ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ: ಇಕ್ಬಾಲ್ ಅನ್ಸಾರಿ ಸ್ಪಷ್ಟನೆ


Team Udayavani, Jun 27, 2021, 8:57 AM IST

iqbal ansari

ಗಂಗಾವತಿ: ತಮಗೆ ಆಗದ ಕೆಲವರು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದು ಇದು ಸರಿಯಲ್ಲ. ತಾವು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಇಕ್ಬಾಲ್ ಅನ್ಸಾರಿ ತಮ್ಮ ಹೇಳಿದ್ದಾರೆ.

ತಮ್ಮ ಫೇಸ್ ಬುಕ್ ಹಾಗೂ ಟ್ವಿಟರ್ ಗಳಲ್ಲಿ  ಆಡಿಯೋ ಮೂಲಕ ಹೇಳಿಕೆ ನೀಡಿ, ಕೋವಿಡ್ ಮಹಾಮಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕ್ರಮದಲ್ಲಿ ತಾವು ಪಾಲ್ಗೊಂಡಿಲ್ಲ. ಇದನ್ನೇ ಇಟ್ಟುಕೊಂಡು ತಮ್ಮ ಕೆಲವು ವಿರೋಧಿಗಳು ಇಕ್ಬಾಲ್ ಅನ್ಸಾರಿ ಕಾಂಗ್ರೆಸ್ ತೊರೆದು ಅನ್ಯ ಪಕ್ಷ ಸೇರಲಿದ್ದಾರೆಂದು ಗಾಳಿ ಸುದ್ದಿಯನ್ನು ಹರಡುತ್ತಿದ್ದಾರೆ. ಇಂಥ ಗಾಳಿ ಸುದ್ದಿಗೆ  ಕಾಂಗ್ರೆಸ್ ಕಾರ್ಯಕರ್ತರು ಮತ್ತು ತಮ್ಮ ಅಭಿಮಾನಿಗಳು ಕಿವಿಗೊಡಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ.

ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ತಾವು ಮನೆಯಲ್ಲೇ ಇದ್ದು ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೊಡಿಸುವುದು, ಅವರಿಗೆ ಆಹಾರ ಕಿಟ್ ಗಳನ್ನು ಕೊಡಿಸುವುದು, ಆಕ್ಸಿಜನ್ ವ್ಯವಸ್ಥೆ ಮಾಡುವುದು ಸೇರಿದಂತೆ ಕಾರ್ಯಕರ್ತರು ಅಭಿಮಾನಿಗಳ ಮುಖಾಂತರ ಸೋಂಕಿತರಿಗೆ ನೆರವಾಗುತ್ತಿದ್ದೇನೆ. ಕೋವಿಡ್ ಕಡಿಮೆಯಾದ ತಕ್ಷಣ ಗಂಗಾವತಿ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿತ ಮಾಡಿ ಪುನಃ ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶ. ಇದಕ್ಕೆ ಕಾರ್ಯಕರ್ತರು ಅಭಿಮಾನಿಗಳು ಹೆಗಲಿಗೆ ಹೆಗಲು ಕೊಟ್ಟು ದುಡಿಯಲು ಸಿದ್ಧರಾಗಿದ್ದಾರೆ. ಖಚಿತವಾಗಿ ಗಂಗಾವತಿ ಕ್ಷೇತ್ರದಲ್ಲಿ ಪುನಃ ಗೆದ್ದು ಇಲ್ಲಿ ಮಾಡಬೇಕಾದ ಕೆಲಸ ಬಹಳಷ್ಟಿದೆ. ಆದ್ದರಿಂದ ಅಭಿಮಾನಿಗಳು ಕಾರ್ಯಕರ್ತರು ಯಾವುದೇ ಕುತಂತ್ರಿಗಳ ಗಾಳಿಸುದ್ದಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಹುಣಸೂರು: ಬಾಳೆ ತೋಟದಲ್ಲಿ ಬೆಳೆದಿದ್ದ ಗಾಂಜಾ ಗಿಡ ಪೊಲೀಶರ ವಶ: ಆರೋಪಿ ಪರಾರಿ

ಇತ್ತೀಚೆಗೆ ಜೆಡಿಎಸ್ ಮುಖಂಡ ಮಾಜಿ ಎಂಎಲ್ ಸಿ ಎಚ್.ಆರ್ ಶ್ರೀನಾಥ್ ಇಕ್ಬಾಲ್ ಅನ್ಸಾರಿ ಜೆಡಿಎಸ್ ಗೆ ಬರುವುದು ತಮಗೆ ಗೊತ್ತಿಲ್ಲ, ವರಿಷ್ಠರಿಗೆ ಗೊತ್ತು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ಪೆಟ್ರೋಲ್ ದರ ಖಂಡಿಸಿ ನಡೆಸಿದ ಕಾಂಗ್ರೆಸ್ ಪ್ರತಿಭಟನೆ ನಿಮಿತ್ತ  ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದ ಕಾಂಗ್ರೆಸ್ ಉಸ್ತುವಾರಿ ಎಂಎಲ್ ಸಿ ಪ್ರಕಾಶ್ ರಾಠೋಡ್ ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಕುಂಠಿತವಾಗಿದ್ದು ಈ ಕುರಿತು ಇಕ್ಬಾಲ್ ಅನ್ಸಾರಿ ಅವರ ಜತೆ ಮಾತನಾಡಿ ಪಕ್ಷ ಸಂಘಟನೆ ಮಾಡುವುದಾಗಿ ತಿಳಿಸಿದ್ದರು. ನಂತರ ಈ ಸಾರಿ ಅವರು ಕಾಂಗ್ರೆಸ್ ತೊರೆದು ಅನ್ಯ ಪಕ್ಷ ಸೇರಲಿದ್ದಾರೆ ಎಂಬ ಗಾಳಿ ಸುದ್ದಿ ಗಂಗಾವತಿ ಕ್ಷೇತ್ರದಾದ್ಯಂತ ಹರಡಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಅನ್ಸಾರಿ ಸ್ಪಷ್ಟನೆ ನೀಡಿದ್ದಾರೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.