ಶಿರಗುಂಪಿ ರಸ್ತೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ

Team Udayavani, Oct 6, 2019, 1:58 PM IST

ಯಲಬುರ್ಗಾ: ತಾಲೂಕಿನ ಶಿರಗುಂಪಿ ಗ್ರಾಮದ ರಸ್ತೆ ಮಳೆಗೆ ಕೊಚ್ಚಿ ಹೋಗಿದ್ದು, ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು ಸಾರ್ವಜನಿಕರು ಪರದಾಡುವಂತಾಗಿದೆ. ಈ ರಸ್ತೆಯು ಗ್ರಾಮದಿಂದ ಕೆರಿಬಸವೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುತ್ತದೆ. ದಿನನಿತ್ಯ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಇದೇ ರಸ್ತೆಯಲ್ಲಿ ಓಡಾಡುತ್ತಾರೆ. ಈಗಾಗಲೇ ಉತ್ತಮ ಮಳೆಯಾಗಿರುವುದರಿಂದ ಹಿಂಗಾರಿ ಬಿತ್ತನೆ ಕಾರ್ಯ ಚುರುಕುಗೊಂಡಿವೆ. ಆದರೆ ಇಲ್ಲಿನ ರೈತರು ತಮ್ಮ ಜಮೀನುಗಳಿಗೆ ಹೋಗಲು ರಸ್ತೆ ಇಲ್ಲದಂತಾಗಿದೆ.

ಬಿತ್ತನೆ ಕಾರ್ಕೈ ಗೊಳ್ಳಲು ಟ್ರಾಕ್ಟರ್‌, ಬಂಡಿ, ಎತ್ತುಗಳ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಸಾವಿರಾರು ಭಕ್ತರು ಪ್ರತಿನಿತ್ಯ ದೇವಸ್ಥಾನಕ್ಕೆ ಬರುತ್ತಾರೆ. ಆದರೆ ಈ ರಸ್ತೆ ಹಾಳಾಗಿ ಸುಮಾರು ತಿಂಗಳಾದರೂ ಸಂಬಂಧಿಸಿದ ಯಾವ ಅಧಿಕಾರಿಗಳು, ಗ್ರಾಪಂನವರು ಇತ್ತ ಗಮನ ಹರಿಸುತ್ತಿಲ್ಲ. ಇದು ಗದಗ ಜಿಲ್ಲೆಯ ರೋಣ ತಾಲೂಕಿನ ರಾಜೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯೂ ಆಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ರಸ್ತೆ ದುರಸ್ತಿಗೆ ಮುಂದಾಗಬೇಕು. ಇಲ್ಲದಿದ್ದರೆಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಶಿರಗುಂಪಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ