ಸಮಾಜ ಕಲ್ಯಾಣ ಇಲಾಖೆ ವೆಬ್‌ನಲ್ಲಿ ದೋಷ

•ಆನ್‌ಲೈನ್‌ ಅರ್ಜಿ ಸಲ್ಲಿಸಲು ಪರದಾಟ •ಹಲವು ದಿನಗಳಿಂದಲೂ ಸರ್ವರ್‌ ಬ್ಯೂಸಿ•ಎಸ್‌ಸಿ-ಎಸ್‌ಟಿ ಹಾಸ್ಟೆಲ್ ಪ್ರವೇಶಕ್ಕೆ ಪಜೀತಿ

Team Udayavani, Jun 4, 2019, 7:39 AM IST

Udayavani Kannada Newspaper

ಕೊಪ್ಪಳ: ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಜಾ ದಿನಗಳು ಮುಗಿದು ಶಾಲಾ, ಕಾಲೇಜು ಆರಂಭವಾಗುತ್ತಿವೆ. ಇತ್ತ ಸಮಾಜ ಕಲ್ಯಾಣ ಇಲಾಖೆಯು ಎಸ್‌ಸಿ, ಎಸ್‌ಟಿ ವಸತಿ ನಿಲಯಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದ್ದು, ಆರಂಭದ ದಿನದಿಂದಲೂ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದು ಪಾಲಕರಲ್ಲಿ ಆತಂಕ ಮೂಡಿಸುತ್ತಿದೆ.

ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಪ್ರತಿ ವರ್ಷದಂತೆ ಸಮಾಜ ಕಲ್ಯಾಣ ಇಲಾಖೆ ರಾಜ್ಯಾದ್ಯಂತ ಇರುವ ಎಸ್‌ಸಿ ಮತ್ತು ಎಸ್‌ಟಿ ವಸತಿ ನಿಲಯಕ್ಕೆ ವಿದ್ಯಾರ್ಥಿಗಳ ಪ್ರವೇಶಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಪ್ರಕ್ರಿಯೆ ಆರಂಭಿಸಿದೆ. ಆದರೆ ವಿದ್ಯಾರ್ಥಿಗಳ ಒಂದೇ ಒಂದು ಅರ್ಜಿಯೂ ಅಪಲೋಡ್‌ ಆಗುತ್ತಿಲ್ಲ. ಇಲಾಖೆ ವೆಬ್‌ಸೈಟ್ ಜೊತೆಗೆ ಅರ್ಜಿ ಪ್ರವೇಶದ ತಾಣವೂ ತಾಂತ್ರಿಕ ತೊಂದರೆ ತೋರುತ್ತಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ನಗರ ಪ್ರದೇಶದಲ್ಲಿ ಇಡೀ ದಿನ ನೆಟ್ ಸೆಂಟರ್‌, ಆನ್‌ಲೈನ್‌ ಸರ್ವಿಸ್‌ ಸೆಂಟರ್‌ನಲ್ಲಿ ನಿಂತು ಅರ್ಜಿ ಹಾಕಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಇಂಟರ್‌ನೆಟ್ ಸೆಂಟರ್‌ನಲ್ಲಿ ಇಡೀ ದಿನ ನಿಂತು ಪಾಲಕರು ಸುಸ್ತಾಗುತ್ತಿದ್ದಾರೆ. ವಸತಿ ನಿಲಯದಲ್ಲಿ ಮಕ್ಕಳಿಗೆ ಶಿಕ್ಷಣ ದೊರೆತರೆ ಅವರ ಭವಿಷ್ಯ ಮುಂದೆ ಉತ್ತಮವಾಗಲಿದೆ. ಊಟ, ವಸತಿ ದೊರೆತರೆ ನಮಗೆ ತುಂಬ ಅನುಕೂಲವಾಗಲಿದೆ ಎಂದು ಪಾಲಕರು ಅಲವತ್ತುಕೊಳ್ಳುತ್ತಿದ್ದಾರೆ.

ಜೂ.15 ಕಡೆ ದಿನ:ವಸತಿ ನಿಲಯಗಳಿಗೆ ಜೂ.15ರಂದು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲಾಖೆಯು ಕೊನೆ ದಿನ ನಿಗದಿ ಮಾಡಿದೆ. ಇದರಿಂದ ಪಾಲಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅರ್ಜಿ ಸಲ್ಲಿಕೆಗೆ 13 ದಿನ ಮಾತ್ರ ಬಾಕಿಯಿವೆ. ಪದೇ ಪದೆ ಸರ್ವರ್‌ ಬ್ಯೂಸಿ ತೋರಿಸುತ್ತಿರುವುದರಿಂದ ಮಕ್ಕಳಿಗೆ ಪ್ರವೇಶ ಸಿಗುವುದೋ ಇಲ್ಲವೋ ಎನ್ನುವ ಆತಂಕ ಕಾಡುತ್ತಿದೆ. ಕೂಡಲೇ ಸರ್ವರ್‌ ಸಮಸ್ಯೆ ಬಗೆಹರಿಸಿ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿ ಕೊಡಬೇಕು. ಇಲ್ಲವೇ ವಸತಿ ನಿಲಯಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಹಿತ ಕಾಪಾಡಬೇಕೆಂಬ ಒತ್ತಾಯ ಕೇಳಿ ಬಂದಿದೆ.

ರಾಜ್ಯಾದ್ಯಂತ ಸಮಸ್ಯೆ: ಇದು ಕೇವಲ ಕೊಪ್ಪಳ ಜಿಲ್ಲೆಯಲ್ಲಿನ ಒಂದೇ ಸಮಸ್ಯೆಯಲ್ಲ. ರಾಜ್ಯಾದ್ಯಂತ ಇದೇ ಸಮಸ್ಯೆ ಎದುರಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರು, ಪಾಲಕರು ನಮಗೆ ಕರೆ ಮಾಡಿ ಸರ್ವರ್‌ ಬ್ಯೂಸಿ ಇರುವುದಾಗಿ ತಿಳಿಸುತ್ತಿದ್ದಾರೆ. ತಾಂತ್ರಿಕ ಸಮಸ್ಯೆ ನಮಗೂ ಗೊತ್ತಾಗುತ್ತಿಲ್ಲ. ನಾವು ಸಹಿತ ರಾಜ್ಯಮಟ್ಟದ ಅಧಿಕಾರಿಗಳಿಗೆ ವಿಡಿಯೋ ಕಾನ್ಫ್ರೆನ್ಸ್‌ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದೇವೆ. ಸಮಸ್ಯೆ ಬಗೆಹರಿಸುವ ಕುರಿತು ಅವರು ಹೇಳುತ್ತಿದ್ದಾರೆ. ಎನ್‌ಐಸಿ ಈ ಸರ್ವರ್‌ ನಿರ್ವಹಣೆ ಮಾಡುತ್ತಿದ್ದು, ಅದು ಯಾವಾಗ ಬಗೆಹರಿಯಲಿದೆ ಎನ್ನುವುದನ್ನು ನಾವು ಕಾಯುತ್ತಿದ್ದೇವೆ ಎನ್ನುತ್ತಿದ್ದಾರೆ ಅಧಿಕಾರಿಗಳು.

•ದತ್ತು ಕಮ್ಮಾರ

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.