ಗುರು ಸ್ಮಾರಕಕ್ಕೆ 25 ಲಕ್ಷ ರೂ. ಬಿಡುಗಡೆ

Team Udayavani, Feb 21, 2020, 2:46 PM IST

ಮಂಡ್ಯ: ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ ಮದ್ದೂರು ತಾಲೂಕಿನ ಗುಡಿಗೆರೆ ಗ್ರಾಮದ ಹೆಚ್‌. ಗುರು ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ.

ಸ್ಮಾರಕ ನಿರ್ಮಾಣಕ್ಕೆ 25 ಲಕ್ಷ ರೂ. ಹಣವನ್ನು ಕೂಡಲೇ ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಹೆಚ್‌.ಗುರು ಮೊದಲ ವರ್ಷದ ಪುಣ್ಯಸ್ಮರಣೆ ದಿನದಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಗುರು ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಪತ್ರ ಬರೆದಿದ್ದರು. ಅಲ್ಲದೆ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅವರೂ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಮಾರಕ ನಿರ್ಮಾಣ ಸಂಬಂಧ ಸರ್ಕಾರಕ್ಕೆ ಪತ್ರ ಬರೆದು ಗಮನ ಸೆಳೆದಿದ್ದರು.

ಬೆಂಗಳೂರಿನ ಡಿಐಜಿಪಿ, ಜಿಸಿ, ಸಿಆರ್‌ಪಿಎಫ್ ಹುತಾತ್ಮ ಗುರು ನೆನಪಿಗಾಗಿ ಸ್ಮಾರಕ ನಿರ್ಮಿಸಲಿದ್ದು, ಸಮಾಧಿ ಸ್ಥಳದಲ್ಲಿ ಉದ್ಯಾನವನ, ಬೆಳಕಿನ ವ್ಯವಸ್ಥೆ ನಿರ್ಮಾಣ ಮಾಡಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರಯೋಧನ ಬಲಿದಾನದ ಸಂದೇಶವನ್ನು ಜನರಿಗೆ ಸಾರಿ ಹೇಳುವ ರೀತಿಯಲ್ಲಿ ಸ್ಮಾರಕ ನಿರ್ಮಾಣ ಮಾಡಲು ಉದ್ದೇಶಿಸಿದೆ. ಈ ಕಾರ್ಯಕ್ಕೆ 25 ಲಕ್ಷ ರೂ. ಅಂದಾಜು ವೆಚ್ಚದ ಯೋಜನೆ ತಯಾರಿಸಿ ಹಣ ಬಿಡುಗಡೆಗೆ ಮುಖ್ಯಮಂತ್ರಿಯವರ ಕಾರ್ಯದರ್ಶಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದರು. ಈ ಬೆಳವಣಿಗೆಗಳ ಹಿನ್ನೆಲೆ ಯಲ್ಲಿ ಸಿಎಂ ಯಡಿಯೂರಪ್ಪ ಅವರು 25 ಲಕ್ಷ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿರುವುದು ಯೋಧರ ಕುಟುಂಬ ವರ್ಗದವರಲ್ಲಿ ಸಂತಸ ಮೂಡಿಸಿದೆ.

ಶೀಘ್ರ ಕಾರ್ಯಾರಂಭ: ಗುರು ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಲು ರಾಜ್ಯಸರ್ಕಾರ 25 ಲಕ್ಷ ರೂ. ಹಣ ಬಿಡುಗಡೆ ಮಾಡಿರುವುದರಿಂದ ಕೂಡಲೇ ಸ್ಮಾರಕ ವಿನ್ಯಾಸ, ಉದ್ಯಾನವನ, ವಿದ್ಯುತ್‌ ದೀಪಾಲಂಕಾರ, ಕಲ್ಲು ಬೆಂಚುಗಳ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿಗಳ ಸಂಬಂಧ ಅಂದಾಜು ವೆಚ್ಚ, ಯೋಜನಾ ನಕ್ಷೆ ತಯಾರಿಸಿ ಕಾಮಗಾರಿ ಆರಂಭಿಸ ಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.  ವೆಂಕಟೇಶ್‌ ಉದಯವಾಣಿಗೆ ತಿಳಿಸಿದರು.

ಸರ್ಕಾರ 25 ಲಕ್ಷ ರೂ. ಹಣ ಬಿಡುಗಡೆ ಮಾಡಿದ್ದು, ಹಣಕಾಸಿನ ಕೊರತೆ ಎದುರಾದಲ್ಲಿ ದಾನಿಗಳಿಂದ ಸಂಗ್ರಹಿಸಿ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಗುರು ಇರುವ ಸ್ಮಾರಕ ಸ್ಥಳ ಒಂದು ಎಕರೆ ಪ್ರದೇಶದಲ್ಲಿದೆ. ಅದನ್ನು ಸ್ಮಾರಕ ಸ್ಥಳವಾಗಿ ಮಾತ್ರವಲ್ಲದೆ, ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಸ್ಮಾರಕ ಸ್ಥಳ ಕೊರಟ ಗೆರೆ ಕೊಳ್ಳೇಗಾಲ ರಾಜ್ಯ ಹೆದ್ದಾರಿ ಯಲ್ಲಿರುವುದರಿಂದ ಹೆಚ್ಚಿನ ಪ್ರವಾಸಿಗರ ಆಕರ್ಷಣೆಯ ಸ್ಥಳವಾಗಲಿದೆ ಎಂದು ಹೇಳಿದರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮಂಡ್ಯ: ಜಿಲ್ಲೆಯಲ್ಲಿ 9 ಕಡೆ ಜ್ವರ ತಪಾಸಣೆ ಕೇಂದ್ರಗಳನ್ನು ಗುರುತಿಸಲಾಗಿದ್ದು, ಜ್ವರಕ್ಕೆ ಸಂಬಂಧಿಸಿದಂತೆ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ...

  • ಮಂಡ್ಯ: ರಾಜ್ಯದಲ್ಲಿ ಕೋವಿಡ್ 19 ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನೂ ಲೆಕ್ಕಿಸದೆ ನಗರದೊಳಗೆ...

  • ನಾಗಮಂಗಲ: ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ತೀವ್ರವಾಗಿ ಹರಡುತ್ತಾ ಜನರನ್ನು ಆತಂಕ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ 144 ನೇ ಸೆಕ್ಷನ್‌...

  • ಭಾರತೀನಗರ: ಸಮೀಪದ ಕೊಕ್ಕರೆಬೆಳ್ಳೂರು ಪಕ್ಷಿಧಾಮದಲ್ಲಿ ಕಳೆದ ಮಂಗಳವಾರ (ಮಾ.17) ಮೃತಪಟ್ಟಿದ್ದ ಪೆಲಿಕಾನ್‌ಗೆ ಹಕ್ಕಿಜ್ವರವಿಲ್ಲ ಎಂದು ಬೆಂಗಳೂರು ಹೆಬ್ಟಾಳದ...

  • ಮಂಡ್ಯ: ಕೊರೊನಾ ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿದ್ದ ಜನತಾ ಕರ್ಫ್ಯೂ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಯಶಸ್ಸನ್ನು...

ಹೊಸ ಸೇರ್ಪಡೆ