ಗೋನವಾಟ್ಲ-ಕಡದರಗಡ್ಡಿ ಸೇತುವೆ ನಿರ್ಮಾಣಕ್ಕೆ ಕ್ರಮ

ನಡುಗಡ್ಡೆ ಪ್ರದೇಶಗಳಿಗೆ ಸಂಸದ ಅಮರೇಶ್ವರ ನಾಯಕ ಭೇಟಿ • ಪ್ರವಾಹ ಪೀಡಿತರ ನೆ‌ರವಿಗೆ ಸರ್ಕಾರ ಬದ್ಧ

Team Udayavani, Aug 9, 2019, 3:55 PM IST

ಲಿಂಗಸುಗೂರು: ಕಡದರಗಡ್ಡಿ ಗ್ರಾಮದಲ್ಲಿ ಸೇತುವೆ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಂಸದ ರಾಜಾ ಅಮರೇಶ್ವರ ನಾಯಕ.

ಲಿಂಗಸುಗೂರು: ತಾಲೂಕಿನ ಗೋನವಾಟ್ಲ ಗ್ರಾಮದಿಂದ ನಡುಗಡ್ಡೆ ಗ್ರಾಮಗಳಾದ ಕಡದರಗಡ್ಡಿ ಸೇತುವೆ ನಿರ್ಮಾಣಕ್ಕೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಸಂಸದ ರಾಜಾ ಅಮರೇಶ್ವರ ನಾಯಕ ಭರವಸೆ ನೀಡಿದರು.

ತಾಲೂಕಿನ ಪ್ರವಾಹಪೀಡಿತ ಗ್ರಾಮಗಳಿಗೆ ಗುರುವಾರ ಭೇಟಿ ಪರಿಶೀಲಿಸಿದ ಅವರು ನಂತರ ಸುದ್ದಿಗಾರರ ಜತೆ ಮಾತನಾಡಿದರು. ಗೋನವಾಟ್ಲ ಗ್ರಾಮದಿಂದ ಕಡದರಗಡ್ಡಿ ಗ್ರಾಮಕ್ಕೆ ಸೇತುವೆ ನಿರ್ಮಾಣಕ್ಕೆ 18 ಕೋಟಿ ರೂ. ಅಂದಾಜು ವೆಚ್ಚ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಇದಕ್ಕೆ ಅವರು ಕೂಡಾ ಸ್ಪಂದಿಸಿದ್ದು, ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಸೇತುವೆ ನಿರ್ಮಾಣ ಕಾರ್ಯವನ್ನು ತೀವ್ರಗತಿಯಲ್ಲಿ ಕೈಗೊಳ್ಳಲು ಸೂಚಿಸಿದ್ದಾರೆ. ಹೀಗಾಗಿ ಸೇತುವೆ ನಿರ್ಮಾಣ ಕಾರ್ಯ ಶೀಘ್ರವೇ ಆರಂಭವಾಗುವ ವಿಶ್ವಾಸವಿದೆ ಎಂದರು.

ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಸದ್ಯಕ್ಕೆ ಬೇಕಾಗುವ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರ್ಕಾರ ಪ್ರವಾಹ ನಿರ್ವಹಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದೆ. ನಡುಗಡ್ಡೆ ಗ್ರಾಮಗಳಿಗೆ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಬದ್ಧವಾಗಿದೆ. ಈಗಾಗಲೇ ಪ್ರವಾಹ ಪೀಡಿತ ಸಂತ್ರಸ್ತರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಸಂತ್ರಸ್ತರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇವೆ. ಸಂತ್ರಸ್ತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಸಹಾಯಕ ಆಯುಕ್ತ ರಾಜಶೇಖರ ಡಂಬಳ, ಡಿವೈಎಸ್‌ಪಿ ಜಿ.ಹರೀಶ, ತಹಶೀಲ್ದಾರ್‌ ಚಾಮರಾಜ ಪಾಟೀಲ, ತಾಪಂ ಇಒ ಪ್ರಕಾಶ, ಸಿಪಿಐ ಯಶವಂತ ಬಿಸನಳ್ಳಿ ಹಾಗೂ ಮುಖಂಡರಾದ ರಾಜಾ ಶ್ರೀನಿವಾಸ ನಾಯಕ, ರಾಜಾ ಸೋಮನಾಥ ನಾಯಕ, ನಾಗಪ್ಪ ವಜ್ಜಲ್, ಡಾ| ಶಿವಬಸಪ್ಪ ಇತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ