ಪಂಪಾಸರೋವರ: ಶ್ರೀಚಕ್ರ ಸಮೇತ ಜಯಲಕ್ಷ್ಮಿ ಮೂರ್ತಿ ಪುನರ್ ಪ್ರತಿಷ್ಠಾಪನೆಗೆ ಚಾಲನೆ

Team Udayavani, Jun 8, 2022, 7:23 PM IST

Untitled-1

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಪಂಪಾಸರೋವರದಲ್ಲಿ ಗೋ ಪೂಜೆಯೊಂದಿಗೆ ಶ್ರೀಚಕ್ರ ಸಮೇತ ಜಯಲಕ್ಷ್ಮಿ  ಮೂರ್ತಿ ಪುನರ್ ಪ್ರತಿಷ್ಠಾಪನಾ ಕಾರ್ಯಕ್ಕೆ ಗೋ ಪೂಜೆ ಹಾಗೂ ಗಣಪತಿ ಹೋಮ ಕಳಶ ಪೂಜೆಯೊಂದಿಗೆ ಬುಧವಾರ ಚಾಲನೆ ನೀಡಲಾಯಿತು.

ಆನೆಗೊಂದಿ ರಾಜವಂಶಸ್ಥ ಶ್ರೀಕೃಷ್ಣದೇವರಾಯ ದಂಪತಿಗಳು ಸೇರಿ 9 ದಂಪತಿಗಳು ಮಹಾ ಗಣಪತಿ,ನವಗ್ರಹ ಹೋಮದಲ್ಲಿ ಪಾಲ್ಗೊಂಡಿದ್ದರು. ಪಂಪಾಸರೋವರದ ಜೀರ್ಣೋದ್ಧಾರ ಕಾಮಗಾರಿ ಕೈಗೊಂಡಿರುವ  ಸಾರಿಗೆ ಸಚಿವ ಬಿ.ಶ್ರೀರಾಮುಲು ದಂಪತಿಗಳು ಶ್ರೀಚಕ್ರ, ಜಯಲಕ್ಷ್ಮಿ ಮೂರ್ತಿಗಳಿಗೆ ಕ್ಷೀರಾಭಿಷೇಕ ಮಾಡಿ  ಕಳಶ ಪೂಜೆಯನ್ನು ಮಾಡಿದರು.

ಮೂರ್ತಿ ಪುನರ್ ಪ್ರತಿಷ್ಠಾಪನಾ ಕಾರ್ಯವನ್ನು ಬಳ್ಳಾರಿಯ  ಪಂಡಿತ ಲಕ್ಷ್ಮೀ  ನಾರಾಯಣಾಚಾರ್  ನೇತೃತ್ವದಲ್ಲಿ ತಮಿಳುನಾಡು, ಆಂದ್ರಪ್ರದೇಶದ  25 ಪಂಡಿತರ ತಂಡದವರು ದ್ವಾರ ಪೂಜೆ, ಯೋಗಶಾಲೆ ಪ್ರವೇಶ, ಮಹಾಸಂಕಲ್ಪ, ಕಂಕಣಪೂಜೆ, ಕಂಕಣ ದಾರಣ,ಅಂಕುರಾರ್ಪಣಾ, ಧ್ವಜಾರೋಹಣ, ,ಕಳಸಪೂಜೆ,ಆದಿವಾಸ ಪ್ರಾರಂಭ, ಜಲಾದೀವಾಸ, ಕ್ಷೀರಾಧಿವಾಸ, ಧನ್ಯಾಧಿವಾಸ, ಪುಷ್ಪಾಧಿವಾಸ, ಸ್ವಯಾಧಿವಾಸ,ನವಗ್ರಹ ಹೋಮ,ವೇದ ಪಾರಾಯಣ, ಮಹಾಮಂಗಳಾರತಿ ನೆರವೇರಿಸಲಾಯಿತು.

ಸಂಜೆ ರುದ್ರಪಾರಾಯಣ, ರುದ್ರಾಭಿಷೇಕ, ಚಂಡಿ ಪಾರಾಯಣ, ಪಂಪಾಂಬಿಕಾ  ದೇವಿ ಸಮೇತ  ಶ್ರೀ ವಿರೂಪಾಕ್ಷಶ್ವರ ಸ್ವಾಮಿ ರುದ್ರಾಭಿಷೇಕ, ದೇವಾಲಯ ವಾಸ್ತು ಪೂಜೆ, ಲಕ್ಷ್ಮಿ ನರಸಿಂಹ ಹೋಮ, ಸ್ವಸ್ತಿ ವಾಚನಂ, ಮಹಾಮಂಗಳಾತಿ ಕಾರ್ಯಕ್ರಮಗಳು ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜವಂಶಸ್ಥರಾದ ಲಲಿತರಾಣಿಶ್ರೀರಂಗದೇವರಾಯಲು, ಹರಿಹರದೇವರಾಯಲು, ಶಾಸಕ ಪರಣ್ಣ ಮುನವಳ್ಳಿ, ತಹಸೀಲ್ದಾರ್ ಯು.ನಾಗರಾಜ, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ, ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ಬಿಜೆಪಿ ಮುಖಂಡರಾದ ಜೋಗದ ಹನುಮಂತಪ್ಪ, ಕೆಲೋಜಿ ಸಂತೋಷ, ಮುಖಂಡರಾದ ಜೋಗದ ನಾರಾಯಣಪ್ಪ, ವಡ್ರಟ್ಟಿ ವೀರಭದ್ರಪ್ಪ ನಾಯಕ, ಮಾರೆಪ್ಪ ನಾಯಕ, ಪಂಪಣ್ಣ ನಾಯಕ, ಪುರಾತತ್ವ ಇಲಾಖೆಯ ಅಭಿಯಂತರರಾದ ಚಂದ್ರಶೇಖರ ಮಸಾಳೆ, ಕುಬೇರಪ್ಪ ಸೇರಿ ಅನೇಕರಿದ್ದರು.

################################################################

ಜೀರ್ಣೋದ್ಧಾರ ಶ್ರದ್ಧೆ,ಭಕ್ತಿಯಿಂದ  ಮಾಡಿದ್ದೇನೆ.ಯಾವುದೇ ತನಿಖೆಯಾದರೂ ಸಿದ್ಧ: ಬಿ.ಶ್ರೀರಾಮುಲು

ಗಂಗಾವತಿ: ಇತಿಹಾಸ ಪ್ರಸಿದ್ಧ ಪುರಾತನ ಪಂಪಾಸರೋವರ ನಮ್ಮೆಲ್ಲರ ಹೆಮ್ಮೆಯಾಗಿದೆ. ಈ ಕ್ಷೇತ್ರ ವೀಕ್ಷಣೆ ಮಾಡಲು ನಿತ್ಯವೂ ನೂರಾರು ಜನರು ಬರುತ್ತಾರೆ. ದೇಗುಲ ಶೀಥಿಲವಾಗಿತ್ತು. ಸ್ಥಳೀಯರ ಮನವಿ ಹಿನ್ನೆಲೆಯಲ್ಲಿ ಸ್ನೇಹಿತರ ಆರ್ಥಿಕ ನೆರವಿನೊಂದಿಗೆ ಪಂಪಾಸರೋವರವನ್ನು ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಜೀರ್ಣೋದ್ಧಾರ ಕಾಮಗಾರಿಯನ್ನು ಪ್ರಾಚ್ಯವಸ್ತು ಮತ್ತು ಪುರಾತತ್ವ ಇಲಾಖೆ ನಿಗಾದಲ್ಲಿ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಸೇರಿ ಬೇರೆಯವರು ಆರೋಪಿಸುವಂತೆ ನಿಧಿಗಾಗಿ ಜೀರ್ಣೋದ್ಧಾರ ಕಾರ್ಯ ಮಾಡಿಲ್ಲ. ನ್ಯಾಯಾಂಗ ಸೇರಿ ಯಾವುದೇ ತನಿಖೆಗೂ ತಾವು ಸಿದ್ಧ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಅವರು ಬುಧವಾರ ಪಂಪಾಸರೋವರದಲ್ಲಿ ಮೂರ್ತಿ ಪುನರ್ ಪ್ರತಿಷ್ಠಾಪನಾ ಕಾರ್ಯದಲ್ಲಿ ಪಾಲ್ಗೊಂಡು  ಸುದ್ದಿಗಾರರೊಂದಿಗೆ ಮಾತನಾಡಿದರು.

ಹಂಪಿ, ಕೋದಂಡ ರಾಮದೇವರ ಗುಡಿ, ಸೂರ್ಯದೇವರ ಗುಡಿ, ಕೋಟಿ ಮಲ್ಲೇಶ್ವರ ಗುಡಿ ಸೇರಿ ಹಲವು ಪುರಾತನ ದೇವಾಲಯಗಳನ್ನು ಪುರಾತತ್ವ ಇಲಾಖೆಯ ಪರವಾನಿಗೆಯೊಂದಿಗೆ ಜೀರ್ಣೋದ್ಧಾರ ಮಾಡಲಾಗಿದ್ದು ಅಲ್ಲಿ ಇಲ್ಲದ ಗೊಂದಲ ವಿವಾದ ಪಂಪಾಸರೋವರದಲ್ಲಿ ಯಾಕೆ ಬಂದಿದೆ. ಗೊತ್ತಿಲ್ಲ. ನಾನಂತು ಪ್ರಮಾಣಿಕವಾಗಿ ಭಕ್ತಿ ಶ್ರದ್ಧೆಯಿಂದ ಜೀರ್ಣೋದ್ಧಾರ ಕಾರ್ಯ ಮಾಡುತ್ತಿದ್ದೇನೆ, ನನ್ನ ಸ್ನೇಹಿತರು ಧನಸಹಾಯ ಮಾಡುತ್ತಾರೆ. ನಾನೂ ಮುಂದೆ ನಿಂತು ಈ ಕಾರ್ಯ ಮಾಡುತ್ತಿದ್ದೇನೆ. ನಾನೇದರೂ ತಪ್ಪು ಮಾಡಿದರೆ ದೇವರೇ ಶಿಕ್ಷೆ ಕೊಡಲಿ, ಆನೆಗೊಂದಿ ರಾಜವಂಶಸ್ಥರ ಮತ್ತು ಸಮಸ್ತ  ಜನರ ವಿಶ್ವಾಸದೊಂದಿಗೆ ಕಾಮಗಾರಿಯನ್ನು ಮಾಡುತ್ತಿದ್ದೇನೆ. ನಾನು ದೇವರು ಧಾರ್ಮಿಕ ವಿಷಯದಲ್ಲಿಪೂರ್ಣ ನಂಬಿಕೆಯುಳ್ಳ ವ್ಯಕ್ತಿಯಾಗಿದ್ದು ಧರ್ಮ ದ್ರೋಹಿ ಕಾರ್ಯ ಮಾಡುವುದಿಲ್ಲ. ಇದೀಗ ಈ ಭಾಗದ ಜನಪ್ರತಿನಿಧಿಗಳ ಆನೆಗೊಂದಿ ರಾಜಮನೆತನದವರು ಸ್ಥಳೀಯರು ಸೇರಿ ಮೂರ್ತಿ ಪ್ರತಿಷ್ಠಾಪನಾ ಕಾರ್ಯ ಶ್ರದ್ಧೆಯಿಂದ ಮಾಡಿ ಮುಂದಿನ 6 ತಿಂಗಳಲ್ಲಿ ಪೂರ್ಣ ಪಂಪಾಸರೋವರದ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಳಿಸುವ ಯೋಜನೆ ಇದೆ. ವಾಲೀಕಿಲ್ಲಾದ ಶ್ರೀ ಆದಿಶಕ್ತಿ ದೇವಾಲಯದ ಜೀರ್ಣೋದ್ಧಾರ ಕಾರ್ಯವೂ ಶೀಘ್ರ  ಪೂರ್ಣಗೊಳಿಸಲಾಗುತ್ತಿದೆ. ಅತ್ಯುತ್ತಮ ಗುಣಮಟ್ಟದ ಕಲ್ಲಿನ ಅನಾಭವಿದ್ದು ಬೇರೆಡೆಯಿಂದ ಕಲ್ಲು ತರಿಸಿ ಕೆತ್ತನೆ ಕಾರ್ಯ ಮಾಡಿ ಆದಿಶಕ್ತಿ ದೇಗುಲಕ್ಕೆ ರವಾನೆ ಮಾಡಿ ಜೋಡಿಸಬೇಕಾಗಿದ್ದು ಪ್ರಸ್ತುತ ವಿಳಂಭವಾಗುತ್ತಿದೆ. ಅಲ್ಲಿಯೂ ಶೀಘ್ರವೇ ಕಾಮಗಾರಿ ಆರಂಭಿಸಲಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಪರಣ್ಣ ಮುನವಳ್ಳಿ, ಬಿಜೆಪಿ ಮುಖಂಡರಾದ ಕೆಲೋಜಿ ಸಂತೋಷ, ಜೋಗದ ಹನುಮಂತಪ್ಪ, ಜೋಗದ ನಾರಾಯಣಪ್ಪ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.