ಮತ್ತೆ ಮಧುಗಿರಿಯತ್ತ ಮುಖ ಮಾಡ್ತಾರಾ ಪರಂ?

ಜಿಲ್ಲಾ ಕೇಂದ್ರ ಮಾಡುವಂತೆ ಸಿಎಂಗೆ ಪತ್ರ ರಾಜಕೀಯ ಗುಸುಗುಸು

Team Udayavani, Oct 3, 2019, 7:20 PM IST

Udayavani Kannada Newspaper

ಮಧುಗಿರಿ ಸತೀಶ್‌
ಮಧುಗಿರಿ: ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವಂತೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪಗೆ ಬರೆದ ಪತ್ರ ಕ್ಷೇತ್ರದಲ್ಲಿ ಹಲವು ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಮತ್ತೆ ಮಧುಗಿರಿ ಕಡೆ ಮುಖ ಮಾಡ್ತಾರಾ ಎಂಬ ಪ್ರಶ್ನೆ ಉದ್ಭವವಾಗಿದೆ.

ಮಧುಗಿರಿ ತಾಲೂಕು ಸ್ವತಂತ್ರ ಪೂರ್ವದಲ್ಲೇ ಉಪವಿಭಾಗವಾಗಿದ್ದು, ಈಗಾಗಲೇ ಶೈಕ್ಷಣಿಕ, ಲೋಕೋಪಯೋಗಿ, ಜಿ.ಪಂ., ಎ.ಆರ್‌.ಟಿ.ಒ ಹಾಗೂ ಕಂದಾಯ ಉಪ ವಿಭಾಗವಾಗಿದೆ. ಆದರೆ ಈ ಉಪ ವಿಭಾಗವು ಜಿಲ್ಲಾ ಕೇಂದ್ರ ಆಗುವ ಕೂಗು ಕಳೆದ ದಶಕದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಮಾಜಿ ಶಾಸಕ ಕೆ.ಎನ್‌. ರಾಜಣ್ಣ, ಹಾಲಿ ಶಾಸಕ ಎಂ.ವಿ. ವೀರಭದ್ರಯ್ಯನವರೂ ಸಹಮತ ವ್ಯಕ್ತ ಪಡಿಸಿದ್ದರು.

ಚುನಾವಣೆಯಲ್ಲಿ ಪ್ರಬಲ ಅಸ್ತ್ರವಾಗಿ ಬಳಸಿಕೊಂಡಿದ್ದರು. ಕಳೆದ ಅವಧಿಯಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಕ್ಷೇತ್ರದ ಶಾಸಕರಾಗಿದ್ದ ಕೆ.ಎನ್‌. ರಾಜಣ್ಣ ಜಿಲ್ಲಾ ಕೇಂದ್ರ ಮಾಡುವ ಅವಕಾಶ ಕೈ ಚೆಲ್ಲಿದರು. 2018ರ ವಿಧಾನ ಸಭಾ ಚುನಾವಣೆಯಲ್ಲಿ
ಇದೇ ವಿಷಯ ಅಸ್ತ್ರವಾಗಿ ಬಳಸಿ ಎಂ.ವಿ. ವೀರಭದ್ರಯ್ಯ ಶಾಸಕರಾಗಿ ಆಯ್ಕೆಯಾದರು. ಮಾಜಿ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಮಧುಗಿರಿಯನ್ನು ಜಿಲ್ಲಾ ಕೇಂದ್ರವಾಗಿಸುವ ಭರವಸೆ ನೀಡಿದ್ದರು. ಅದರಂತೆ ಮೊದಲ ಬಜೆಟ್‌ ನಲ್ಲಿ ಕೈಗಾರಿಕಾ ವಲಯ ಮಂಜೂರು ಮಾಡಿಸಿ ಉದ್ಯೋಗ ಕಲ್ಪಿಸಿದ್ದರು. ವರ್ಷದ ಬಳಿಕ ಅಧಿಕಾರ ಕಳೆದು ಕೊಂಡಿದ್ದರಿಂದ ವಿಷಯ ನೇಪಥ್ಯಕ್ಕೆ ಸರಿಯಿತು.

ಅಧಿಕಾರ ಇದ್ದಾಗ ಮಾತಿಲ್ಲ: ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಡಾ.ಜಿ. ಪರಮೇಶ್ವರ್‌ ಅಧಿಕಾರ ಇದ್ದಾಗ ಮಾಡದ ಹಾಗೂ ಯೋಚನೆಯೂ ಮಾಡದ ಜಿಲ್ಲಾ ಕೇಂದ್ರದ ವಿಚಾರವನ್ನು ಅಧಿಕಾರದಿಂದ ಕೆಳಗಿಳಿದ ನಂತರ ಬಿಜೆಪಿ ಸರ್ಕಾರಕ್ಕೆ ಪತ್ರ ಬರೆದಿರುವುದು ಸಾರ್ವಜನಿಕ ವಲಯದಲ್ಲಿ ಆಶ್ಚರ್ಯ, ಸಿಟ್ಟಿಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲೂ ವಿಷಯ ವೈರಲ್‌ ಆಗಿದ್ದು, ಅಧಿಕಾರ ಇದ್ದಾಗ ತುಟಿ ಬಿಚ್ಚದ ಪರಮೇಶ್ವರ್‌, ಈಗ ಜಿಲ್ಲಾ ಕೇಂದ್ರಕ್ಕೆ ಒತ್ತಾಯಿಸಿ ಪತ್ರ ಬರೆಯುವ ರಾಜಕೀಯ ಏಕೆ ಮಾಡಬೇಕು. ನೀವು ಕೊರಟಗೆರೆಗೆ ಶಾಸಕರಾಗಿದ್ದು, ಹಿಂದೆ ಮಧು ಗಿರಿಯ ಶಾಸಕರಾಗಿದ್ದೀರಿ. ಗೃಹಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದರೂ ಮಧುಗಿರಿ, ಸ್ವತಃ ಕೊರಟಗೆರೆಯ ರಸ್ತೆಗಳ ಅಭಿವೃದ್ಧಿ
ಬಗ್ಗೆಯೂ ಚಿಂತನೆ ನಡೆಸಲಿಲ್ಲ. ಈಗ ದಿಢೀರನೆ ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡಿ ಎಂದು ಪತ್ರ ಬರೆದು ಒತ್ತಾಯಿಸುವುದರ ಮರ್ಮವೇನು ನೆಟ್ಟಿಗರು ತರಾಟೆಗೆ ತಗೆದುಕೊಂಡಿದ್ದರು.

ಪರಮೇಶ್ವರ್‌ಗೆ ರಾಜಕೀಯ ಮಾಡಲು ವಿಷಯ ಇಲ್ಲವಾಗಿದೆ. ಅಧಿಕಾರ ಇದ್ದಾಗ ಝೀರೋ ಟ್ರಾಫಿಕ್ ನಲ್ಲಿ ಓಡಾಡಿದ್ದು ಬಿಟ್ಟರೆ
ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಯೋಚನೆ ಮಾಡಲಿಲ್ಲ. ಈಗ ಅಧಿಕಾರ ಕಳೆದುಕೊಂಡು ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವಂತೆ ಬೊಬ್ಬೆ ಹೊಡೆಯುವುದು ಯಾವ ರಾಜಕೀಯ ಎಂದು ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಕುಟುಕಿದ್ದಾರೆ. ಮಧುಗಿರಿ ಜಿಲ್ಲಾ ಕೇಂದ್ರಕ್ಕೆ ಅರ್ಹ ಕ್ಷೇತ್ರವಾಗಿದ್ದು, ಅವರ ಸಹಕಾರ ಅಗತ್ಯ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ಹೇಳುವ ಮೂಲಕ ಪರಂ
ಹೇಳಿಕೆ ಸ್ವಾಗತಿಸಿದ್ದಾರೆ. ಶಿರಾ, ಕೊರಟಗೆರೆ, ಪಾವಗಡ ತಾಲೂಕು ಈಗಾಗಲೇ ಮಧುಗಿರಿ ಉಪವಿಭಾಗದಲ್ಲಿ ಸೇರಿದ್ದು, ಶಿರಾ ಶಾಸಕ
ಬಿ. ಸತ್ಯನಾರಾಯಣ ವಿರೋಧ ವ್ಯಕ್ತಪಡಿಸಿದ್ದಾರೆ. ಪರಮೇಶ್ವರ್‌ ಬರೆದಿರುವ ಪತ್ರದಿಂದ ಮಧುಗಿರಿ ಜಿಲ್ಲಾ ಕೇಂದ್ರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.