ಬಾಕಿ ವೇತನ ಶೀಘ್ರ ಬಿಡುಗಡೆ ಮಾಡಿ

ಸಂಬಳವಿಲ್ಲದೆ ಕಷ್ಟವಾಗಿದೆ ಜೀವನ ನಿರ್ವಹಣೆ•ಮಳೆಯನ್ನೂ ಲೆಕ್ಕಿಸದೆ ಧರಣಿ

Team Udayavani, Jun 22, 2019, 3:19 PM IST

22–June-32

ಕೊಪ್ಪಳ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯು ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಮಳೆಯಲ್ಲೇ ಪ್ರತಿಭಟನೆ ನಡೆಸಿದರು

ಕೊಪ್ಪಳ: ಕಳೆದ ಒಂಭತ್ತು ತಿಂಗಳಿಂದ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯಕರ್ತೆಯರು ನಗರದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಸರ್ಕಾರ ನಿತ್ಯವೂ ನಮ್ಮನ್ನು ವಿವಿಧ ಸೇವೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ. ಆದರೆ ಸಕಾಲಕ್ಕೆ ಪ್ರೋತ್ಸಾಹಧನ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಜೀವನ ನಿರ್ವಹಣೆ ತುಂಬ ಕಷ್ಟವಾಗುತ್ತಿದೆ. ನಿತ್ಯದ ಬದುಕಿಗೆ ಹಣಕಾಸಿನ ಅವಶ್ಯಕತೆ ಪ್ರತಿ ಕುಟುಂಬಕ್ಕೂ ಇದೆ. ಆದರೆ 9 ತಿಂಗಳಿಂದ ಪ್ರೋತ್ಸಾಹಧನ ನೀಡಿಲ್ಲ, ಹೀಗಾದರೆ ಆಶಾ ವೃತ್ತಿಯನ್ನೇ ನಂಬಿಕೊಂಡು ಜೀವನ ನಡೆಸುವ ನಮಗೆ ಆತಂಕ ಶುರುವಾಗಿದೆ ಎಂದು ಕಾರ್ಯಕರ್ತೆಯರು ತಮ್ಮ ಅಳಲು ತೋಡಿಕೊಂಡರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುವ ಪ್ರೋತ್ಸಾಹಧನ ಒಟ್ಟಿಗೆ ಸೇರಿಸಿ ಕೊಡಬೇಕು. ಕನಿಷ್ಟ ಮಾಸಿಕ ಗೌರವಧನ 12 ಸಾವಿರ ರೂ. ನಿಗದಿ ಮಾಡಬೇಕು. ಆಶಾ ಸಾಫ್ಟ್‌ ಅಥವಾ ಆಶಾ ಪೋರ್ಟ್‌ಲ್ಗೆ ಆಶಾ ಪ್ರೋತ್ಸಾಹಧನ ಜೋಡಣೆ ರದ್ದುಪಡಿಸಬೇಕು. ಈ ಹಿಂದಿನ ಆರೋಗ್ಯ ಸಚಿವರು ನೀಡಿದ ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ ನಮ್ಮ ಜೀವನಕ್ಕೆ ಭದ್ರತೆ ಒದಗಿಸಬೇಕು. ನಿವೃತ್ತಿ ಹೊಂದಿದ ಆಶಾಗಳಿಗೆ ಪಿಂಚಣಿ ನೀಡಬೇಕು. ನಿವೃತ್ತಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರನ್ನು ಸಾಮಾಜಿಕ ಸುರಕ್ಷಾ ಯೋಜನೆಯ ವ್ಯಾಪ್ತಿಗೆ ತಂದು ಪ್ರಧಾನಮಂತ್ರಿ ಜೀವನ ಜ್ಯೋತಿ ಯೋಜನೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಕೂಡಲೇ ಜಾರಿಗೊಳಿಸಿ ಸಂಪೂರ್ಣ ವಿಮೆಯನ್ನು ಸರ್ಕಾರವೇ ಪಾವತಿಸಬೇಕು. ಆಶಾಗಳಿಗೆ ಹೆರಿಗೆ ರಜೆ, ಜೊತೆಗೆ ರಜೆಯಲ್ಲೂ ಮಾಸಿಕ ಗೌರವಧನ ನೀಡಬೇಕು. ತಿಂಗಳಿಗೆ 2 ಬಾರಿ ಲಾರ್ವಾ ಸರ್ವೇ ಮತ್ತು ವಿವಿಧ ಸರ್ವೇಗಳನ್ನು ನಡೆಸಲಾಗಿದ್ದು ಹಲವು ಕಡೆ ಸರ್ವೇ ಮಾಡಿದ್ದಕ್ಕೆ ಇನ್ನೂ ಪ್ರೋತ್ಸಾಹಧನ ನೀಡಿಲ್ಲ. ಪ್ರತಿ ಸರ್ವೇಗೂ 300 ರೂ. ನಿಗದಿ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿ ತಿಂಗಳು ವೇತನವನ್ನು ನಿಗದಿತ ದಿನಾಂಕದೊಳಗೆ ಬಿಡುಗಡೆ ಮಾಡಬೇಕು. ಕೆಲವೆಡೆ ಆಶಾಗಳಿಗೆ ನಿಗಪಡಿಸಿದ ಕೆಲಸವಲ್ಲದೇ ಹೆಚ್ಚುವರಿ ಕೆಲಸ ನೀಡಲಾಗುತ್ತಿದೆ. ಈ ಕೆಲಸದ ಹೊರೆಯಿಂದ ತುಂಬ ತೊಂದರೆಯಾಗುತ್ತಿದ್ದು, ಸರ್ಕಾರ ಈ ಬಗ್ಗೆ ಕಾಳಜಿ ವಹಿಸಬೇಕು. ಕೇಂದ್ರದ ಮಾರ್ಗಸೂಚಿಯಂತೆ ನಗರ ಆಶಾಗಳಿಗೆ 200-2500 ಜನಸಂಖ್ಯೆಗೆ ಮಾತ್ರ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರದ ಆದೇಶದಂತೆ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಆಶಾ ನಿವಾರಣಾ ಸಭೆ ನಡೆಸಿ ಸಂಘದ ಪದಾಧಿಕಾರಿಗಳ ಜೊತೆ ಚರ್ಚಿಸಬೇಕೆಂದು ಒತ್ತಾಯಿಸಿದರು.

ನಗರದ ಅಶೋಕ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೂ ಸಾಗಿತು. 500ಕ್ಕೂ ಹೆಚ್ಚು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಳೆ ಬಂದರೂ ಲೆಕ್ಕಿಸದೇ ಮಳೆಯಲ್ಲಿ ನೆನೆಯುತ್ತಲೇ ರಾಜ್ಯ ಸರ್ಕಾರದ ಕಾರ್ಯ ವೈಖರಿ ವಿರುದ್ಧ ಘೋಷಣೆ ಕೂಗಿ ನೋವು ಹೊರ ಹಾಕಿದರು. ಜಿಲ್ಲಾಧಿಕಾರಿ ಕಚೇರಿ ಮುಖ್ಯದ್ವಾರದ ಬಳಿ ಮಳೆಯಲ್ಲೇ ನೆನೆಯುತ್ತ ಎಡಿಸಿ ಸೈಯಿದಾ ಅವರ ಮುಂದೆ ತಮ್ಮ ಅಳಲು ತೋಡಿಕೊಂಡರು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಆಶಾ ಕಾರ್ಯಕರ್ತೆಯೊಬ್ಬರು ಜಾರಿ ಬಿದ್ದು ತೀವ್ರ ನೋವು ಅನುಭವಿಸಿದ ಪ್ರಸಂಗವೂ ನಡೆಯಿತು.

ಟಾಪ್ ನ್ಯೂಸ್

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.