ಲಿಂ. ಶಿವಶಾಂತವೀರ ಶ್ರೀ ಪುಣ್ಯಸ್ಮರಣೆ

ಮಳೆ ಮಲ್ಲೇಶ್ವರದಿಂದ ಗವಿಮಠದವರೆಗೂ ಪಾದಯಾತ್ರೆ

Team Udayavani, Mar 27, 2022, 3:02 PM IST

14

ಕೊಪ್ಪಳ: ಗವಿಮಠದ 17ನೇ ಪೀಠಾಧಿಪತಿ ಲಿಂ. ಶ್ರೀ ಶಿವಶಾಂತವೀರರ 19ನೇ ಪುಣ್ಯಸ್ಮರಣೆಯ ಪಾದಯಾತ್ರೆ ನಗರದ ಮಳೆಮಲ್ಲೇಶ್ವರ ದೇವಸ್ಥಾನದಿಂದ ಗವಿಮಠದವರೆಗೂ ಶ್ರದ್ಧಾಭಕ್ತಿಯಿಂದ ಸಾಗಿತು.

ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಶಿವಶಾಂತವೀರ ಹಾಗೂ ಗವಿಸಿದ್ದೇಶ್ವರ ಸ್ವಾಮೀಜಿಗಳ ನಾಮಸ್ಮರಣೆ ಮಾಡಿದರು. ದಾರಿಯುದ್ದಕ್ಕೂ ಯಾತ್ರಿಗಳಿಗೆ ತಂಪುಪಾನೀಯ ವಿತರಿಸಲಾಯಿತು. ಸಂಪ್ರದಾಯದಂತೆ ಗವಿಮಠವು ಲಿಂಗೈಕ್ಯ ಶಿವಶಾಂತವೀರ ಸ್ವಾಮೀಜಿಗಳ ಪುಣ್ಯಸ್ಮರಣೆ ನಡೆಸಿಕೊಂಡು ಬರುತ್ತಿದೆ. ಆದರೆ ಎರಡು ವರ್ಷಗಳಿಂದ ಕೋವಿಡ್‌ ಹಿನ್ನೆಲೆಯಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ಅತ್ಯಂತ ಸರಳವಾಗಿ ಆಚರಿಸಲಾಗಿತ್ತು.

ಪ್ರಸ್ತುತ ಕೋವಿಡ್‌ ಸೋಂಕು ಇಳಿಮುಖವಾಗಿದ್ದು, ಶ್ರೀಮಠವು ಪರಂಪರೆಯಂತೆ ಮಳೆ ಮಲ್ಲೇಶ್ವರ ಬೆಟ್ಟದಿಂದ ಗವಿಮಠದವರೆಗೂ ಪಾದಯಾತ್ರೆ ಶ್ರದ್ಧಾಭಕ್ತಿಯಿಂದ ಸಾಗಿತು. ನಗರದಲ್ಲಿ ಬೆಳಗ್ಗೆ 6 ಗಂಟೆಗೆ ಮಳೆಮಲ್ಲೇಶ್ವರ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆ ಗದಗ ರಸ್ತೆಯ ಬನ್ನಿಕಟ್ಟಿ, ಅಶೋಕ ಸರ್ಕಲ್‌, ಜವಾಹರ ರಸ್ತೆ, ಗಡಿಯಾರ ಕಂಬದ ಮಾರ್ಗವಾಗಿ ಶ್ರೀಗವಿಮಠ ತಲುಪಿತು.

ಪಾದಯಾತ್ರೆಯಲ್ಲಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು, ಶ್ರೀ ಬಳಾಗಾನೂರಿನ ಶಿವಶಾಂತವೀರ ಶರಣರು, ಹಡಗಲಿಯ ಡಾ| ಹಿರಿಶಾಂತವೀರ ಮಹಾಸ್ವಾಮಿಗಳು, ಮೈನಳ್ಳಿ ಶ್ರೀಗಳು, ಬಿಜಕಲ್‌ ಶ್ರೀಗಳು, ಅಣದೂರು ಶ್ರೀಗಳು, ಮಹಾಂತ ದೇವರು ಸೇರಿ ಹರಗುರುಚರ ಮೂರ್ತಿಗಳು ಹಾಗೂ ಸಹಸ್ರಾರು ಭಕ್ತರಿದ್ದರು.

ವಿದ್ಯಾರ್ಥಿಗಳು ಭಾಗಿ: ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬೇಕೆಂದು ಗ್ರಾಮೀಣ ಪ್ರದೇಶದ ಭಕ್ತರು ಸಹ ಆಗಮಿಸಿ ಶ್ರೀಗಳ ಕೃಪೆಗೆ ಪಾತ್ರರಾದರು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಯಾತ್ರೆಯಲ್ಲಿ ಪಾಲ್ಗೊಂಡು ರಸ್ತೆಯಲ್ಲಿ ಲಿಂ. ಶಿವಶಾಂತವೀರ, ಮರಿಶಾಂತವೀರ, ಗವಿಸಿದ್ದೇಶ್ವರ ಮಹಾ ಸ್ವಾಮಿಗಳ ನಾಮಸ್ಮರಣೆ ಮಾಡಿ ಭಕ್ತಿ ತೋರಿದರು.

ತಂಪುಪಾನೀಯ ವ್ಯವಸ್ಥೆ: ಪಾದಯಾತ್ರೆಯಲ್ಲಿ ಪಾಲ್ಗೊಂಡ ಭಕ್ತರಿಗೆ ರಸ್ತೆಯ ಅಕ್ಕ ಪಕ್ಕದ ಅಂಗಡಿಗಳ ಮಾಲೀಕರು, ವರ್ತಕರು, ವ್ಯಾಪಾರಿಗಳು ತಮ್ಮದೂ ಒಂದು ಭಕ್ತಿಯ ಸೇವೆ ಇರಲಿ ಎಂದು ಮಜ್ಜಿಗೆ, ಶರಬತ್ತು, ಪಾನಕ, ಜ್ಯೂಸ್‌ ಸೇರಿದಂತೆ ಎಳೆನೀರನ್ನು ಕೊಟ್ಟು ಭಕ್ತಿ ಮೆರೆದರು.

ದಾಸೋಹ ವ್ಯವಸ್ಥೆ: ಯಾತ್ರೆಯಲ್ಲಿ ಪಾಲ್ಗೊಂಡ ಭಕ್ತರೆಲ್ಲರೂ ಲಿಂಗೈಕ್ಯ ಶ್ರೀಗಳ ನಾಮಸ್ಮರಣೆ ಮಾಡುತ್ತ ಗವಿಮಠಕ್ಕೆ ಆಗಮಿಸಿ ನೇರ ಕತೃ ಗದ್ದುಗೆಯ ದರ್ಶನ ಪಡೆದರಲ್ಲದೇ, ಮಹಾದಾಸೋಹ ಭವನಕ್ಕೆ ತೆರಳಿ ಸಿರಾ, ರೊಟ್ಟಿ, ಹೆಸರುಕಾಳು ಪಲ್ಲೆ, ಬದನೆಕಾಯಿ ಪಲ್ಲೆ, ಅನ್ನ-ಸಾರು, ಕಡಲೆಪುಡಿ, ಮಜ್ಜಿಗೆ ಸವಿದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.