ಸದ್ದಿಲ್ಲದೇ ನಡೆದಿದೆ ಪೈಪ್‌ ಅಳವಡಿಕೆ ಕೆಲಸ


Team Udayavani, Dec 16, 2018, 3:39 PM IST

16-december-16.gif

ಕುಷ್ಟಗಿ: ಸ್ಥಳೀಯ ಶಾಸಕರಿಗೆ ಹಾಗೂ ತಾಲೂಕು ಆಳಿತದ ಗಮನಕ್ಕೆ ಇಲ್ಲದೇ ನಾರಾಯಣಪುರ ಜಲಾಶಯದಿಂದ ಕುಷ್ಟಗಿ ಮೂಲಕ ಬಳ್ಳಾರಿ ಜಿಲ್ಲೆಯ ಕುಡತಿನಿ ಉಷ್ಣ ವಿದ್ಯುತ್‌ ಸ್ಥಾವರಕ್ಕೆ ನೀರು ಸರಬರಾಜು ಕಾಮಗಾರಿ ಸದ್ದಿಲ್ಲದೇ ಭರದಿಂದ ಸಾಗಿದೆ.

ಆಲಮಟ್ಟಿ ಜಲಾಶಯದಿಂದ ಜಿಂದಾಲ್‌ ಕೈಗಾರಿಕಾ ಸಮೂಹಕ್ಕೆ ನೀರು ಪೂರೈಸುವ ಪೈಪ್‌ಲೈನ್‌ ಪಕ್ಕದಲ್ಲಿಯೇ ಈ ಕಾಮಗಾರಿ ನಡೆಯುತ್ತಿದ್ದು, ಸುಮಾರು ಒಂದು ಮೀಟರ್‌ ವ್ಯಾಸದ ಪೈಪ್‌ಲೈನ್‌ ಹಾಕಲಾಗುತ್ತಿದೆ. ನಾರಾಯಣಪುರ ಜಲಾಶಯದ ಹಿನ್ನೀರು ಬಳಸಿಕೊಂಡು ಬಳ್ಳಾರಿ ಜಿಲ್ಲೆಯ ಕುಡತಿನಿ ಉಷ್ಣ ವಿದ್ಯುತ್‌ ಸ್ಥಾವರಕ್ಕೆ ನೀರು ಪೂರೈಕೆ ಯೋಜನೆಯ ಈ ಕಾಮಗಾರಿ ಸ್ಥಳೀಯ ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಅವರ ಗಮನಕ್ಕೆ ಇಲ್ಲ. ಈ ಬಗ್ಗೆ ಪ್ರಸ್ತಾಪಿಸಿದಾಗ ಕಾಮಗಾರಿ ಬಗ್ಗೆ ಏನೂ ಗೊತ್ತಿಲ್ಲ. ಈ ಕುರಿತು ವಿಚಾರಿಸಿ ತಿಳಿದುಕೊಳ್ಳುವುದಾಗಿ ತಿಳಿಸಿದ್ದಾರೆ. ತಹಶೀಲ್ದಾರ್‌ ಕೆ.ಎಂ. ಗುರುಬಸವರಾಜ್‌ ಅವರು, ತಾಲೂಕಿನ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೆತ್ತಿಕ್ಕೊಳ್ಳುವ ಸಂದರ್ಭದಲ್ಲಿ ತಾಲೂಕಾಡಳಿತದ ಗಮನಕ್ಕೆ ತಂದು ಅನುಮತಿ ಪಡೆಯಬೇಕಿತ್ತು. ಸಂಬಂಧಿಸಿದವರು ತಮ್ಮನ್ನು ಸಂಪರ್ಕಿಸಿಲ್ಲ. ಭೂಸ್ವಾಧೀನ ಇಲ್ಲದೇ ಕಾಮಗಾರಿ ನಡೆದಿರುವುದು ನಿಜಕ್ಕೂ ಅಚ್ಚರಿಯೆನಿಸಿದೆ ಎಂದು ತಿಳಿಸಿದ್ದಾರೆ. 

ಈಗಾಗಲೇ ಪೈಪ್‌ಲೈನ್‌ ಕಾಮಗಾರಿ ಕುಷ್ಟಗಿ ಸಮೀಪದ ವಣಗೇರಾವರೆಗೂ ಬಂದಿದೆ. ಜೆಸಿಬಿ ಯಂತ್ರಗಳಿಂದ ಸುಮಾರು ಆರು ಅಡಿ ಆಳ, ಐದು ಅಡಿ ಅಗಲ ಭೂಮಿ ಅಗೆಯುತ್ತಿದ್ದು, ಕಾಮಗಾರಿ ವೇಗವಾಗಿ ನಡೆದಿದೆ. ರೈತರ ಜಮೀನಿನಲ್ಲಿ ಬೆಳೆ ಇದ್ದರೂ, ಅದರಲ್ಲಿಯೇ ಕಾಮಗಾರಿ ಮುಂದುವರಿಸಿದ್ದಾರೆ. ಸುಮಾರು 1 ಮೀಟರ್‌ ವ್ಯಾಸದ ಪೈಪ್‌ ಗಳನ್ನು ಅಲ್ಲಲ್ಲಿ ಸಂಗ್ರಹಿಸಲಾಗಿದ್ದು, ಶೀಘ್ರದಲ್ಲೇ ಪೈಪ್‌ ಜೋಡಣೆ ಕಾರ್ಯವೂ ನಡೆಯಲಿದೆ. ಸ್ಥಳೀಯ ರೈತರ ಮಾಹಿತಿ ಪ್ರಕಾರ ಈ ಪೈಪ್‌ ಲೈನ್‌ ಜಮೀನಿನ ಅಡಿಯಲ್ಲಿ ಅಳವಡಿಸಿದರೆ ಮೀಟರ್‌ಗೆ 500 ರೂ. ಪರಿಹಾರ ನೀಡುತ್ತಿದ್ದಾರೆ. ಪರಿಹಾರ ಹೆಚ್ಚಿಸಬೇಕೆನ್ನುವ ಬೇಡಿಕೆ ಕೇಳಿ ಬಂದಿದೆ. ಆದರೆ ಸರ್ಕಾರದ ಕೆಲಸ ಎಂದು ಹೇಳಿ ರೈತರನ್ನು ಸಮಾಧಾನ ಮಾಡಲಾಗುತ್ತಿದೆ ಎನ್ನುವ ಆರೋಪವೂ ಕೇಳಿಬಂದಿದೆ.

ಕುಡಿಯುವ ನೀರು, ರೈತರ ಜಮೀನುಗಳಿಗೆ ಆದ್ಯತೆ ನೀಡದೇ ಜಿಂದಾಲ್‌ ಕಾರ್ಖಾನೆ, ಕುಡತಿನಿ ಉಷ್ಣ ವಿದ್ಯುತ್‌ ಸ್ಥಾವರಗಳಿಗೆ ಯಾವ ಲೆಕ್ಕದಲ್ಲಿ ನೀರು ಕೊಡುತ್ತಿದ್ದಾರೆ. ಇದು ನ್ಯಾಯಾಧೀಕರಣಕ್ಕೆ ವಿರುದ್ಧವಾಗಿದೆ. ರೈತರ ಜಮೀನುಗಳಿಗೆ ನೀರುಣಿಸುವ ಕೃಷ್ಣಾ ಬಿ ಸ್ಕೀಂ ಕೊಪ್ಪಳ ಏತ ನೀರಾವರಿ ಯೋಜನೆಗಾಗಿ 80 ಸಾವಿರ ಕೋಟಿ ರೂ. ಬೇಕು. ಹರಿಹರ ಬ್ರಹ್ಮಾದಿಗಳಿಂದ ಸಾಧ್ಯವಿಲ್ಲ ಎಂದು ಹೇಳುವ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಅವರು ಇದಕ್ಕೇ ಏನಂತಾರೆ? ಕಾಮಗಾರಿ ನಡೆಯುತ್ತಿದ್ದರು ಸುಮ್ಮನಿರುವುದೇಕೆ ?
. ಗಂಗಾಧರ ಕುಷ್ಟಗಿ, ಮುಖ್ಯಸ್ಥರು,
ಕೃಷ್ಣಾ ಬಿಸ್ಕೀಂ ಹೋರಾಟ ಸಮಿತಿ.

ಬಳ್ಳಾರಿ ಉಷ್ಣ ವಿದ್ಯುತ್‌ ಸ್ಥಾವರಕ್ಕೆ ನೀರು ಸರಬರಾಜು ಕಾಮಗಾರಿ ನಡೆದಿದ್ದು, ಇದು ಸರ್ಕಾರದ ಕಾಮಗಾರಿಯಾಗಿದೆ. ನಾರಾಯಣಪುರ ಜಲಾಶಯದ ಬಳಿ ಈ ಪೈಪ್‌ಲೈನ್‌ ಕಾಮಗಾರಿ ಇನ್ನೂ ಶುರುವಾಗಿಲ್ಲ.
. ಆರ್‌.ಎಲ್‌. ಹಳ್ಳೂರು,
ಎಇಇ, ನಾರಾಯಣಪುರ ಜಲಾಶಯ

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.