ಅರ್ಧಂಬರ್ಧ ಕಾಮಗಾರಿಗೆ ವಾರ್ಡ್‌ ನಿವಾಸಿಗಳ ಬೇಸರ


Team Udayavani, Oct 30, 2019, 2:48 PM IST

kopala-tdy-2

ಕಾರಟಗಿ: ಕಳೆದ ಎರಡು ವರ್ಷದ ಹಿಂದೆ  ಪುರಸಭೆಗೆ ನಗರೋತ್ಥಾನ ಯೋಜನೆಯಡಿ ಮಂಜೂರಾದ ಕಾಮಗಾರಿಗಳು ಇವರೆಗೂ ಪೂರ್ಣಗೊಂಡಿಲ್ಲ. ಕೆಲ ವಾರ್ಡ್‌ಗಳಲ್ಲಿ ಮಾತ್ರ ಅರ್ಧಂಬರ್ಧ ಕಾಮಗಾರಿ ನಡೆದಿವೆ. ಇನ್ನು ಕೆಲ ವಾರ್ಡ್‌ಗಳಲ್ಲಿ ಕಾಮಗಾರಿ ಆರಂಭವೇ ಆಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ನಗರೋಥಾನ ಯೋಜನೆಯಡಿ 6.5 ಕೋಟಿ ರೂ.ಗಳ ಕಾಮಗಾರಿಗೆ ಕಳೆದ 2 ವರ್ಷದ ಹಿಂದೆ ಅಂದಿನ ಶಾಸಕ ಶಿವರಾಜ ತಂಗಡಗಿ ಭೂಮಿಪೂಜೆ ನಡೆಸಿದರು.

ನಂತರ ನೂತನವಾಗಿ ಆಯ್ಕೆಯಾದ ಶಾಸಕ ಬಸವರಾಜ ದಢೇಸೂಗುರ ಮತ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದರು. ಆದರೂ ಕೆಲವು ವಾರ್ಡ್‌ಗಳಲ್ಲಿ ಮಾತ್ರ ಕಾಮಗಾರಿ ಆರಂಭಿಸಿದ್ದು, ಅದು ಕೂಡ ಅರ್ಧಂಬರ್ಧ ಬೇರೆ ವಾರ್ಡ್‌ಗಳಲ್ಲಿ ಇವರೆಗೂ ಕಾಮಗಾರಿಯ ಅವಶೇಶಗಳು ಕೂಡ ಹಾಕಿಲ್ಲ ಎಂದು ನಾಗರಿಕರು ದೂರಿದ್ದಾರೆ.

ಭೂಮಿಪೂಜೆ ನಡೆಸಿ ಒಂದು ವರ್ಷ 4 ತಿಂಗಳು ಗತಿಸಿದರೂ ಇವರೆಗೂ ಕಾಮಗಾರಿ ನಡೆಸಿಲ್ಲ. ಈ ಕುರಿತು ಸೋಮವಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರು ಭೇಟಿ ನೀಡಿದಾಗ ನಿವಾಸಿಗಳು ಅಲ್ಲಿನ ಸಮಸ್ಯೆ ಬಿಚ್ಚಿಟ್ಟಿದ್ದಾರೆ. ವಾರ್ಡ್‌ಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಿಸಿ ರಸ್ತೆ ಚರಂಡಿ ನಿರ್ಮಿಸುವುದಾಗಿ ಭೂಮಿಪೂಜೆ ನಡೆಸಿದ್ದು ಇವರೆಗೂ ಯಾವುದೇ ಕೆಲಸವಾಗಿಲ್ಲ. ಅಲ್ಲದೆ ವಾರ್ಡ್‌ ಆರೋಗ್ಯ ಕೇಂದ್ರಕ್ಕೆ ಸೂಕ್ತವಾದ ಬೀದಿ ದೀಪದ ವ್ಯವಸ್ಥೆ ಇರುವುದಿಲ್ಲ. ರಾತ್ರಿಯಾಯಿತೆಂದರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕತ್ತಲು ಆವರಿಸಿಕೊಂಡಿರುತ್ತದೆ. ಸಿಸಿ ರಸ್ತೆ ಚರಂಡಿ ಅಗತ್ಯ ಸೌಲಭ್ಯಗಳನ್ನು ಕೂಡಲೇ ಒದಗಿಸಲು ಅಧಿಕಾರಿಗಳಿಗೆ ಆದೇಶಿಸಿ ಎಂದು ವಾರ್ಡ್‌ ಗಳ ಸ್ಥಿತಿಗತಿಯ ಬಗ್ಗೆ ಗಮನಕ್ಕೆ ತಂದರು. ಶಾಸಕರ ಜತೆಗಿದ್ದ ಪುರಸಭೆ ಮುಖ್ಯಾಧಿಕಾರಿ ಎನ್‌.ಶಿವಲಿಂಗಪ್ಪನವರಿಗೆ ಶಾಸಕರು ವಾರ್ಡ್‌ ಗಳ ಸಮಸ್ಯಯ ಕುರಿತು ಪರಿಶೀಲಿಸುವಂತೆ ಸೂಚಿಸಿದರು.

ನಗರೋಥ್ಥಾನ ಯೋಜನೆಯಡಿ ಆರಂಭವಾದ ಕಾಮಗಾರಿಗಳು ನಡೆಯುತ್ತಿದ್ದು, ಇನ್ನು 6 ವಾರ್ಡ್‌ಗಳಲ್ಲಿ ಮಾತ್ರ ಬಾಕಿ ಇವೆ. ಇನ್ನು ಕೆಲವಾರ್ಡ್‌ಗಳಲ್ಲಿ ಸಾರ್ವಜನಿಕರ ಹಾಗೂ ತಾಂತ್ರಿಕ ತೊಂದರೆಗಳಿಂದ ಕೆಲಸಗಳು ಮಂದಗತಿಯಲ್ಲಿ ಸಾಗಿವೆ. ನವೆಂಬರ್‌ ಅಂತ್ಯದಲ್ಲಿ ಯೋಜನೆಯಡಿ ಮಂಜೂರಾದ ಎಲ್ಲಾ ಕಾಮಗಾರಿಗಳು ಸಂಪೂರ್ಣವಾಗಿ ಮುಗಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಎನ್‌.ಶಿವಲಿಂಗಪ್ಪ ತಿಳಿಸಿದರು.

ಪುರಸಭೆ ಆಡಳಿತ ಅಧಿಕಾರಿಗಳ ನಿರ್ಲಕ್ಷದಿಂದ ಜನಪ್ರತಿನಿಧಿಗಳ ಬೇಜವಾಬ್ದಾರಿಯಿಂದ ಸಂಪೂರ್ಣ ಹದಗೆಟ್ಟು ಹೋಗಿದೆ. ಪುರಸಭೆ ಸದಸ್ಯರೆ ಟೆಂಡರ್‌ ಪಡೆದು ಕಾಮಗಾರಿ ನಡೆಸುತ್ತಿದ್ದಾರೆ. ಹೀಗಾಗಿ ಕಾಮಗಾರಿ ಪೂರ್ಣಗೊಳ್ಳದೆ ಬಿಲ್‌ ಪಾವತಿಯಾಗುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ವಿವಿಧ ವಾರ್ಡ್‌ಗಳ ಸಾರ್ವಜನಿಕರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.