ಗಣಪತಿ ಮೂರ್ತಿ ಪ್ರತಿಷ್ಠಾಪನೆಯಲ್ಲೂ ಜಲ ಜಾಗೃತಿ

Team Udayavani, Sep 4, 2019, 10:32 AM IST

kopala-tdy-1

ಯಲಬುರ್ಗಾ: ತಾಪಂ ಕಚೇರಿಯಲ್ಲಿ ಪ್ರತಿಷ್ಠಾಪಿಸಲಾದ ಜಲಶಕ್ತಿ ಹೆಸರಿನ ಗಣೇಶನ ಮೂರ್ತಿ.

ಯಲಬುರ್ಗಾ: ಧಾರ್ಮಿಕ, ಅಧ್ಯಾತ್ಮಿಕತೆಗೆ ಸೀಮಿತವಾಗಿರುವ ಇಂದಿನ ಹಬ್ಬಗಳ ಮಧ್ಯೆ ಗಣೇಶನ ಹಬ್ಬದ ನಿಮಿತ್ತ ಪಟ್ಟಣದ ತಾಪಂ ಕಚೇರಿಯಲ್ಲಿ ಜಲ ಜಾಗೃತಿ ಮೂಡಿಸಲಾಗಿದೆ.

ಯಲಬುರ್ಗಾ ತಾಲೂಕು ಹಿಂದುಳಿದ ಪ್ರದೇಶವಾಗಿದೆ. ಮಳೆಯಾಶ್ರಿತ ಪ್ರದೇಶವಾಗಿದೆ. ಸಾಕಷ್ಟು ನೀರಿನ ಸಮಸ್ಯೆಯಿಂದ ತಾಲೂಕು ತಾಂಡವಾಡುತ್ತಿದೆ. ಈಗಾಗಲೇ ಕೇಂದ್ರ ಸರಕಾರ ಜಲಶಕ್ತಿ ಯೋಜನೆಯಲ್ಲಿ ಯಲಬುರ್ಗಾ ತಾಲೂಕನ್ನು ಆಯ್ಕೆ ಮಾಡಿಕೊಂಡು ಹಲವಾರು ಜಲಸಂರಕ್ಷಣೆ ಜಾಗೃತಿ ಕಾರ್ಯಕ್ರಮ ನಡೆದಿವೆ. ಈ ಹಿನ್ನೆಲೆಯಲ್ಲಿ ತಾಪಂ ಕಚೇರಿಯಲ್ಲಿ ಮಣ್ಣಿನ ಗಣೇಶನ ಮೂರ್ತಿ ಸ್ಥಾಪನೆ ಮಾಡಿ ಧಾರ್ಮಿಕ ಹಬ್ಬಗಳ ಮೂಲಕ ಜಾಗೃತಿಗೆ ಮುಂದಾಗಿರುವ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಪರಿಸರ ಸ್ನೇಹಿ ಗಣೇಶನ ಕೈಯಲ್ಲಿ ಮುಂದಿನ ಪೀಳಿಗೆಗಾಗಿ ನೀರು ಉಳಿಸಿ ಎಂಬ ಫಲಕ ಹಾಕಲಾಗಿದೆ. ಹಬ್ಬದಲ್ಲಿಯೂ ಸಹ ತಾಪಂ ಅಧಿಕಾರಿಗಳು ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದ್ದಾರೆ.

ಯಲಬುರ್ಗಾ ತಾಪಂ ಕಚೇರಿಯಲ್ಲಿ ಇದುವರೆಗೂ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿರಲಿಲ್ಲ. ಈಗಿನ ಇಒ ಡಾ| ಡಿ.ಮೋಹನ ಅವರು ವಿಶೇಷ ಕಾಳಜಿ ವಹಿಸಿ ತಾಪಂ ಹಾಗೂ ಪಿಡಿಒ ಹಾಗೂ ಸಿಬ್ಬಂದಿ ಜತೆ ಚರ್ಚಿಸಿ ಇದೇ ಮೊದಲ ಬಾರಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಮೊದಲ ಸಲ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯೇ ಮಾದರಿಯಾಗಿದೆ.

ಇಒ ಡಿ.ಮೋಹನ ಅವರು ತಾಲೂಕಿಗೆ ಬಂದು ಐದು ತಿಂಗಳುಗಳು ಆಗಿವೆ ಅವರು ನಿರಂತರ ಜಲಶಕ್ತಿ ಅಭಿಯಾನಕ್ಕೆ ಒತ್ತು ನೀಡಿದ್ದಾರೆ. ಈಗಾಗಲೇ ತಾಲೂಕಿಗೆ ಎರಡು ಭಾರೀ ಕೇಂದ್ರದ ತಂಡದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಅಗಸ್ಟ ತಿಂಗಳಲ್ಲಿ ಎರಡನೇ ಭಾರೀ ಭೇಟಿ ನೀಡಿದ ಕೇಂದ್ರದ ಜಲತಂಡದ ಮುಖ್ಯಸ್ಥ ಪ್ರವೀಣ ಮೆಹತೋ ಸಹ ಇಲ್ಲಿನ ಜಲ ಜಾಗೃತಿ ಕಾರ್ಯಕ್ರಮಗಳನ್ನು ಕಂಡು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಗಣೇಶನ ಮೂರ್ತಿ ಪ್ರತಿಷ್ಠಾಪನೆ ಪಕ್ಕದಲ್ಲಿಯೇ ಜಲ ಸಂರಕ್ಷಣೆ ಗ್ರಾಪಂ ಕಚೇರಿ, ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರಗಳನ್ನು ಚಿತ್ರದಲ್ಲಿ ಬಿಡಿಸಿ ಅವುಗಳಿಗೆ ಮಳೆ ನೀರು ಕೊಯ್ಲು ಮಾದರಿ ಅಳವಡಿಸಲಾಗಿದೆ. ಅಲ್ಲದೇ ಚೆಕ್‌ಡ್ಯಾಂ, ಕೃಷಿ ಹೊಂಡ, ಇಂಗುಗುಂಡಿಗಳನ್ನು ಸಹ ಬಿಡಿಸಲಾಗಿದೆ. ಪಟ್ಟಣದ ತಾಪಂ ಕಚೇರಿಯಲ್ಲಿ ಪ್ರತಿಷ್ಠಾಪಿಸಲಾದ ಗಣೇಶನ ಮೂರ್ತಿ ವಿಶೇಷತೆಯಿಂದ ಕೂಡಿದ್ದರಿಂದ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶದ ಜನರು ವೀಕ್ಷಣೆ ಮಾಡುತ್ತಿದ್ದಾರೆ.

ಗಣೇಶ ಹಬ್ಬದ ನಿಮಿತ್ತ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ನೌಕರರಿಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿದೆ.

ಪ್ರಸಕ್ತ ವರ್ಷದಲ್ಲಿ ತಾಲೂಕು ಜಲ ಜಾಗೃತಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆದಿದೆ. ನೀರು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಒಟ್ಟಾರೆಯಾಗಿ ತಾಪಂ ಕಚೇರಿಯಲ್ಲಿ ಇದೇ ಮೊದಲ ಬಾರಿ ಪ್ರತಿಷ್ಠಾಪಿಸಲಾದ ಗಣೇಶನ ಮೂರ್ತಿ ಮಾದರಿಯಾಗಿದೆ.

•ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.