ಸಾಮಾನ್ಯ ಸಭೆಯಲ್ಲಿ ಸಾವಿನ ಸದ್ದು

•ದುರ್ಘ‌ಟನೆಗೆ ಹೊಣೆ ಯಾರು?•ಶಾಲೆ ಪಕ್ಕದ ಟಿಸಿ ಸ್ಥಳಾಂತರಿಸಿ•ನೀರು ಪೂರೈಸುವಲ್ಲಿ ವಿಫಲ

Team Udayavani, Aug 30, 2019, 11:52 AM IST

kopala-tdy-2

ಕೊಪ್ಪಳ: ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಇತ್ತೀಚೆಗೆ ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟ ಐವರ ವಿದ್ಯಾರ್ಥಿಗಳ ಸಾವು ಹಾಗೂ ನವಲಿಯಲ್ಲಿ ಮರಳು ಮಾಫಿಯಾಗೆ ಬಲಿಯಾದ ಮೂವರು ವಿದ್ಯಾರ್ಥಿಗಳ ಸಾವಿನ ಪ್ರಕರಣವು ಭಾರಿ ಸದ್ದು ಮಾಡಿ ಪ್ರಕರಣದಲ್ಲಿ ಯಾರು ಹೊಣೆ ಎಂದು ಪ್ರಶ್ನಿಸಿತು.

ಸಭೆ ಆರಂಭಕ್ಕೂ ಮುನ್ನ ಜಿಪಂ ಸದಸ್ಯೆ ಭಾಗ್ಯವತಿ ಪ್ರಸ್ತಾಪಿಸಿ, ಕೊಪ್ಪಳದ ಹಾಸ್ಟೆಲ್ನಲ್ಲಿ ಐವರು ವಿದ್ಯಾರ್ಥಿಗಳು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಈ ಘಟನೆ ನಡೆದಿದೆ. ಆದರೆ ಪೊಲೀಸರು ಬಂಧಿಸಿದ ಆರೋಪಿತರಿಗೆ ಒಂದೇ ದಿನದಲ್ಲಿ ಜಾಮೀನು ಸಿಕ್ಕಿದೆ. ಈ ಘಟನೆಗೆ ಯಾರು ಹೊಣೆ? ಮಕ್ಕಳ ಜೀವಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನೆ ಮಾಡಿದರಲ್ಲದೇ, ಇನ್ನೂ ಕನಕಗಿರಿ ತಾಲೂಕಿನ ನವಲಿಯಲ್ಲಿ ಅಕ್ರಮ ಮರಳು ದಂಧೆ ಮಾಫಿಯಾಗೆ ಮೂರು ಕಂದಮ್ಮಗಳ ಪ್ರಾಣಪಕ್ಷಿ ಹಾರಿಹೋಗಿದೆ. ತಂದೆ-ತಾಯಿಗೆ ಮಕ್ಕಳನ್ನು ಕಳೆದುಕೊಂಡ ದುಃಖ ನೋಡಲಾಗುತ್ತಿಲ್ಲ. ದೂರದ ಮಹಾರಾಷ್ಟ್ರದಿಂದ ಇಲ್ಲಿಗೆ ಬಂದು ಇದ್ದಲು ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಬದುಕೇ ಕತ್ತಲಾಗಿದೆ. ಆ ಕಂದಮ್ಮಗಳ ಜೀವಕ್ಕೆ ಹೊಣೆಯಾರು ಎಂದು ಅಸಮಾಧನದಿಂದಲೇ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ ಅವರು, ಎರಡೂ ಘಟನೆಗಳ ಕುರಿತಂತೆ ಕೇಸ್‌ ದಾಖಲಾಗಿದೆ. ಐವರು ವಿದ್ಯಾರ್ಥಿಗಳ ಸಾವಿನ ವಿಚಾರದಲ್ಲಿ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ ಎಂದರು.

ಟಿಸಿ, ವಿದ್ಯುತ್‌ ಕಂಬ ಸ್ಥಳಾಂತರಿಸಿ: ಇನ್ನೂ ಜಿಲ್ಲೆಯಲ್ಲಿ ಶಾಲೆ ಹಾಗೂ ಕಾಲೇಜುಗಳಲ್ಲಿ ಅಪಾಯದ ಸ್ಥಿತಿಯಲ್ಲಿರುವ ವಿದ್ಯುತ್‌ ಕಂಬ ಸೇರಿ ಟ್ರಾನ್ಸ್‌ಫಾರಂಗಳನ್ನು ಕೂಡಲೇ ಬೇರೆಡೆ ಸ್ಥಳಾಂತರ ಮಾಡಬೇಕು. ಈ ಹಿಂದೆ ನಡೆದಂತಹ ಘಟನೆಗೆ ಮತ್ತೆ ಅವಕಾಶ ಕೊಡಬಾರದು. ಕೂಡಲೇ ಅಂತಹ ಅಪಾಯದ ಸ್ಥಳಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಜೆಸ್ಕಾಂಗೆ ಎಚ್ಚರಿಕೆ ನೀಡಿದರು.

ಆದರೆ ಜೆಸ್ಕಾಂ ಅಧಿಕಾರಿ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಈಗಾಗಲೇ ಅಂತಹ ಅಪಾಯದ ಸ್ಥಳದಲ್ಲಿರುವ 116 ವಿದ್ಯುತ್‌ ಕಂಬ, ವಿದ್ಯುತ್‌ ಪರಿವರ್ತಕ ಗುರುತು ಮಾಡಿದೆ. ಶಾಲೆ, ವಸತಿ ನಿಲಯಗಳಿಂದ ನಮಗೆ ಅರ್ಜಿ ಬರುತ್ತಿವೆ. ಅವುಗಳಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು.

ಆಡಳಿತ ಯಂತ್ರ ಕುಸಿದಿದೆಯೋ?: ಸದಸ್ಯ ಮಹೇಶ ಮಾತನಾಡಿ, ಸಭೆಗೆ ಅಧಿಕಾರಿಗಳು ಬರಲ್ಲ. ನಾವು ಕೇಳಿದ ಮಾಹಿತಿ ಕೊಡಲ್ಲ. ಪ್ರಗತಿಯಂತೂ ಅಷ್ಟಕ್ಕಷ್ಟೇ ಹಲವು ಬಾರಿ ಹೇಳಿದರೂ ನಮಗೆ ಸ್ಪಂದನೆ ಮಾಡಲ್ಲ. ಅಧ್ಯಕ್ಷರು ಕರೆದ ಸ್ಥಾಯಿ ಸಮಿತಿಗೆ ಅಧಿಕಾರಿಗಳೇ ಗೈರು ಹಾಜರಾಗಿದ್ದಾರೆ. ಇಲ್ಲಿ ಆಡಳಿತ ಯಂತ್ರವೇ ಕುಸಿದಿದೆಯೋ ಎಂದು ಪ್ರಶ್ನೆ ಮಾಡಿದರು.

ಎನ್‌ಆರ್‌ಡಬ್ಲ್ಯೂಪಿಗೆ ಪ್ರಸಕ್ತ ಸಾಲಿನ ಪ್ರಸ್ತಾವನೆಗೆ ಜಿಪಂ ಸಭೆಯಲ್ಲಿ ಅನುಮತಿ ನೀಡಿಲ್ಲ. ಆದರೂ ಮೇಲ್ಮಟ್ಟದ ಅಧಿಕಾರಿಗಳು ಕೇಳಿದ್ದಾರೆಂದು ಅನುಮೋದನೆ ನೀಡಲಾಗಿದೆ. ಅಂದರೆ ಸಾಮಾನ್ಯ ಸಭೆ, ಜನಪ್ರತಿನಿಧಿಗಳಿಗೆ ಬೆಲೆಯೇ ಇಲ್ಲವೇ? ನಾವು ಅನುಮೋದನೆ ಕೊಡದೇ ಹೇಗೆ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ ಎಂದು ಅಧ್ಯಕ್ಷ ವಿಶ್ವನಾಥರಡ್ಡಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇದು ನಮಗೆ ಮಾಡಿದ ಅವಮಾನ, ಜಿಪಂ ಸಭೆಯಲ್ಲಿ ಹಕ್ಕು ಚ್ಯುತಿ ಮಾಡಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮವಾಗಲೇಬೇಕು ಎಂದು ಒತ್ತಾಯ ಮಾಡಿದರು.

ಶುದ್ಧ ಘಟಕಕ್ಕೆ ಮೊಬೈಲ್ ಆ್ಯಪ್‌: ಇನ್ಮುಂದೆ ಜಿಲ್ಲೆಯ ಶುದ್ಧ ಕುಡಿಯುವ ನೀರಿನ ಘಟಗಳ ಸ್ಥಿತಿಗತಿ ತಿಳಿಯಲು ಮೊಬೈಲ್ ತಂತ್ರಜ್ಞಾನ ತರುವ ಸಿದ್ಧತೆ ನಡೆಸಿದ್ದೇವೆ. ಘಟಕ ಸರಿಯಿದ್ದರೆ ಪಿಡಿಒ ಅದರ ಎರಡು ಭಾವಚಿತ್ರ ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಕೆಟ್ಟಿದ್ದರೂ ಫೋಟೋ ಅಪ್‌ಲೋಡ್‌ ಮಾಡಬೇಕು. ಇಲ್ಲಿ ಪಿಡಿಒ ನಿರ್ಲಕ್ಷ ್ಯ ವಹಿಸಿದ್ದರೆ ತಪ್ಪಿತಸ್ಥರ ಮೇಲೆ ಕ್ರಮವಾಗಲಿದೆ. ವಿವಿಧ ಏಜೆನ್ಸಿಗಳಿಗೆ ಇಲ್ಲಿ ಜಾರಿಕೊಳ್ಳಲು ಅವಕಾಶವಿಲ್ಲ. ಆ ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದು, ಇನ್ನೊಂದು ತಿಂಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಜಿಪಂ ಸಿಇಒ ರಘುನಂದನ್‌ ಮೂರ್ತಿ ಹೇಳಿದರು.

ಮುಂಡರಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 43 ಕೋಟಿ ರೂ. ಖರ್ಚು ಮಾಡಿದೆ. ಆದರೆ ಒಂದೇ ಒಂದು ಗ್ರಾಮಕ್ಕೆ ಹನಿ ನೀರು ಹರಿಸಿಲ್ಲ. ನನಗೆ ಜಿಪಂ ಸದಸ್ಯನಾಗಿದ್ದಕ್ಕೆ ಜಿಗುಪ್ಸೆ ಬಂದಿದೆ. 8 ವರ್ಷಗಳಿಂದ ವಿಳಂಬ ಮಾಡಲಾಗುತ್ತಿದೆ. ಇದಕ್ಕೆ ಹೊಣೆಯಾರು? ಗುತ್ತಿಗೆದಾರನಿಗೆ ಅನುದಾನ ಬಿಡುಗಡೆ ಮಾಡಿದೆ.

ಬೆಳೆವಿಮೆ ಸಕಾಲಕ್ಕೆ ಖಾತೆಗೆ ಹಾಕಿ: ಜಿಲ್ಲೆಯಲ್ಲಿ 2016-17ನೇ ಸಾಲಿನಲ್ಲಿ ಬೆಳೆ ವಿಮೆಗೆ ತುಂಬಿದ ರೈತರಲ್ಲಿ 17 ಸಾವಿರ ರೈತರ ಖಾತೆ, ಆಧಾರ್‌ ಸಂಖ್ಯೆ ಸೇರಿ ಇತರೆ ಮಾಹಿತಿ ತಪ್ಪಾಗಿವೆ. ಹೀಗಾಗಿ 40 ಕೋಟಿ ಹಣ ಬಾಕಿ ಇದೆ. ಅದನ್ನು ಸರಿಪಡಿಸಿ ಕೂಡಲೇ ಖಾತೆಗೆ ಜಮೆ ಮಾಡಲಿದ್ದೇವೆ ಎಂದು ಜಂಟಿ ಕೃಷಿ ನಿರ್ದೇಶಕಿ ಶಬಾನಾ ಶೇಖ್‌ ಅವರು ಹೇಳಿದರು.

ಸಭೆಯಲ್ಲಿ ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ, ಜಿಪಂ ಸಿಇಒ ರಘುನಂದನ ಮೂರ್ತಿ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.