ಬೇಸಿಗೆ ಬಿಸಿಯೂಟಕ್ಕೆ ಶಿಕ್ಷಕರ ಅಸಹಕಾರ

Team Udayavani, May 9, 2019, 3:21 PM IST

kop-2

ದೋಟಿಹಾಳ: ಕಿಲ್ಲಾರಹಟ್ಟಿ, ಜೂಮಲಾಪುರ ಸಿಆರ್‌ಪಿ ವ್ಯಾಪ್ತಿಯಲ್ಲಿ ಅನೇಕ ಕಡೆಗಳಲ್ಲಿ ಮಕ್ಕಳು ಮಧ್ಯಾಹ್ನನದ ಬಿಸಿಯೂಟಕ್ಕೆ ಶಾಲೆಗೆ ಬರುತ್ತಿದ್ದರೂ ಶಿಕ್ಷಕರು ಬರುತ್ತಿಲ್ಲ. ರಾಜ್ಯ ಸರಕಾರ ಬರಪೀಡಿತ ಪ್ರದೇಶದ ಮಕ್ಕಳ ಮಧ್ಯಾಹ್ನನದ ಬಿಸಿಯೂಟ ಯೋಜನೆ ಹಾದಿ ತಪುತ್ತಿದೆ.

ರಾಜ್ಯ ಸರಕಾರ ಬರಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆ ದಿನಗಳಲ್ಲಿ ಮಕ್ಕಳಿಗೆ ಮಧ್ಯಾಹ್ನನದ ಬಿಸಿಯೂಟ ನೀಡಬೇಕು ಎಂದು ಆದೇಶ ನೀಡಿದೆ. ಏ. 11ರಿಂದ ಮೇ 28ವರಗೆ ಬೇಸಿಗೆ ರಜೆ ದಿನಗಳಲ್ಲಿ ಮಕ್ಕಳಿಗೆ ಮಧ್ಯಾಹ್ನನದ ಬಿಸಿಯೂಟ ನೀಡಬೇಕು. ಇದಕ್ಕೆ ಆ ಶಾಲೆಯ ಮುಖ್ಯಗುರು ಅಥವಾ ಶಾಲೆ ಶಿಕ್ಷಕರಲ್ಲಿ ಯಾರಾದರೂ ಒಬ್ಬರು ಪ್ರತಿ ದಿನ ಶಾಲೆಗೆ ಬಂದು ತಪ್ಪದೇ ಮಕ್ಕಳಿಗೆ ಮಧ್ಯಾಹ್ನನದ ಊಟ ನೀಡಬೇಕು ಎಂದು ಶಿಕ್ಷಣ ಇಲಾಖೆ ಆದೇಶ ನೀಡಿದೆ. ಆದರೆ ಕೆಲವು ಶಾಲೆಗಳಲ್ಲಿ ಶಿಕ್ಷಕರು ವಾರಕೊಮ್ಮೆ ಬಂದು ಅಡುಗೆಗೆ ಬೇಕಾಗುವ ಸಾಮಗ್ರಿ ನೀಡಿ ಹೋಗುತ್ತಾರೆ ಎಂದು ಶಾಲಾ ಮಕ್ಕಳು ಹಾಗೂ ಮುಖ್ಯ ಅಡುಗೆ ಸಿಬ್ಬಂದಿ ತಿಳಿಸುತ್ತಾರೆ. ಮ್ಯಾದರಡಕ್ಕಿ ತಾಂಡಾದ ಶಾಲೆಯ ಶಿಕ್ಷಕರು ಶಾಲೆ ರಜೆ ನೀಡಿದ ನಂತರ ಊರಿಗೆ ಹೋದವರು ಮರಳಿ ಬಂದೇ ಇಲ್ಲ. ಶಾಲೆಯ ಒಬ್ಬ ವಿದ್ಯಾರ್ಥಿ ಕೈಯಲ್ಲಿ ಅಡುಗೆ ಕೊಠಡಿಯ ಕೀಲಿಕೈ ಕೊಟ್ಟು ಹೋಗಿದ್ದಾರೆ. ಆ ವಿದ್ಯಾರ್ಥಿ ಬಂದ ಮೇಲೆ ಮಕ್ಕಳಿಗೆ ಅಡುಗೆ ಮಾಡಬೇಕು. ಇಲ್ಲದಿದ್ದರೆ ಮಕ್ಕಳಿಗೆ ಬಿಸಿಯೂಟ ಇಲ್ಲ ಎಂದು ಮುಖ್ಯ ಅಡುಗೆ ಸಿಬ್ಬಂದಿ ತಿಳಿಸಿದರು.

ಕಳಮಳ್ಳಿ ತಾಂಡಾ ಮತ್ತು ಮ್ಯಾದರಡಕ್ಕಿ ಶಾಲೆಗಳಿಗೆ ವಾರಕೊಮ್ಮೆ ಅತಿಥಿ ಶಿಕ್ಷಕರು ಬಂದು ಅಡುಗೆಗೆ ಬೇಕಾಗುವ ದಿನಸಿ ಸಾಮಗ್ರಿ ನೀಡಿ ಹೋಗುತ್ತಾರೆ ಎಂಬ ಆರೋಪವಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅತಿಥಿ ಶಿಕ್ಷಕರು, ಶಿಕ್ಷಕರು ಊರಿಗೆ ಹೋದ ಕಾರಣ ನಾನು ಶಾಲೆಗೆ ಬಂದಿದ್ದೇನೆ ಎಂದು ಹೇಳಿದರು. ಕಳಮಳ್ಳಿ ತಾಂಡದ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಇಲ್ಲಿ ಎಲ್ಲ ಜವವಾಬ್ದಾರಿಯನ್ನೂ ಅಡುಗೆ ಸಿಬ್ಬಂದಿಯೇ ವಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಳಮಳ್ಳಿ ತಾಂಡ ಶಿಕ್ಷಕ ರವಿ ಕುಮಾರ, ಪುತ್ರಿಯ ಶಾಲಾ ದಾಖಲಾತಿ ಇರುವುದರಿಂದ ಊರಿಗೆ ಹೋಗಿದ್ದೇನೆ ಎಂದು ಸಮಜಾಯಿಷಿ ನೀಡಿದರು. ತಾಲೂಕು ಅಕ್ಷರ ದಾಸೋಹ ಅಧಿಕಾರಿ ಕೆ. ಶರಣಪ ಪ್ರತಿಕ್ರಿಯಿಸಿ, ಶಾಲೆಗಳಿಗೆ ಸಂಬಂಧಪಟ್ಟ ಸಿಆರ್‌ಪಿಗಳಿಂದ ಮಾಹಿತಿ ಪಡೆದು ಲೋಪವನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

2-3 ದಿನಗಳ ಹಿಂದೆ ತಾಲೂಕಿನ ಎಲ್ಲ ಶಾಲೆಗಳ ಶಿಕ್ಷಕರಿಗೆ ಬೇಸಿಗೆ ಬಿಸಿಯೂಟದ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕೆಂದು ವಿಶೇಷ ಸಭೆ ಕರೆದು ಸೂಚಿಸಲಾಗಿದೆ. ಶಿಕ್ಷಕರು ಶಾಲೆಗೆ ಸರಿಯಾಗಿ ಹೋಗುತ್ತಿಲ್ಲ ಎಂದರೆ ಹೇಗೆ. ಕೂಡಲೇ ಶಾಲೆಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ.
ಬಸವರಾಜ, ಸಿಆರ್‌ಪಿ

ಬೇಸಿಗೆ ದಿನಗಳಲ್ಲಿ ಮಕ್ಕಳಿಗೆ ತಪ್ಪದೇ ಮಧ್ಯಾಹ್ನದ ಬಿಸಿಯೂಟ ನೀಡಬೇಕು. ಆದರೆ ಶಾಲೆಗೆ ಸರಿಯಾಗಿ ಹೋಗದೇ ಇರುವ ಶಿಕ್ಷಕರ ಬಗ್ಗೆ ಮಾಹಿತಿ ಪಡೆದು ಕ್ರಮಕೈಗೊಳ್ಳಲಾಗುವುದು.
ಎಂ. ಚನ್ನಬಸಪ್ಪ,ಬಿಇಒ

ಟಾಪ್ ನ್ಯೂಸ್

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Tawargera: ವಿದ್ಯುತ್ ತಂತಿ ತಗುಲಿ ರೈತ ಮತ್ತು ಎತ್ತು ಸಾವು

1-asdsadsad

Bakrid ಶಾಂತಿಸಭೆ: ಗಂಗಾವತಿಯಲ್ಲಿ ಮುಸ್ಲಿಂ ಮುಖಂಡರ ಪರಸ್ಪರ ವಾಗ್ವಾದ

9-dotihala-1

Dotihala: ಬಸವಣ್ಣ ಮೂರ್ತಿಯ ಮುಂದೇ ಶಿವ; ವಿಶಿಷ್ಟ ದಿಡಗಿನ ಬಸವೇಶ್ವರ ದೇವಸ್ಥಾನ

Falls: ಕಪಿಲತೀರ್ಥ ಜಲಪಾತ…: ಇದು ಕಲ್ಯಾಣ ಕರ್ನಾಟಕದಲ್ಲಿ ಇರೋ ಏಕೈಕ ಜಲಪಾತ

Falls: ಕಪಿಲತೀರ್ಥ ಜಲಪಾತ…: ಇದು ಕಲ್ಯಾಣ ಕರ್ನಾಟಕದಲ್ಲಿ ಇರೋ ಏಕೈಕ ಜಲಪಾತ

ಒಂಟಿಗಾಲಲ್ಲೇ ಬದುಕು; ನಾಗರಾಜನಿಗೆ ಆಸರೆಯಾದ ಉದ್ಯೋಗ ಖಾತ್ರಿ

ಒಂಟಿಗಾಲಲ್ಲೇ ಬದುಕು; ನಾಗರಾಜನಿಗೆ ಆಸರೆಯಾದ ಉದ್ಯೋಗ ಖಾತ್ರಿ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.