ನೀರಿನಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

ಟ್ಟಿರುವ ಕೆರೆ ತೂಬು ದುರಸ್ತಿಯಾಗದೆ ಅನಾಹುತ • ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ

Team Udayavani, Aug 22, 2019, 5:16 PM IST

22-Agust-36

ಮಂಡ್ಯ ಸಮೀಪವಿರುವ ಕಿರಗಂದೂರು ಕೆರೆ ಭರ್ತಿಯಾಗಿ ಕೋಡಿ ಹರಿದಿರುವುದು.

ಮಂಡ್ಯ: ಕೆರೆ ಭರ್ತಿಯಾಗಿ ಕೋಡಿ ಹರಿದ ಪರಿಣಾಮ ಕೆರೆ ಅಚ್ಚುಕಟ್ಟು ವ್ಯಾಪ್ತಿಯ ಸುಮಾರು 60 ಎಕರೆಯಷ್ಟು ಜಮೀನು ಜಲಾವೃತವಾಗಿರುವ ಘಟನೆ ತಾಲೂಕಿನ ಕಿರಗಂದೂರು ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವುದರಿಂದ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಲ್ಲಿ ನೀರು ಹರಿಸಲಾಗುತ್ತಿದೆ. ಕಿರಗಂದೂರು ಕೆರೆ ನಾಲಾ ವ್ಯಾಪ್ತಿಯ ಸಂಪರ್ಕದಲ್ಲಿರುವುದರಿಂದ ಕೆರೆ ಭರ್ತಿಯಾಗಿ ಕೋಡಿ ಹರಿದಿದೆ. ಕೆರೆಯ ತೂಬನ್ನು ಮೇಲೆತ್ತಿದ್ದರೂ ಕಾಲುವೆಗಳು ಹಾಗೂ ಪಿಕಪ್‌ ನಾಲೆಗಳಲ್ಲಿ ಗಿಡ-ಗಂಟೆಗಳು ಬೆಳೆದು ನಿಂತಿದ್ದರಿಂದ ನೀರು ಅಡ್ಡಾದಿಡ್ಡಿಯಾಗಿ ಹರಿದು ಜಮೀನುಗಳಿಗೆ ನೀರು ನುಗ್ಗಿದೆ ಎಂದು ರೈತರು ಆರೋಪಿಸಿದ್ದಾರೆ.

ಕೆರೆಯ ತೂಬು ಬಂದ್‌: ಜೂನ್‌, ಜುಲೈ ತಿಂಗಳಲ್ಲಿ ಮಳೆಯಾಗದಿದ್ದರಿಂದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಭತ್ತದ ಬೆಳೆ ಬೆಳೆಯದಂತೆ ನೋಟಿಸ್‌ ಜಾರಿ ಮಾಡಿ ನೀರಾವರಿ ಇಲಾಖೆ ಅಧಿಕಾರಿಗಳು ಕೆರೆಯ ತೂಬನ್ನು ಬಂದ್‌ ಮಾಡಿದ್ದರು. ನಂತರದಲ್ಲಿ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿದ್ದರಿಂದ ಕೆರೆಯ ತೂಬನ್ನು ಅರ್ಧ ತೆಗೆದಿದ್ದರು ಎನ್ನಲಾಗಿದೆ.

ಇದರ ನಡುವೆ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡುವವರು ಕಬ್ಬಿಣದ ಜಾಲರಿಯನ್ನು ತೂಬಿನ ಪಕ್ಕದಲ್ಲಿ ಅಳವಡಿಸಿ ಮೀನುಗಳು ನೀರು ಹೊರ ಹೋಗದಂತೆ ತಡೆಹಿಡಿದಿದ್ದರು.

ಪಿಕಪ್‌ ನಾಲೆಗಳ ಅವ್ಯವಸ್ಥೆ: ಎರಡು ದಿನಗಳ ಕಾಲ ಭಾರೀ ಮಳೆಯಾಗುವುದರೊಂದಿಗೆ ನಾಲೆಯ ನೀರು ಹರಿದು ಕೆರೆ ಭರ್ತಿಯಾಗಿದ್ದರಿಂದ ಬುಧವಾರ ಬೆಳಗ್ಗೆಯೇ ಕೆರೆ ಕೋಡಿ ಹರಿದು ನೀರು ಹರಿಯಲಾರಂಭಿಸಿತು.

ಕೂಡಲೇ ನೀರಾವರಿ ಇಲಾಖಾ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದಾಗ ಎಂಜಿನಿಯರ್‌ಗಳು ಸ್ಥಳಕ್ಕೆ ಆಗಮಿಸಿ ಕೆರೆಯ ತೂಬನ್ನು ಪೂರ್ಣ ಪ್ರಮಾಣದಲ್ಲಿ ಮೇಲೆತ್ತಿ ನೀರು ಹರಿದುಹೋಗುವಂತೆ ಮಾಡಿ ಕೆರೆಗೆ ಹಾನಿಯಾಗದಂತೆ ತಡೆದರು.

ಮೀನು ಸಾಕಾಣೆ ಗುತ್ತಿಗೆ ಪಡೆದವರು ಅಳವಡಿಸಿದ್ದ ಕಬ್ಬಿಣದ ಜಾಲರಿಯನ್ನು ಗ್ರಾಮಸ್ಥರು ಕಿತ್ತೆಸೆದರು. ಆದರೆ, ಕಾಲುವೆ ಹಾಗೂ ಪಿಕಪ್‌ ನಾಲೆಗಳು ಅವ್ಯವಸ್ಥೆಯಿಂದ ಕೂಡಿದ್ದರಿಂದ ನೀರು ಮೇಲ್ಭಾಗಕ್ಕೆ ಹರಿದು ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ.

ಬಿತ್ತನೆಗೆ ಸಜ್ಜು: ಕೆರೆ ಭರ್ತಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ಕೃಷಿ ಚಟುವಟಿಕೆಗಳಿಗೆ ಚುರುಕು ನೀಡಿ ಜಮೀನನ್ನು ಬಿತ್ತನೆಗೆ ಸಜ್ಜುಗೊಳಿಸುತ್ತಿದ್ದರು. ಹಲವರು ಭತ್ತದ ಸಸಿ ಮಡಿಗಳನ್ನು ಮಾಡಿಕೊಂಡು ನಾಟಿಗೆ ಸಿದ್ಧತೆ ನಡೆಸಿದ್ದರಲ್ಲದೆ, ಇನ್ನೂ ಕೆಲವರು ಕಬ್ಬು ಬೆಳೆಯನ್ನೂ ಬೆಳೆದಿದ್ದರು.

ಈಗ ಜಮೀನುಗಳಿಗೆ ನೀರು ರಭಸದಿಂದ ಹರಿದ ಪರಿಣಾಮ ಬೆಳೆ ನೀರಿನಲ್ಲಿ ಕೊಚ್ಚಿಹೋಗಿದೆ. ಭೂಮಿಯ ಫ‌ಲವತ್ತತೆಯೂ ಹಾಳಾಗಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಪಿಕಪ್‌, ಕಾಲುವೆ ಸುಸ್ಥಿತಿ: ಕಿರಗಂದೂರು ಕೆರೆ ಅಚ್ಚುಕಟ್ಟು ಪ್ರದೇಶ 106 ಎಕರೆ ಇದ್ದು, ಕೆರೆಯಿಂದ ಕೋಡಿ ಹರಿದ ನೀರು ಕೋಣಹಳ್ಳಿ ಹಾಗೂ ಕಲ್ಲಹಳ್ಳಿ ಕೆರೆಯನ್ನು ಸೇರುತ್ತದೆ. ಕೆರೆ ಕೋಡಿ ಬಿದ್ದ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ನೀರು ಹರಿದುಹೋಗಲು ವ್ಯವಸ್ಥೆ ಮಾಡಿ ಹೆಚ್ಚು ಹಾನಿ ಸಂಭವಿಸುವುದನ್ನು ತಡೆದಿದ್ದಾರೆ.

ಈಗಲಾದರೂ ಪಿಕಪ್‌ ಹಾಗೂ ಕಾಲುವೆಗಳನ್ನು ಸುಸ್ಥಿತಿಯಲ್ಲಿಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು.

ಟಾಪ್ ನ್ಯೂಸ್

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.