2 ಪಂಪ್‌ಸೆಟ್‌ಗೆ 1ಟೀಸಿ ಯೋಜನೆ ಶೀಘ್ರ ಜಾರಿ

Team Udayavani, Feb 7, 2020, 5:11 PM IST

mamdya-tdy-1

ಮಳವಳ್ಳಿ: ರೈತರನ್ನು ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಎರಡು ಪಂಪ್‌ಸೆಟ್‌ಗಳಿಗೆ ಒಂದು ಟೀಸಿ ಅಳವಡಿಸುವ ಯೋಜನೆ ರೂಪಿಸಿದ್ದು, ಅದನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು ಎಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರೆವೇರಿಸಿ ಮಾತನಾಡಿ, ಕರ್ನಾಟಕ ಸರ್ಕಾರ ಕಾವೇರಿ ನೀರಾವರಿ ನಿಗಮದ ವತಿಯಿಂದ ನೀರಾವರಿ ಇಲಾಖೆಯಲ್ಲಿ ಹಲವಾರು ಹೊಸ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಂಜೇಗೌಡನದೊಡ್ಡಿ ಪಿಕಪ್‌ ನಾಲೆಯ ಕಾಮಗಾರಿಗೆ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ, ಕೋರೇಗಾಲ ಗ್ರಾಮದ ಪಿಕಪ್‌ ನಾಲೆ ಅಭಿವೃದ್ಧಿಗಾಗಿ 15 ಲಕ್ಷ ರೂ. ಕಿರುಗಾವಲು ಹೋಬಳಿ ನಂಜೇಗೌಡನದೊಡ್ಡಿ ಗ್ರಾಮದಲ್ಲಿ ಗಾಡಿ ಸೇತುವೆ ನಿರ್ಮಾಣ ಕಾಮಗಾರಿಗೆ 10 ಲಕ್ಷರೂ, ರಸ್ತೆ ಮತ್ತು ಸಿಸಿ ಡ್ರೈನೇಜ್‌ಗೆ 10 ಲಕ್ಷ ರೂ., ದೊಡ್ಡೇಗೌಡನಕೊಪ್ಪಲು ಗಾಡಿ ಸೇತುವೆ ಕಾಮಗಾರಿಗೆ 10 ಲಕ್ಷ ರೂ., ಹೂವಿನಕೊಪ್ಪಲು ಗ್ರಾಮದ ಮೈನರ್‌ ಗಾಡಿ ಸೇತುವೆ ನಿರ್ಮಾಣಕ್ಕೆ 10 ಲಕ್ಷ ರೂ. ಬೆಳಕವಾಡಿಯಲ್ಲಿ 30 ಲಕ್ಷರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರೆವೇರಿಸಲಾಗಿದೆ ಎಂದು ಹೇಳಿದರು.

ನಾಲೆಗಳು ಅಭಿವೃದ್ಧಿಯಾಗಿಲ್ಲ, ಪಿಕಪ್‌ ನಾಲೆಗಳನ್ನು ಸರಿಯಾದ ರೀತಿಯಲ್ಲಿ ಅಭಿವೃದ್ಧಿಪಡಿಸಿಲ್ಲ ಎಂದು ರೈತರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಹಣ ಬಿಡುಗಡೆಗೊಳಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ರೈತರ ಹೊಲ ಗದ್ದೆಗಳಿಗೆ ಹೋಗಲು ಸಹಾಯವಾಗುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಅಲ್ಲದೆ ಸಮರ್ಪಕ ನೀರು ಪೂರೈಕೆ ಮತ್ತು ಪೋಲಾಗುತ್ತಿರುವ ನೀರಿನ ಸೋರಿಕೆ ತಡೆಗಟ್ಟಲು ಗೇಟ್‌ ವಾಲ್‌ಗ‌ಳನ್ನು ಅಭಿವೃದ್ಧಿ ಪಡಿಸಲು ಆಗತ್ಯ ಕ್ರಮ ಕೈಗೊಳ್ಳಲಾಗಿದ್ದು, 25 ಕೋಟಿ ರೂ.ಗಳಿಗೂ ಹೆಚ್ಚು ಹಣ ನೀರಾವರಿ ಅನುಕೂಲಕ್ಕಾಗಿ ಬಿಡುಗಡೆಯಾಗಿದೆ ಎಂದರು.

ತಾಲೂಕಿನ ವ್ಯಾಪ್ತಿಯ ಕುಡಿಯುವ ನೀರಿನ ಯೋಜನೆಗಾಗಿ 150 ಕೋಟಿರೂ ವೆಚ್ಚದಲ್ಲಿ ಅಂದಾಜು ವೆಚ್ಚ ಪಟ್ಟಿ ಸಿದ್ದಪಡಿಸಲಾಗಿದೆ. ಕಿರುಗಾವಲು ಹೋಬಳಿಯ ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿ ತ್ವರಿತ ರೀತಿಯಲ್ಲಿ ನಡೆಯುತ್ತಿದ್ದು, ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಇದೇ ವೇಳೆ ಜೆಡಿಎಸ್‌ ತಾಲೂಕು ಅಧ್ಯಕ್ಷ ಮಲ್ಲೇಗೌಡ, ಪುರಸಭೆ ಸದಸ್ಯರಾದ ಸಿದ್ದರಾಜು, ನಂದಕುಮಾರ್‌, ಪೊತೆಂಡೆ ನಾಗರಾಜು, ಮಹೇಶ್‌, ಪ್ರಕಾಶ್‌, ಎಂಜಿನಿಯರ್‌ ರಾಮಚಂದ್ರ, ಬಸವರಾಜು, ಅಭಿ, ಕುಮಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.