ಕೊಡಗಿನಲ್ಲಿ ಮಳೆ: ಭಾಗಮಂಡಲ ಜಲಾವೃತ

Team Udayavani, Aug 5, 2019, 1:28 PM IST

ಮಡಿಕೇರಿ: ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು, ಹಲವೆಡೆ ಹಾನಿ ಸಂಭವಿಸಿದೆ. ಭಾಗಮಂಡಲದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದ ನೀರಿನ ಮಟ್ಟ ಏರಿಕೆಯಾಗಿದೆ. ಮಳೆಯೊಂದಿಗೆ ಗಾಳಿ ಕೂಡ ಇದ್ದು, ನಾಪೋಕ್ಲು – ಭಾಗಮಂಡಲ ರಸ್ತೆಯ ನೆಲಜಿ ಜಂಕ್ಷನ್‌ ಬಳಿ ರಸ್ತೆಗೆ ಮರ ಉರುಳಿ ಸಂಚಾರಕ್ಕೆ ತಡೆಯಾಗಿತ್ತು.

12 ಮನೆಗಳಿಗೆ ನುಗ್ಗಿದ ಹೊಳೆ ನೀರು
ವೀರಾಜಪೇಟೆಯಲ್ಲೂ ಭಾರೀ ಮಳೆಯಾಗಿದ್ದು, ನಾಂಗಾಲ ಗ್ರಾಮದಲ್ಲಿ ಭೂಕುಸಿತವಾಗಿ ಮನೆಗೆ ಹಾನಿಯಾಗಿದೆ. ಗೋಣಿಕೊಪ್ಪದ ವೆಂಕಟಪ್ಪ ಬಡಾವಣೆಯ ಪಕ್ಕದ ಕೀರೆ ಹೊಳೆ ಉಕ್ಕಿ ಹರಿದು 12ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ವ್ಯಾಪ್ತಿಯಲ್ಲಿಯೂ ಭಾರೀ ಮಳೆಯಾಗುತ್ತಿದೆ. ಲಕ್ಷ್ಮಣತೀರ್ಥ ನದಿಯಲ್ಲಿ ಏಕಾಏಕಿ ನೀರು ಏರಿಕೆಯಾಗಿ ಭತ್ತದ ಗದ್ದೆಗಳು ಪ್ರವಾಹಕ್ಕೆ ಸಿಲುಕಿವೆ. ಶ್ರೀಮಂಗಲ, ಹುದಿಕೇರಿ, ಪರಕಟಗೇರಿ ಸೇರಿದಂತೆ ಬ್ರಹ್ಮಗಿರಿ ಬೆಟ್ಟ ಶ್ರೇಣಿಯಲ್ಲಿಯೂ 2 ದಿನಗಳಿಂದ ಭಾರೀ ಮಳೆಯಾಗುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ