ಸೌಲಭ್ಯ ಮಕ್ಕಳಿಗೆ ತಲುಪಿಸದಿದ್ದರೆ ಕ್ರಮ

ಮಕ್ಕಳ ಹಕ್ಕುಗಳ ಗ್ರಾಮಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್‌ ರಾವ್‌ ಎಚ್ಚರಿಕೆ

Team Udayavani, Dec 2, 2019, 3:04 PM IST

Udayavani Kannada Newspaper

ಕುರುಗೋಡು: ಮುದ್ದಟನೂರು ಗ್ರಾಪಂ ವ್ಯಾಪ್ತಿಯ ಶಾಲೆಗೆ ಬರುವ ಸರಕಾರಿ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶ ಉಳ್ಳ ಆಹಾರ, ಹಾಲು ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ನೀಡುವಲ್ಲಿ ಶಿಕ್ಷಕರು ಎಸ್‌ಡಿಎಂಸಿ ಸಮಿತಿಯವರು ತಾರತಮ್ಯ ತೋರದೆ ತಲುಪಿಸಬೇಕು ಎಂದು ಗ್ರಾಪಂ ಅಧ್ಯಕ್ಷ ಕೆ. ಶ್ರೀನಿವಾಸ ರಾವ್‌ ಹೇಳಿದರು.

ಸಮೀಪದ ಮುದ್ದಟನೂರು ಗ್ರಾಪಂ ಅವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳ ಗ್ರಾಮಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಮಕ್ಕಳ ಹಕ್ಕುಗಳ ಗ್ರಾಮಸಭೆಯಲ್ಲಿ ಹಲವು ಶಾಲೆ ಮಕ್ಕಳು ಶಾಲೆಯಲ್ಲಿ ಕೊಡುವ ಹಾಲಿನಲ್ಲಿ ಸಕ್ಕರೆ ಮಿಶ್ರಣವಿಲ್ಲದೆ ನೀರು ಮಿಕ್ಸ್‌ ಮಾಡುತ್ತಿದ್ದು ಹಾಲು ಸಪ್ಪಗೆ ಇರುತ್ತದೆ ಎಂದು ದೂರು ನೀಡಿದ್ದಾರೆ. ಇತರ ತಾರತಮ್ಯ ತೋರದೆ ಸರಕಾರದಿಂದ ಬರುವ ಪ್ರತಿಯೊಂದು ಯೋಜನೆಯನ್ನು ಮಕ್ಕಳಿಗೆ ತಲುಪಿಸಿ ಇತರ ಸಮಸ್ಯೆಗಳು ಮರುಕಳಿಸಿದರೆ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸ.ಪ್ರೌ. ಶಾಲೆ ಹಿಂಭಾಗದಲ್ಲಿ ಜಂಗಲ್‌ ಕಟಿಂಗ್‌ಗಳು ಬೆಳೆದಿದ್ದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಎಸ್‌ಡಿಎಂಸಿ ಸಮಿತಿಯವರು ನಿರ್ವಹಣೆ ಮಾಡಿ ಸ್ವತ್ಛತೆ ಕಾಪಾಡಲಿ ಎಂದು ತಿಳಿಸಿದರು. ಇನ್ನೂ ಶಾಲಾ ಅವಧಿ ವರ್ಷಗಳು ಕೊನೆಗೊಂಡು ತರಗತಿಗಳು ಮುಗಿಯುತ್ತಿದ್ದರೂ ವಿದ್ಯಾರ್ಥಿಗಳಿಗೆ ಶೂ, ಪಠ್ಯಪುಸ್ತಕಗಳು, ಕ್ರೀಡಾ ಸಾಮಗ್ರಿಗಳು, ಸಮವಸ್ತ್ರ ವಿತರಣೆ ಮಾಡಿಲ್ಲ. ಇದರ ಬಗ್ಗೆ ಶಾಲೆ ಮೇಲುಸ್ತುವಾರಿ ಸಮಿತಿಗಳು ಜಾಗೃತಿ ತೋರದೆ ಇರುವುದು ನಿಜಕ್ಕೂ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ನಂತರ ಶಾಲೆಗೆ ತಡೆಗೋಡೆ, ಶೌಚಾಲಯ, ಕೊಠಡಿಗಳು, ಬೆಂಚ್‌ಗಳು, ಹಾಲು ಕುಡಿಯುವುದಕ್ಕೆ ಲೋಟಗಳು, ತಟ್ಟೆಗಳು, ಶಾಲೆಗೆ ಸಂಪರ್ಕಗೊಂಡಿರುವ ರಸ್ತೆಗಳ ದುರಸ್ತಿ, ಕುಡಿಯುವ ನೀರಿನ ವ್ಯವಸ್ಥೆ, ಶಿಕ್ಷಕರ ಸಮಸ್ಯೆ ಸೇರಿದಂತೆ ಇತರೆ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಿಸಿದ ಅ ಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿ ಶೀಘ್ರವೇ ಬಗೆಹರಿಸುವಂತೆ ತಿಳಿಸಲಾಗುವುದು. ಗ್ರಾಪಂ ಮಟ್ಟದಲ್ಲಿ ಬಗೆಹರಿಯುವ ಸಮಸ್ಯೆಗಳನ್ನು ಇನ್ನೂ ಎರಡು ಮೂರು ದಿನಗಳಲ್ಲಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಪಿಡಿಒ ಬಸವರಾಜ ಮತ್ತು ಮಕ್ಕಳ ರಕ್ಷಣಾ ಘಟಕದ ತಾಲೂಕು ಸಂಯೋಜಕ ಉಮೇಶ್‌ ಮಾತನಾಡಿದರು. ಸಭೆಯಲ್ಲಿ ಹಲವು ಶಾಲೆಯ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ನೋಡಲ್‌ ಅಧಿಕಾರಿ ನಿರ್ಮಲಾ, ಗ್ರಾಪಂ ಉಪಾಧ್ಯಕ್ಷೆ ಮಲ್ಲಮ್ಮ, ಗ್ರಾಪಂ ಸರ್ವ ಸದಸ್ಯರು ಹಾಗೂ ಶಾಲೆ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು, ಗ್ರಾಪಂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.