ದಾಖಲೆ ಪ್ರಮಾಣದಲ್ಲಿ ಮೆಕ್ಕೆಜೋಳ ಬಿತ್ತನೆ

Team Udayavani, Sep 26, 2020, 9:16 PM IST

kopala-tdy-1

ಸಾಂದರ್ಭಿಕ ಚಿತ್ರ

ಕೊಪ್ಪಳ: ಮೆಕ್ಕೆಜೋಳ ಬಿತ್ತನೆಗೆ ಹೆಸರಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿ ಈ ಬಾರಿ “ಭಾರೀ ದಾಖಲೆ’ ಮೆಕ್ಕೆಜೋಳ ಬಿತ್ತನೆಯಾಗಿದೆ. ಕಳೆದ 10 ವರ್ಷಗಳಿಗೆ ಹೋಲಿಕೆ ಮಾಡಿದರೆ ಇದೇ ವರ್ಷವೇ ಹೆಚ್ಚು ಬಿತ್ತನೆಯಾಗಿದ್ದು, ಫಸಲು ಉತ್ತಮವಾಗಿದೆ. ಆದರೆ ಮಾರುಕಟ್ಟೆಯಲ್ಲಿ ದರ ಸಿಕ್ಕರೆ ಮಾತ್ರ ಅನ್ನದಾತನ ಮೊಗದಲ್ಲಿ ಖುಷಿ ಕಾಣಲಿದೆ.

ಪ್ರಸ್ತುತ ದಿನದಲ್ಲಿ ಜಿಲ್ಲೆಯ ರೈತಾಪಿ ವಲಯ ಮೆಕ್ಕೆಜೋಳದ ಮೇಲೆ ಹೆಚ್ಚಿನ ವ್ಯಾಮೋಹ ಹೊಂದುತ್ತಿದೆ. ಹಲವು ಬೆಳೆ ಬಿಟ್ಟು ಮೆಕ್ಕೆಜೋಳದ ಬಗ್ಗೆ ಆಸಕ್ತಿ ತೋರುತ್ತಿರುವುದು ನಿಜಕ್ಕೂ ಅಚ್ಚರಿ ಮೂಡಿಸುತ್ತಿದೆ. ವಿಜ್ಞಾನಿಗಳು ಮಿಶ್ರ ಬೆಳೆ ಬೆಳೆಯಿರಿ, ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ ಎಂದು ರೈತರಿಗೆ ಜಾಗೃತಿ ಮೂಡಿಸುತ್ತಿದ್ದರೂ ರೈತರಲ್ಲಿ ಮಾತ್ರ ಮೆಕ್ಕೆಜೋಳದ ಬಗೆಗಿನ ಆಸಕ್ತಿ ಕಡಿಮೆಯಾಗಿಲ್ಲ. ಈ ವರ್ಷ 85 ಸಾವಿರ ಹೆಕ್ಟೇರ್‌ ಬಿತ್ತನೆ: ಕೃಷಿ ಇಲಾಖೆ ತಾಲೂಕುವಾರು ಮೆಕ್ಕೆಜೋಳ ಬಿತ್ತನೆ ಗುರಿ ನಿಗದಿಪಡಿಸಿದ್ದರೆ ರೈತರು ಗುರಿಗೂ ಮೀರಿ ಸಾಧನೆ ಮಾಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕೊಪ್ಪಳ ತಾಲೂಕಿನಲ್ಲಿ 20,600 ಹೆಕ್ಟೇರ್‌ ಪ್ರದೇಶ ಗುರಿ ನಿಗದಿ ಪಡಿಸಿದ್ದರೆ, 29,260 ಹೆಕ್ಟೇರ್‌ ಬಿತ್ತನೆಯಾಗಿದೆ.

ಕುಷ್ಟಗಿ ತಾಲೂಕು-12,200 ಹೆಕ್ಟೇರ್‌ ಗುರಿಯಿದ್ದರೆ, 24,170 ಹೆಕ್ಟೇರ್‌ ಪ್ರದೇಶ ಬಿತ್ತನೆಯಾಗಿದೆ. ಯಲಬುರ್ಗಾ ತಾಲೂಕು-12,800 ಹೆಕ್ಟೇರ್‌ ಗುರಿಯಿದ್ದರೆ, 23,010 ಹೆಕ್ಟೇರ್‌ ಪ್ರದೇಶ ಬಿತ್ತನೆಯಾಗಿದೆ. ಇನ್ನೂ ಗಂಗಾವತಿ ತಾಲೂಕು-7,300 ಹೆಕ್ಟೇರ್‌ ಪ್ರದೇಶ ಗುರಿ ನಿಗದಿ  ಮಾಡಿದ್ದರೆ, 9,090 ಹೆಕ್ಟೇರ್‌ ಬಿತ್ತನೆಯಾಗಿದೆ. ಒಟ್ಟಾರೆ ಜಿಲ್ಲಾದ್ಯಂತ 52,900 ಹೆಕ್ಟೇರ್‌ ಪ್ರದೇಶ ಗುರಿ ನಿಗದಿಪಡಿಸಿದ್ದರೆ ಬಿತ್ತನೆ 85,530 ಹೆಕ್ಟೇರ್‌ ಪ್ರದೇಶದಷ್ಟು ಬಿತ್ತನೆಯಾಗಿದೆ. ಅಂದರೆ ಸರಿಸುಮಾರು 1.80 ಲಕ್ಷ ಎಕರೆ ಪ್ರದೇಶ ಮೆಕ್ಕೆಜೋಳ ಬಿತ್ತನೆಯಾಗಿದೆ.

ಮಳೆ ನಿರೀಕ್ಷೆಯಲ್ಲಿ ಹೆಚ್ಚು ಬಿತ್ತನೆ: ಕಳೆದ ಹತ್ತು ವರ್ಷಗಳಿಗೆ ಹೋಲಿಸಿದರೆ ಇದೇ ವರ್ಷ ಅತಿ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದೆ. ಪ್ರಸಕ್ತ ವರ್ಷ ಉತ್ತಮ ಮಳೆಯಾಗುವ ಭರವಸೆಯಿಂದ ರೈತರು ಮೆಕ್ಕೆಜೋಳದ ಬಿತ್ತನೆಗೆ ಆಸಕ್ತಿ ವಹಿಸಿದ್ದರು. ಅದರಂತೆ ಏಪ್ರಿಲ್‌ ತಿಂಗಳಲ್ಲಿ 23 ಮಿ.ಮೀ ಮಳೆಯಾಗಿದೆ. ಮೇ ನಲ್ಲಿ 74 ಮಿ.ಮೀ, ಜೂನ್‌ನಲ್ಲಿ 89 ಮಿ.ಮೀ, ಜುಲೈನಲ್ಲಿ 190 ಮಿ.ಮೀ, ಆಗಸ್ಟ್ ನಲ್ಲಿ 92 ಮಿ.ಮೀ ಮಳೆ ವರದಿಯಾಗಿದೆ. ಇನ್ನು ಸೆ.14ರ ವರೆಗೂ 35 ಮಿ.ಮೀ ಮಳೆಯಾಗಿದೆ. ಇದೇ ನಿರೀಕ್ಷೆಯಲ್ಲಿ ಹೆಚ್ಚು ಮೆಕ್ಕೆಜೋಳ ಬಿತ್ತನೆಗೆ ಆಸಕ್ತಿ ವಹಿಸಿದ್ದರು ಎನ್ನುವುದು ವಿಜ್ಞಾನಿಗಳ ವಾದ.

ಇನ್ನೂ ಕಳೆದ ವರ್ಷ ಸಜ್ಜೆ ಬಿತ್ತನೆ ಮಾಡಿದ್ದ ರೈತರು ಈ ವರ್ಷ ಮೆಕ್ಕೆಜೋಳದ ಕಡೆ ಆಸಕ್ತಿ ತೋರಿದ್ದಾರೆ. ಇನ್ನು ಕಪ್ಪು ಭೂಮಿಯಲ್ಲಿ ಮೆಕ್ಕೆಜೋಳ ಬಿತ್ತನೆಗೆ ಒತ್ತು ನೀಡಲಾಗಿದೆ. ಇದಲ್ಲದೇ ಖಾಲಿ ಇರುವ ಜಮೀನಿನಲ್ಲೂ ಉಳುಮೆ ನಡೆದಿದ್ದು ಮೆಕ್ಕೆಜೋಳ ಬಿತ್ತನೆಯಾಗಿದೆ ಎನ್ನಾತ್ತಾರೆ ಕೃಷಿ ಅಧಿಕಾರಿಗಳು. ಉತ್ತಮ ಫಸಲು: ಈ ಬಾರಿ ಸ್ವಲ  ಭಾಗ ಹೊರತುಪಡಿಸಿದರೆ ಉಳಿದೆಡೆ ಉತ್ತಮ ಫಸಲು ಇದೆ. ಮೆಕ್ಕೆಜೋಳ ಸಮೃದ್ಧವಾಗಿ ಬೆಳೆದಿದೆ. ಆದರೆ ಮಾರುಕಟ್ಟೆಯಲ್ಲಿ ರೈತರಿಗೆ ಸೂಕ್ತ ದರ ಸಿಗಬೇಕಿದೆ. ಆಗ ರೈತ ಕಷ್ಟಪಟ್ಟು ಬೆಳೆದಿದ್ದಕ್ಕೂ ಫಲ ಸಿಕ್ಕಂತಾಗಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ದರ ಪಾತಾಳಕ್ಕೆ ಕುಸಿದಿದೆ. ಇದು ರೈತರನ್ನು ಚಿಂತೆಗೀಡು ಮಾಡುವಂತಾಗಿದೆ. ಸರ್ಕಾರ ರೈತರತ್ತ ಆಸಕ್ತಿ ವಹಿಸಿ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಆರಂಭಿಸಿದರೆ ರೈತನ ಫಸಲಿಗೂ ಒಂದು ಬೆಲೆ ಸಿಕ್ಕಂತಾಗಿ, ಸಂಕಷ್ಟದಿಂದ ಪಾರಾಗಲಿದ್ದಾನೆ.

ಕಳೆದ ವರ್ಷ ಜಿಲ್ಲೆಯ ರೈತರು ಸಜ್ಜೆ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಮಾಡಿದ್ದರು. ಈ ವರ್ಷ ಮೆಕ್ಕೆಜೋಳಕ್ಕೆ ಹೆಚ್ಚು ಆಸಕ್ತಿ ವಹಿಸಿದ್ದಾರೆ. 85 ಸಾವಿರ ಹೆಕ್ಟೇರ್‌ ಪ್ರದೇಶದಷ್ಟು ಮೆಕ್ಕೆಜೋಳ ಬಿತ್ತನೆಯಾಗಿದೆ. ಮಳೆ ನಿರೀಕ್ಷೆಯಿಂದಾಗಿ ಹೆಚ್ಚು ಬಿತ್ತನೆಯಾಗಿದ್ದು, ಎಲ್ಲೆಡೆ ಫಸಲು ಉತ್ತಮವಾಗಿದೆ. ರೈತರಲ್ಲೂ ಖುಷಿಯಿದೆ. – ಶಿವಕುಮಾರ, ಜಂಟಿ ಕೃಷಿ ನಿರ್ದೇಶಕ, ಕೊಪ್ಪಳ

-ದತ್ತು ಕಮ್ಮಾರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.