22 ಕೋಟಿಯಲ್ಲಿ 14 ಕೆರೆಗೆ ನೀರು

|25 ಸಾವಿರ ಹೆಕ್ಟೇರ್‌ ಪ್ರದೇಶ ನೀರಾವರಿ |ಹಿರೇಹಳ್ಳದುದ್ದಕ್ಕೂ ಬ್ಯಾರೇಜ್‌

Team Udayavani, Aug 29, 2020, 7:07 PM IST

22 ಕೋಟಿಯಲ್ಲಿ 14 ಕೆರೆಗೆ ನೀರು

ಕೊಪ್ಪಳ: ಸಿಂಗಟಾಲೂರು ಏತ ನೀರಾವರಿ ಯೋಜನೆಯ ಮುಂಡರಗಿ ಶಾಖೆಯ ಕಾಲುವೆಯ ಮೂಲಕ ಕೊಪ್ಪಳ ತಾಲೂಕಿನ 14 ಕೆರೆಗಳನ್ನು ತುಂಬಿಸುವುದಕ್ಕೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದ್ದು, ಇದಕ್ಕಾಗಿ22.15 ಕೋಟಿ ರೂ. ವೆಚ್ಚವಾಗಲಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಕವಲೂರು, ಮುರ್ಲಾಪುರ, ಘಟರಡ್ಡಿಹಾಳ, ಹಟ್ಟಿ, ಬೆಳಗಟ್ಟಿ, ಹಿರೇಸಿಂದೋಗಿ, ಹಂದ್ರಾಳ, ಕೋಳೂರು ಕೆರೆಗಳನ್ನು ತುಂಬಿಸುವ ಯೋಜನೆ ಇದಾಗಿದೆ. ಅತಿಯಾದ ಮಳೆಯಾಗಿ, ತುಂಗಭದ್ರಾ, ಸಿಂಗಟಾಲೂರುಜಲಾಶಯ ಭರ್ತಿಯಾಗಿ, ಬಳಿಕ ಹೆಚ್ಚುವರಿ ನೀರು ಹರಿದು ಹೋಗುವ ಸಮಯದಲ್ಲಿ ಈ ಕೆರೆಗಳನ್ನು ತುಂಬಿಸಲಾಗುತ್ತದೆ. ಸಿಂಗಟಾಲೂರು ಏತ ನೀರಾವರಿ ಯೋಜನೆಯಕಾಲುವೆಯಿಂದ ಮೂರು ಪಾಯಿಂಟ್‌ ಬಳಿಯಿಂದ ಕೆರೆಗಳಿಗೆ ನೀರು ಪೂರೈಕೆ ಮಾಡಲಾಗುತ್ತದೆ. ಇದರಿಂದ ನೀರಾವರಿಯೂ ಆಗುತ್ತದೆ. ಜೊತೆಗೆ ಅಂತರ್ಜಲದ ಮಟ್ಟವೂ ವೃದ್ಧಿಸುತ್ತದೆ. ಸಿಂಗಟಾಲೂ ಏತನೀರಾವರಿ ಯೋಜನೆಯ ಅನುಷ್ಠಾನಕ್ಕಾಗಿ ನಮ್ಮ ಕ್ಷೇತ್ರದಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಲಾದ್ದು, ಇದರಿಂದ 25 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ. ಇದು ಟೆಂಡರ್‌ ಪ್ರಕ್ರಿಯೆ ಆರಂಭವಾಗಿದೆ ಎಂದರು.

ಬೆಟಗೇರಿ, ಬಹದ್ದೂರಬಂಡಿ ಸಮಸ್ಯೆ ಇತ್ಯರ್ಥ: ಅಳವಂಡಿ-ಬೆಟಗೇರಿ ಏತನೀರಾವರಿ ಹಾಗೂ ಬಹದ್ದೂರಬಂಡಿ ಏತ ನೀರಾವರಿ ಸಮಸ್ಯೆಯನ್ನು ಇತ್ಯರ್ಥ ಮಾಡಿದ್ದೇವೆ. ಸ್ಥಳೀಯರ ಬೇಡಿಕೆಯಂತೆ ಬೆಟಗೇರಿ ಗ್ರಾಮ ವ್ಯಾಪ್ತಿಯ ರೈತರಿಗೆ ಇನ್‌ಟೆಕ್‌ ಪಂಪ್‌ ಮೂಲಕ ನೀರಾವರಿ ಯೋಜನೆ ಮಾಡಲಾಗಿದೆ. ಜಿಲ್ಲಾ ಸಚಿವರನ್ನೊಳಗೊಂಡಂತೆ ಎಲ್ಲರೂ ಸಭೆ ನಡೆಸಿ ಸಬ್‌ಮರ್ಸಿಬಲ್‌ ಪಂಪ್‌ ಮೂಲಕ ಸುಮಾರು 13 ಕೋಟಿ ರೂ. ವೆಚ್ಚದಲ್ಲಿ ಪೈಪ್‌ಲೈನ್‌ ಅಳವಡಿಸಲಾಗಿದೆ. ಈ ಮೂಲಕ ಬೆಟಗೇರಿ ಏತನೀರಾವರಿ ಯೋಜನೆಯ ಸಮಸ್ಯೆ ಇತ್ಯರ್ಥ ಮಾಡಲಾಗಿದೆ ಎಂದರು.

ಹಿರೇಹಳ್ಳದ ಉದ್ದಕ್ಕೂ ಬ್ಯಾರೇಜ್‌: ಹಿರೇಹಳ್ಳ ನದಿಯುದ್ದಕ್ಕೂ ಸರಣಿ ಬ್ಯಾರೇಜ್‌ ನಿರ್ಮಾಣಕ್ಕೆ ಟೆಂಡರ್‌  ಕರೆಯಲಾಗಿದ್ದು, ಸುಮಾರು 6-7 ಬ್ಯಾರೇಜ್‌ಗಳ ನಿರ್ಮಾಣಕ್ಕೆ ಈಗಾಗಲೇ ಟೆಂಡರ್‌ ಮುಗಿದು, ಕಾಮಗಾರಿ ಪ್ರಗತಿಯಲ್ಲಿದೆ. ಇದರಲ್ಲಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಕಾರ್ಯ ಶ್ಲಾಘನೀಯ. ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಅವರು ಅನುದಾನ ನೀಡುವ ಮೂಲಕ ಕಾಮಗಾರಿ ಪ್ರಾರಂಭಕ್ಕೆ ಕಾರಣವಾಗಿದ್ದಾರೆ ಎಂದರು.

ಹಿರೇಹಳ್ಳಕ್ಕೂ ಹಿನ್ನೀರು: ಹುಲಿಕೆರೆಯಲ್ಲಿ ವರ್ಷ ಪೂರ್ತಿ ನೀರು ಇರುವಂತೆ ನೋಡಿಕೊಳ್ಳಲು ವಿಶೇಷ ಯೋಜನೆ ರೂಪಿಸಲಾಗುತ್ತಿದೆ. ತುಂಗಭದ್ರಾ ನೀರಿನ ಮೂಲಕ ನೀರು ತುಂಬಿಸುವುದು, ಹಿರೇಹಳ್ಳಕ್ಕೂ ತುಂಗಭದ್ರಾ ಜಲಾಶಯದಿಂದ ನೀರು ತುಂಬಿಸುವ ಯೋಜನೆಯೂ ಸರ್ಕಾರದ ಮುಂದಿದೆ. ಕೆರೆ ತುಂಬಿಸುವ ಯೋಜನೆಯಲ್ಲಿ ಇದನ್ನು ಅಳವಡಿಸಿಕೊಳ್ಳಲಾಗಿದ್ದು, ಈ ಮೂಲಕ ತಾಲೂಕಿನ ಎಲ್ಲ ಭಾಗವೂ ನೀರಾವರಿಗೆ ಒಳಪಡುತ್ತದೆ ಎಂದರು.

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.