ಎಸ್‌ಸಿಪಿ-ಟಿಎಸ್‌ಪಿ ಅನುದಾನ ಸಮರ್ಪಕ ಬಳಸಿ

Team Udayavani, Sep 21, 2019, 11:09 AM IST

ಕೊಪ್ಪಳ: ವಿವಿಧ ಇಲಾಖೆಗಳಿಗೆ ಎಸ್‌ಸಿಪಿ, ಟಿಎಸ್‌ಪಿಯಡಿ ನೀಡಲಾಗುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದರಿಗೆ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಲಾಗುವ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಬೇಕು. ಈ ಯೋಜನೆಯಡಿ ಯಾವ ಯಾವ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಬಂದಿದೆ ಹಾಗೂ ಬಂದಿರುವ ಅನುದಾನವನ್ನು ಯಾವ ಯಾವ ಉದ್ದೇಶಗಳಿಗೆ ವೆಚ್ಚ ಮಾಡಲಾಗಿದೆ ಎಂಬುವುದರ ಬಗ್ಗೆ ವರದಿ ಸಲ್ಲಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ರುದ್ರಭೂಮಿ ಸಮಸ್ಯೆಗಳನ್ನು ನಿವಾರಣೆ ಮಾಡಿ. ಗಂಗಾ ಕಲ್ಯಾಣ ಯೋಜನೆಯಡಿ ಕೃಷಿಕರಿಗೆ ಬೋರ್‌ವೆಲ್‌ ಸೌಲಭ್ಯಗಳನ್ನು ತ್ವರಿತವಾಗಿ ನೀಡಿ, ಅಗತ್ಯ ವಿದ್ಯುತ್‌ ಸೌಲಭ್ಯ ಕಲ್ಪಿಸಬೇಕು. ಎಸ್‌ಸಿ, ಎಸ್‌ಟಿ ವಸತಿ ಶಾಲೆಗಳು ಹಾಗೂ ವಸತಿ ನಿಲಯಗಳ ವ್ಯವಸ್ಥೆಯು ಅಚ್ಚುಕಟ್ಟಾಗಿರಬೇಕು. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಅ ಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.

2018-19ನೇ ಸಾಲಿನ ಹಾಗೂ ಇತರೆ ಹಿಂದಿನ ಸಾಲಿನ ಯಾವುದೇ ಯೋಜನೆಗಳ ಸೌಲಭ್ಯಗಳು ಬಾಕಿ ಉಳಿಯದಿರಲಿ. ಅಲ್ಲದೇ ಪ್ರಸಕ್ತ ಸಾಲಿನ ಕಾರ್ಯಕ್ರಮಗಳಲ್ಲೂ ಫಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ಶೀಘ್ರ ಸೌಲಭ್ಯ ಕಲ್ಪಿಸುವಂತೆ ಸಂಬಂ ಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಹಾಗೂ ಇತರೇ ಇಂಜನಿಯರಿಂಗ್‌ ಸಂಸ್ಥೆಗಳಿಂದ ನಡೆಯುತ್ತಿರುವ ರಸ್ತೆ ಕಾಮಗಾರಿಗಳ ಸ್ಥಿತಿಗಳ ಬಗ್ಗೆ ಮಾಹಿತಿ ಪಡೆಯಲು ಲೋಕೋಪಯೋಗಿ ಇಲಾಖೆ ಅ ಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ದುರಸ್ತಿ ಅವಶ್ಯವಿದ್ದಲ್ಲಿ ಅವುಗಳನ್ನು ಸರಿಪಡಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆಸಂಬಂಧಿಸಿದಂತೆ ಭೂಸ್ವಾ ಧೀನ ಪ್ರಕ್ರಿಯೆ ವರದಿಯನ್ನು ಜಿಲ್ಲಾ  ಧಿಕಾರಿಗೆ ಸಲ್ಲಿಸಬೇಕು. ಭೂಸ್ವಾ ಧೀನ ಪ್ರಕ್ರಿಯೆಗೆ ಸಂಬಂ ಧಿಸಿದ ಅನುದಾನವನ್ನು ರಾಜ್ಯ ಸರ್ಕಾರದಿಂದ ಮಂಜೂರಿ ಮಾಡಲಾಗುವುದು ಎಂದರು.

ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ತಾಲೂಕಿನ ಹಿರೇಬಗನಾಳದಿಂದ ಕಾಸನಕಂಡಿವರೆಗೆ ಕಾಂಕ್ರೀಟ್‌ ರಸ್ತೆಯಾಗಬೇಕಾಗಿದೆ. ಈ ಭಾಗವು ಕೈಗಾರಿಕಾ ಪ್ರದೇಶದಿಂದ ಕೂಡಿದ್ದು, ಇಲ್ಲಿ ಭಾರೀ ವಾಹನಗಳ ಸಂಚಾರ ಹೆಚ್ಚಿದೆ. ಆದ್ದರಿಂದ ಇಲ್ಲಿ ಸಿಸಿ ರಸ್ತೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಈ ರಸ್ತೆ ಎಷ್ಟು ಕಿ.ಮೀ. ಇದೆ. ಯೋಜನೆ ಅಂದಾಜು ಮೊತ್ತ ಎಷ್ಟಾಗಲಿದೆ ಎಂಬುವುದರ ಕುರಿತು ನಕಾಶೆ ತಯಾರಿಸಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಅ ಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಂಸದ ಕರಡಿ ಸಂಗಣ್ಣ, ಜಿಲ್ಲಾ ಧಿಕಾರಿ ಪಿ. ಸುನೀಲಕುಮಾರ್‌, ಜಿಪಂ ಸಿಇಒ ರಘುನಂದನ್‌ ಮೂರ್ತಿ, ಎಸ್‌ಪಿ ಜಿ. ಸಂಗೀತಾ, ಹಾಲಪ್ಪ ಆಚಾರ್‌, ಪರಣ್ಣ ಮುನವಳ್ಳಿ, ಬಸವರಾಜ ದಢೇಸುಗೂರು, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಗೂಳಪ್ಪ ಹಲಗೇರಿ, ತಾಪಂ ಅಧ್ಯಕ್ಷ ಬಾಲಚಂದ್ರನ್‌ ಸೇರಿದಂತೆ ವಿವಿಧ ಇಲಾಖೆಗಳ ಅ ಧಿಕಾರಿಗಳು ಉಪಸ್ಥಿತರಿದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ದೋಟಿಹಾಳ: ಗ್ರಾಮದ ದೇವಲ ಮಹರ್ಷಿ ಸಾಂಸ್ಕೃತಿಕ ಸಮುದಾಯ ಭವನದ ಕಟ್ಟಡದ ಮುಂದುವರಿದ ಕಾಮಗಾರಿಗೆ ಶನಿವಾರ ಸಂಸದ ಕರಡಿ ಸಂಗಣ್ಣ ಅವರು ಭೂಮಿಪೂಜೆ ಮಾಡಿ ಚಾಲನೆ ನೀಡಿದರು. ಈ...

  • ಗಂಗಾವತಿ: ಗ್ರಂಥಾಲಯ ಓದುಗನ ಅತ್ಯುತ್ತಮ ಗೆಳೆಯ ಎಂಬ ಮಾತು ಸತ್ಯವಾದದ್ದು. ಒಂದು ಪುಸ್ತಕ ಹಲವು ಗೆಳೆಯರಿದ್ದಂತೆ ಎಂಬ ಮಾತಿದೆ. ಪುಸ್ತಕ ಓದಿಗರಿಗೆ ಒಂಟಿತನ ಕಾಡುವುದಿಲ್ಲ....

  • ಕೊಪ್ಪಳ: ಜಿಲ್ಲಾ ಕೇಂದ್ರಕ್ಕೆ ಸ್ನಾತಕೋತ್ತರ ಕೇಂದ್ರ ಮಂಜೂರಾತಿ ಮಾಡಿ ಎನ್ನುವ ಬಹುವರ್ಷಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿ ವಿಜಯನಗರ ಶ್ರೀಕೃಷ್ಣ ದೇವರಾಯ ಸ್ನಾತಕೋತ್ತರ...

  • ಕುಷ್ಟಗಿ: ಮಸಾರಿ (ಕೆಂಪು) ಜಮೀನಿನಲ್ಲಿ 2018-19ನೇ ಸಾಲಿನಲ್ಲಿ ಹಾನಿಯಾದ ಬೆಳೆಗೆ ವಿಮಾ ಪರಿಹಾರಕ್ಕಾಗಿ ಆಗ್ರಹಿಸಿ, ರೈತ ಸಂಘ ಮಾಲಗಿತ್ತಿ ಗ್ರಾಮ ಘಟಕದ ನೇತೃತ್ವದಲ್ಲಿ...

  • ಯಲಬುರ್ಗಾ: ಪಟ್ಟಣದಲ್ಲಿರುವ ತಾಲೂಕು ಕೇಂದ್ರದ ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಕೊರತೆಯಿಂದ ಓದುಗರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. 1984ರಲ್ಲಿ...

ಹೊಸ ಸೇರ್ಪಡೆ