ಕೊಪ್ಪಳ ಗ‌ವಿಮಠದಲ್ಲಿ ವೃಕ್ಷ ದಾಸೋಹ

ಮಠಕ್ಕೆ ಬರುವ ಪ್ರತಿ ಭಕ್ತರಿಗೆ ಸಸಿ ವಿತರಣೆ|ನೆಟ್ಟು ಪೋಷಿಸಲು ಗವಿಸಿದ್ದೇಶ್ವರ ಶ್ರೀ ಸಲಹೆ

Team Udayavani, Jul 17, 2019, 9:46 AM IST

17-July-1

ಕೊಪ್ಪಳ: ಭಕ್ತರಿಗೆ ಸಸಿ ವಿತರಿಸಿದ ಗವಿಮಠದ ಶ್ರೀಗಳು.

ದತ್ತು ಕಮ್ಮಾರ
ಕೊಪ್ಪಳ:
ರಾಜ್ಯದೆಲ್ಲೆಡೆ ಬರದ ಛಾಯೆ ಆವರಿಸುತ್ತಿದೆ. ಮಳೆಯ ಕೊರತೆಯಿಂದ ಅನ್ನದಾತ ಕಣ್ಣೀರಿಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆಗಾಗಿ ಸರ್ಕಾರವೇ ಪರ್ಜನ್ಯ ಜಪ, ಹೋಮ ಮಾಡಿಸುವ ಕಾಯಕ ಆರಂಭಿಸಿದೆ. ಇದರೊಟ್ಟಿಗೆ ಮಠ-ಮಾನ್ಯಗಳು ಪರಿಸರ ಜಾಗೃತಿಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದರೆ, ಉತ್ತರ ಕರ್ನಾಟಕದ ಸಿದ್ಧಗಂಗೆ ಎಂಬ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಮಠ ಮಠಕ್ಕೆ ಬರುವ ಭಕ್ತರಿಗೆ ಸಸಿ ವಿತರಿಸುವ ‘ವೃಕ್ಷ ದಾಸೋಹ’ ಸಂಸ್ಕೃತಿ ಆರಂಭಿಸಿದೆ.

ನಾಡಿನ ಪ್ರಸಿದ್ಧ ಗವಿಸಿದ್ದೇಶ್ವರ ಮಠ ಐತಿಹಾಸಿಕ, ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕವಾಗಿ ಕ್ರಾಂತಿಯನ್ನೇ ಮಾಡಿದೆ. ಅಕ್ಷರ ದಾಸೋಹ, ಅನ್ನ ದಾಸೋಹ, ಅಧ್ಯಾತ್ಮ ದಾಸೋಹಕ್ಕೆ ಹೆಸರಾದ ಶ್ರೀಮಠ ಸಾಮಾಜಿಕ ಕ್ರಾಂತಿಗೆ ಮುಂದಾಗಿದೆ. ಬಾಲ್ಯವಿವಾಹ ತಡೆ, ಸಶಕ್ತ ಮನ ಸಂತೃಪ್ತಿ ಜೀವನ, ನೇತ್ರದಾನ, ರಕ್ತದಾನ ಮಾಡುವಂತಹ ಮಹಾನ್‌ ಕಾರ್ಯ ಮಾಡಿ ಜನರಲ್ಲಿ ಜಾಗೃತಿಯ ಮೂಡಿಸುತ್ತಿದ್ದು, ಅದರೊಟ್ಟಿಗೆ ಪರಿಸರ ಜಾಗೃತಿಗೆ ‘ವೃಕ್ಷ ದಾಸೋಹ’ ಪರಂಪರೆ ಆರಂಭಿಸಿದೆ.

ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಮಳೆಯ ಕೊರತೆಯಿಂದ ರೈತ ಕಂಗಾಲಾಗುತ್ತಿದ್ದಾನೆ. ಬರದ ತೀವ್ರತೆ ಹೆಚ್ಚಾಗುತ್ತಿದೆ. ಅಂತರ್ಜಲಮಟ್ಟ ಕುಸಿತ ಕಾಣುತ್ತಿದೆ. ಇದರಿಂದ ಕಂಗಾಲಾಗಿರುವ ಅನ್ನದಾತ ದೇವರ ಮೊರೆಯಿಡುತ್ತಿದ್ದಾನೆ. ಹಲವಾರು ಭಕ್ತರು ಬರದ ಪರಿಸ್ಥಿತಿಯನ್ನು ಶ್ರೀಗಳ ಮುಂದೆ ಪ್ರಸ್ತಾಪಿಸಿದಾಗ ಶ್ರೀ ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳು ಬರ ನಿವಾರಣೆಗೆ ಜಲ ಸಂರಕ್ಷಣೆಯ ಜೊತೆಗೆ ಪರಿಸರ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ ಎಂದು ಭಕ್ತ ಸಮೂಹಕ್ಕೆ ಹೇಳುತ್ತಲೇ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ.

ಮಠಕ್ಕೆ ಭಕ್ತರ ದಂಡು: ಗವಿಮಠಕ್ಕೆ ಬರುವ ಭಕ್ತ ಸಮೂಹಕ್ಕೆ ಸಸಿಗಳನ್ನು ವಿತರಣೆ ಮಾಡುವ ಮೂಲಕ ವೃಕ್ಷ ದಾಸೋಹ ಸಂಸ್ಕೃತಿಯನ್ನು ಆರಂಭ ಮಾಡಿದ್ದಾರೆ. ಈಗಾಗಲೇ ಸಾವಿರಾರು ಸಸಿಗಳನ್ನು ಭಕ್ತರು ಶ್ರೀಗಳಿಂದ ಪಡೆದು ತೆರಳಿದ್ದಾರೆ. ತಮ್ಮ ಮನೆಯ ಮುಂಭಾಗ, ಬಯಲು ಪ್ರದೇಶ, ಶಾಲಾ-ಕಾಲೇಜು ಮೈದಾನ ಸೇರಿದಂತೆ ಸೂಕ್ತ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟು ಬೆಳೆಸುತ್ತಿದ್ದಾರೆ. ಅದರಲ್ಲೂ ಶ್ರೀಗಳು ತಮಗೆ ಸಸಿಗಳನ್ನು ಕೊಟ್ಟಿದ್ದಾರೆ. ಅದನ್ನು ನಾವು ಜೋಪಾನ ಮಾಡಿ ಬೆಳೆಸಿದರೆ ಎಲ್ಲರಿಗೂ ಒಳ್ಳೆಯದಾಗಲಿದೆ. ಮುಂದೆ ಇದೇ ಸಸಿ ನಮಗೆ ನೆರಳಾಗಲಿದೆ ಎಂಬುದನ್ನು ಅರಿತು ಭಕ್ತರು ಮಠದಿಂದ ಸಸಿಗಳನ್ನು ಸ್ವಯಂ ಇಚ್ಛೆಯಿಂದ ತೆಗೆದುಕೊಂಡು ಹೋಗುತ್ತಿದ್ದಾರೆ. ಈ ಮೊದಲು ಜಾತ್ರೆಯ ಸಂದರ್ಭದಲ್ಲಿ ಸಸಿಗಳನ್ನು ವಿತರಣೆ ಮಾಡಲಾಗಿತ್ತಾತ್ತು. ಈಗ ನಿರಂತರ ಭಕ್ತರಿಗೆ ವಿತರಣೆಯ ಸಂಪ್ರದಾಯ ಬೆಳೆಸಬೇಕೆಂಬ ಉದ್ದೇಶದಿಂದ ವೃಕ್ಷ ದಾಸೋಹ ಆರಂಭಿಸಿದ್ದಾರೆ.

ಹಳ್ಳ ಸ್ವಚ್ಛ ಮಾಡಿ ಜಲಕ್ರಾಂತಿ!
ಗವಿಮಠದ ಶ್ರೀಗಳು ಇತ್ತೀಚೆಗೆ ಕೊಪ್ಪಳದ ಜನರ ಜೀವನಾಡಿಯಾಗಿ ತ್ಯಾಜ್ಯದಿಂದ ತುಂಬಿದ್ದ ಹಿರೇಹಳ್ಳ ವನ್ನು 26 ಕಿಮೀ ಸ್ವಚ್ಛ ಮಾಡುವ ಮೂಲಕ ಮಹಾನ್‌ ಕಾರ್ಯ ಮಾಡಿದ್ದರು. ಇದು ರಾಷ್ಟ್ರವ್ಯಾಪಿ ಗಮನ ಸೆಳೆದಿದ್ದು, ಜಲತಜ್ಞರು, ನೀರಾವರಿ ತಜ್ಞರು ಸೇರಿದಂತೆ ನಾಡಿನ ಗಣ್ಯಾತೀತರು ಹಿರೇಹಳ್ಳದ ಸ್ವಚ್ಛತಾ ಸ್ಥಳಕ್ಕೆ ಭೇಟಿ ನೀಡಿ ಶ್ರೀಗಳ ಬಗ್ಗೆ ಗುಣಗಾನ ಮಾಡುತ್ತಿದ್ದಾರೆ. ನಿಜಕ್ಕೂ ಇದೊಂದು ದೇವರು ಮಾಡುವ ಕೆಲಸ ಎನ್ನುವ ಮಾತನ್ನಾಡುತ್ತಿದ್ದಾರೆ.

ಈ ಹಿಂದೆ ಮಠ, ಮಾನ್ಯಗಳು ಅಕ್ಷರ ದಾಸೋಹ, ಅನ್ನದಾಸೋಹ, ಆರೋಗ್ಯ ದಾಸೋಹ, ಅಧ್ಯಾತ್ಮ ದಾಸೋಹದಂತ ಹಲವು ಕಾರ್ಯಗಳನ್ನು ಮಾಡಿವೆ. ಆದರೆ ವರ್ತಮಾನದಲ್ಲಿ ವೃಕ್ಷ ದಾಸೋಹ ಪರಂಪರೆಯ ಅವಶ್ಯಕತೆಯಿದೆ. ಬರ ನಿವಾರಣೆಗೆ ಪರಿಸರ, ಜಲ ಸಂರಕ್ಷಣೆ ಮಾಡಬೇಕಿದೆ. ಹಾಗಾಗಿ ಮಠದಿಂದ ವೃಕ್ಷ ದಾಸೋಹ ಪರಂಪರೆ ಆರಂಭಿಸಿದ್ದೇವೆ. ನಿಸರ್ಗ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಗುಡಿ ಕಟ್ಟುವುದಕ್ಕಿಂತ ಗಿಡ ಹಚ್ಚುವುದು ಲೇಸು ಎಂಬ ಮಾತಿದೆ. ಹಾಗಾಗಿ ಮಠದಿಂದ ಭಕ್ತರಿಗೆ ವೃಕ್ಷ ದಾಸೋಹದಡಿ ಸಸಿ ವಿತರಣಾ ಕಾರ್ಯ ನಡೆದಿದೆ.
ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿ,
   ಗವಿಮಠ

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.