ತುಂಗಭದ್ರಾ ತಟದಲ್ಲಿ ಮನೆಗೆ ನುಗ್ಗಿದ ನೀರು

Team Udayavani, Aug 11, 2019, 5:42 PM IST

ಕೊಪ್ಪಳ: ವಿವಿಧೆಡೆ ಮಳೆಯ ಆರ್ಭಟದ ತುಂಗಭದ್ರಾ ಜಲಾಶಯಕ್ಕೆ ಅತ್ಯಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಜಲಾಶಯದ ತಟದಲ್ಲಿರುವ ತಾಲೂಕಿನ ಹುಲಿಗಿಯ ಹುಲಿಗೆಮ್ಮ ದೇವಸ್ಥಾನದ ಸಮೀಪದಲ್ಲಿ ನಾಲ್ಕು ಮನೆಗಳಿಗೆ ನೀರು ನುಗ್ಗಿದ್ದು ಕುಟುಂಬಗಳನ್ನು ಅಲ್ಲಿಂದ ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

ಹುಲಿಗೆಮ್ಮ ದೇವಸ್ಥಾನವು ನದಿ ತಟದಲ್ಲಿಯೇ ಇದ್ದು, ದೇವಸ್ಥಾನದಲ್ಲಿ ಕೆಲಸ ನಿರ್ವಹಿಸುವ ಕುಟುಂಬಗಳು ನದಿಯ ತಟದಲ್ಲಿ ವಾಸ ಮಾಡುತ್ತಿದ್ದವು. ಡ್ಯಾಂಗೆ ಒಳ ಹರಿವು 2 ಲಕ್ಷ ಕ್ಯೂಸೆಕ್ ನಷ್ಟಿದ್ದ ಹಿನ್ನೆಲೆಯಲ್ಲಿ ತಡರಾತ್ರಿಯೇ ಹೆಚ್ಚಿನ ಪ್ರಮಾಣದ ನೀರನ್ನು ನದಿ ಪಾತ್ರಗಳಿಗೆ ಹರಿ ಬಿಡಲಾಗಿದೆ.

ಹೀಗಾಗಿ ದೇವಸ್ಥಾನದಲ್ಲಿ ಕೆಲಸ ಮಾಡಿಕೊಂಡಿದ್ದ ಕುಟುಂಬ ಮನೆಗಳಿಗೆ ನೀರು ನುಗ್ಗಿದೆ. ಅವರೆಲ್ಲರಿಗೂ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದ್ದು, ನದಿತಟಗಳತ್ತ ಯಾರೂ ತೆರಳದಂತೆ ದೇವಸ್ಥಾನ ಆಡಳಿತ ಮಂಡಳಿ ಹಾಗೂ ತಹಸೀಲ್ದಾರ್ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ