

ಗೋವಾ: ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಶಾಸಕ ರವಿ ನಾಯ್ಕ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ

ಶಾಲೆಗೆ ಗೈರಾದ ವಿದ್ಯಾರ್ಥಿಯನ್ನು ಕರೆಯಲು ಹೋದ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ: ದೂರು ದಾಖಲು

ಶಾಲೆಗೆ ಗೈರಾದ ವಿದ್ಯಾರ್ಥಿಯನ್ನು ಕರೆಯಲು ಹೋದ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ: ದೂರು ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದಪ್ಪ ತಳವಾರ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದಪ್ಪ ತಳವಾರ

32croploan

ಬ್ಯಾಂಕ್‍ಗಳಲ್ಲಿ ಬೆಳೆ ಸಾಲ ಮುಕ್ತಿಗೆ ಓಟಿಎಸ್ ಯೋಜನೆಗೆ ಮನವಿ

ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಕ್ಯಾಂಡಲ್ ಹೊತ್ತಿಸಿ ಸ್ಮರಣೆ

ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಕ್ಯಾಂಡಲ್ ಹೊತ್ತಿಸಿ ಸ್ಮರಣೆ

ಲಕ್ಷ ಲಕ್ಷ ಕೋಟಿ ಲೂಟಿ; ಜನರ ನಂಬಿಕೆ ಕಳೆದುಕೊಂಡ ಕಾಂಗ್ರೆಸ್‌; ಹಾಲಪ್ಪ ಆಚಾರ್‌

15election

ಶರಣೇಗೌಡ ಬಯ್ಯಾಪುರ ಮೇಲ್ಮನೆಗೆ ಹೋಗಲು ಅರ್ಹರಲ್ಲ: ಶಿವನಗೌಡ ನಾಯಕ

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

ಗ್ರಾಮ ಪಂಚಾಯ್ತಿ ಸದಸ್ಯರಿಗೆ ಮತದಾನ ಹಕ್ಕು ಕೊಡಿಸಿದ ಪುಣ್ಯಾತ್ಮ ಕೊಂಡಯ್ಯ: ಸಂತೋಷ ಲಾಡ್

ಗ್ರಾಮ ಪಂಚಾಯ್ತಿ ಸದಸ್ಯರಿಗೆ ಮತದಾನ ಹಕ್ಕು ಕೊಡಿಸಿದ ಪುಣ್ಯಾತ್ಮ ಕೊಂಡಯ್ಯ: ಸಂತೋಷ ಲಾಡ್

ಇಂದಿರಾಗಾಂಧಿ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತೆರೆ

ಇಂದಿರಾಗಾಂಧಿ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತೆರೆ

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

suman

ಭಟ್ಕಳ, ಮುರುಡೇಶ್ವರ ಠಾಣೆಗೆ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.