ಶುದ್ಧೀಕರಣ ಘಟಕಗಳಿಗೆ ನೀರಿನ ಕೊರತೆ

•ಇದ್ದ ಆರರಲ್ಲಿ ನಾಲ್ಕು ಸ್ಥಗಿತ•ಖಾಸಗಿ ಘಟಕಗಳ ನೀರಿಗೆ ಹೆಚ್ಚಿದ ಬೇಡಿಕೆ

Team Udayavani, Jul 5, 2019, 2:26 PM IST

kopala-tdy-4…

ಕುಷ್ಟಗಿ: ನೀರಿನ ಅಭಾವದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ಶುದ್ಧ ನೀರಿನ ಘಟಕ ಮುಚ್ಚಿದೆ.

ಕುಷ್ಟಗಿ: ಸರ್ಕಾರದ ಮಹತ್ವಾಕಾಂಕ್ಷಿ ಶುದ್ಧ ನೀರಿನ ಘಟಕಗಳು ಸಾರ್ವಜನಿಕರ ತಾತ್ಸಾರಕ್ಕೊಳಗಾಗಿದ್ದು, ನಿರ್ವಹಣೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಸರ್ಕಾರದ ಶುದ್ಧ ನೀರಿನ ಘಟಕಗಳು ಖಾಸಗಿ ಶುದ್ಧ ನೀರಿನ ಘಟಕಗಳ ಮುಂದೆ ಮಂಕಾಗುತ್ತಿದೆ.

ಇದಕ್ಕೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯವೂ ಕಾರಣವಾಗಿದ್ದು, ಖಾಸಗಿ ಶುದ್ಧ ನೀರಿನ ಘಟಕಗಳಿಗಿಂತ ಸರ್ಕಾರದ ಶುದ್ಧ ನೀರಿನ ಘಟಕಗಳ ದರ ಕಡಿಮೆ ಇದೆ. ಆದರೂ ಸೇವೆ, ನಿರ್ವಹಣೆ ಕೊರತೆಯಿಂದ ಪಟ್ಟಣದಲ್ಲಿ ಖಾಸಗಿ ಶುದ್ಧ ನೀರಿನ ಘಟಕಗಳು ನಿರಂತರ ಸೇವೆಯಲ್ಲಿರುವುದು ಕಂಡು ಬಂದಿದೆ.

ಸರ್ಕಾರದ ಶುದ್ಧ ನೀರಿನ ಘಟಕಗಳಲ್ಲಿ 5 ರೂ.ಗೆ 20 ಲೀಟರ್‌ ಕ್ಯಾನ್‌ ದರ ನಿಗದಿಯಾಗಿದ್ದರೆ. ಖಾಸಗಿ ಶುದ್ಧ ನೀರಿನ ಘಟಕಗಳಿಗೆ ಇದೇ ಕ್ಯಾನ್‌ಗೆ 10 ರೂ. ಇದೆ. ಹೆಚ್ಚುವರಿ 5 ರೂ. ಇದ್ದರೂ ಸರದಿಯಲ್ಲಿ ನಿಂತು ತರುತ್ತಿದ್ದು, ಸರ್ಕಾರ ಶುದ್ಧ ನೀರಿನ ಘಟಕಗಳ ಬಗ್ಗೆ ತಾತ್ಸಾರ ಮನೋಭಾವ ಮುಂದುವರೆದಿದೆ.

ವಾರದಾಗ ಮೂರು ದಿನ: ಪಟ್ಟಣದಲ್ಲಿ 6 ಶುದ್ಧ ನೀರಿನ ಘಟಕಗಳ ಪೈಕಿ 2 ಘಟಕಗಳು ಚಾಲ್ತಿಯಲ್ಲಿದ್ದು, ಉಳಿದ ಘಟಕಗಳು ಮುಚ್ಚಿದ್ದರೂ ಸ್ಥಳೀಯರು, ಸಂಬಂಧಿಸಿದ ವಾರ್ಡ್‌ ಪುರಪಿತೃಗಳು ಪ್ರಶ್ನಿಸಿಲ್ಲ. ಪಟ್ಟಣದಲ್ಲಿ ಸದ್ಯ ಕೃಷ್ಣಗಿರಿ ಕಾಲೋನಿ ಹಾಗೂ ಪುರಸಭೆ ಪಕ್ಕದ ಶುದ್ಧ ನೀರಿನ ಘಟಕಗಳು ಚಾಲ್ತಿಯಲ್ಲಿವೆ. ಆದರೆ ತಹಶೀಲ್ದಾರ್‌ ಕಚೇರಿಯ ಆವರಣದಲ್ಲಿರುವ ಶುದ್ಧ ನೀರಿನ ಘಟಕಕ್ಕೆ ಪುರಸಭೆ ನೀರಿನ ಸಂಪರ್ಕವಿದ್ದು, ವಾರದಲ್ಲಿ ಮೂರು ದಿನ ನೀರು ಪೂರೈಕೆ ವ್ಯವಸ್ಥೆ ಇದ್ದು, ಅದೇ ವ್ಯವಸ್ಥೆ ಅಲ್ಲಿನ ಶುದ್ಧ ನೀರಿನ ಘಟಕಕ್ಕೂ ಇದೆ. ಹೀಗಾಗಿ ಯಾವಾಗ ಆರಂಭವಾಗಿರುತ್ತದೆ, ಯಾವಾಗ ಮುಚ್ಚಿರುತ್ತದೆಯೋ ಎಂದು ತಿಳಿಯದಾದ ಕಾರಣ ಖಾಸಗಿ ಶುದ್ಧ ನೀರಿನ ಘಟಕ ಅವಲಂಬಿಸುವಂತಾಗಿದೆ. ಸರ್ಕಾರಿ ಆಸ್ಪತ್ರೆ, 7ನೇ ವಾರ್ಡ್‌ ಹಾಗೂ ಸಂದೀಪ ನಗರದಲ್ಲಿ ನೀರಿನ ಕೊರತೆಯಿಂದ ಶುರುವಾಗಿಲ್ಲ.

ಸರ್ಕಾರದ ಶುದ್ಧ ನೀರಿನ ಘಟಕಗಳ ನಿರ್ವಹಣೆಯನ್ನು ದಾವಣಗೇರೆ ಮೂಲದ ಹೈಟೆಕ್‌ ಸಂಸ್ಥೆ ವಹಿಸಿಕೊಂಡಿದ್ದು, ಈ ಘಟಕಗಳಿಗೆ ಪುರಸಭೆ ನೀರು ಪೂರೈಸಬೇಕು. ಪುರಸಭೆ ಹಾಗೂ ಕೃಷ್ಣಗಿರಿ ಕಾಲೋನಿಯಲ್ಲಿರುವ ಶುದ್ಧ ನೀರಿನ ಘಟಕಗಳು ಓವರ್‌ ಹೆಡ್‌ ನೀರಿನ ಟ್ಯಾಂಕ್‌ ಪಕ್ಕದಲ್ಲಿರುವ ಕಾರಣದಿಂದ ನೀರಿಗೆ ಕೊರತೆ ಇಲ್ಲ. ಉಳಿದವುಗಳಿಗೆ ಕೊಳವೆಬಾವಿ ಕೊರೆಸಿದರೂ ಅಂತರ್ಜಲ ಲಭ್ಯವಾಗದ ಹಿನ್ನೆಲೆಯಲ್ಲಿ ಪುರಸಭೆಯೇ ನೀರು ಪೂರೈಸಬೇಕಿದೆ. ಶುರುವಾಗಿ ನಾಲ್ಕೈದು ವರ್ಷ ಗತಿಸಿದರೂ ನೀರಿನ ಸಂಪರ್ಕ ಕಲ್ಪಿಸಿಲ್ಲ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.