ಮಲ್ಲಾಪುರ ಗ್ರಾಮಕ್ಕಿಲ್ಲ ರಸ್ತೆ

ತಾಲೂಕು ಕೇಂದ್ರದಿಂದ ಮಲ್ಲಾಪುರ 9 ಕಿ.ಮೀ. ದೂರ •ಪರ ಗ್ರಾಮಗಳಿಗೆ ತೆರಳಲು ಪರದಾಟ

Team Udayavani, Jul 4, 2019, 12:31 PM IST

04-July-22

ಬಾದಾಮಿ: ಮಲ್ಲಾಪುರ ಎಸ್‌.ಎಲ್. ಗ್ರಾಮದ ಕಚ್ಚಾ ರಸ್ತೆ.

ಬಾದಾಮಿ: ಮಲ್ಲಾಪುರ ಎಸ್‌.ಎಲ್. ಗ್ರಾಮಕ್ಕೆ ಸಮರ್ಪಕ ರಸ್ತೆ ಇಲ್ಲದ್ದರಿಂದ ಜನರು ಪರ ಗ್ರಾಮಗಳಿಗೆ ತೆರಳಲು ತೊಂದರೆಯಾಗುತ್ತಿದೆ.

ತಾಲೂಕು ಕೇಂದ್ರದಿಂದ 9 ಕಿ.ಮೀ. ದೂರದಲ್ಲಿರುವ ಮಲ್ಲಾಪುರ ಎಸ್‌.ಎಲ್. ಗ್ರಾಮದಲ್ಲಿ ಸುಮಾರು 380 ಮನೆಗಳಿದ್ದು, 2500 ಜನಸಂಖ್ಯೆ ಹೊಂದಿದೆ. ಈ ಗ್ರಾಮಕ್ಕೆ ರಸ್ತೆ ಇಲ್ಲ. ಹೊಲದಲ್ಲಿಯೇ ಹೋಗಬೇಕು. ಹೊಲದ ಮಾಲೀಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ರಸ್ತೆ ಇಲ್ಲದ್ದರಿಂದ ಸಾರಿಗೆ ಸಂಪರ್ಕ ಇಲ್ಲ. ಈ ಗ್ರಾಮದ ಮಕ್ಕಳು ಶಿಕ್ಷಣ ಪಡೆಯಲು ಕಾಲುದಾರಿಯಲ್ಲಿಯೇ ನಡೆದುಕೊಂಡು ಹೋಗುವಂತಾಗಿದೆ. ಗ್ರಾಮದಲ್ಲಿ ಅನಾರೋಗ್ಯಕ್ಕೀಡಾದರೆ ಆಂಬ್ಯುಲೆನ್ಸ್‌ ಕೂಡಾ ಬರುವಂತಿಲ್ಲ. ರಾತ್ರಿ ಸಂದರ್ಭದಲ್ಲಿ ಹೆರಿಗೆ ಸಮಸ್ಯೆ ಕಂಡುಬಂದರೆ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ವಿದ್ಯಾರ್ಥಿಗಳು ಹೆಬ್ಬಳ್ಳಿ ಅಥವಾ ಬಾದಾಮಿಗೆ ಶಿಕ್ಷಣ ಪಡೆಯಲು ಹೋಗಬೇಕು. ಆದರೆ, ರಸ್ತೆ ಇಲ್ಲದ ಕಾರಣ ಊರಿನ ವಿದ್ಯಾರ್ಥಿಗಳು ಬೇರೆ ಊರಿಗೆ ಶಿಕ್ಷಣ ಪಡೆಯಲು ಹೋಗಲು ಆಗದೇ ಶಿಕ್ಷಣದಿಂದ ವಂಚಿತರಾಗಿದ್ದಾರೆ. ರಸ್ತೆ ಇಲ್ಲದ ಕಾರಣ ವರ್ಗಾವಣೆಯಲ್ಲಿ ಶಿಕ್ಷಕರು ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಊರಿಗೆ ಬೀಗತನ ಮಾಡಲು ಹಿಂಜರಿಯುತ್ತಿದ್ದಾರೆ.

ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವಂತೆ ಆಗ್ರಹಿಸಿ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯನವರಿಗೆ ಶಾಲಾ ಮಕ್ಕರು ಹಾಗೂ ಗ್ರಾಮದ ಪ್ರಮುಖರು ಮನವಿ ಸಲ್ಲಿಸಿದ್ದಾರೆ. ಬಾಗಲಕೋಟೆ ಉಪವಿಭಾಗಾಧಿಕಾರಿ ಎಚ್. ಜಯಾ ಮತ್ತು ತಹಶೀಲ್ದಾರ್‌ ಸುಹಾಸ ಇಂಗಳೆ ಅವರಿಗೆ ಕೂಡಲೇ ಭೂಮಿ ಸ್ವಾಧೀನ ಪಡೆದುಕೊಳ್ಳಲು ಸೂಚಿಸಿದ್ದಾರೆ.

ಮಲ್ಲಾಪುರ ಎಸ್‌.ಎಲ್. ಗ್ರಾಮಕ್ಕೆ ರಸ್ತೆಗೆ ಆಗ್ರಹಿಸಿ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ್ದೇವೆ. ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವೀರಯ್ಯ ಮಣ್ಣೂರಮಠ, ಗ್ರಾಮಸ್ಥ.

ಮಲ್ಲಾಪುರ ಎಸ್‌.ಎಲ್.ಗ್ರಾಮಕ್ಕೆ ಸರಿಯಾದ ರಸ್ತೆಯಿಲ್ಲ. ಇದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿದೆ ಎಂದು ಶಾಲಾ ಮಕ್ಕಳು ಮನವಿ ಸಲ್ಲಿಸಿದ್ದಾರೆ. ತಹಶೀಲ್ದಾರ್‌ ಮತ್ತು ಉಪವಿಭಾಗಾಧಿಕಾರಿಗಳಿಗೆ ರಸ್ತೆಗೆ ಭೂ ಸ್ವಾಧೀನಪಡಿಸಿಕೊಳ್ಳಲು ಸೂಚಿಸಿದ್ದೇನೆ.
ಸಿದ್ದರಾಮಯ್ಯ,
ಮಾಜಿ ಸಿಎಂ, ಬಾದಾಮಿ ಶಾಸಕರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.