ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ 61ರ ವೃದ್ಧ; ಬಾಲಕಿ ಗರ್ಭಿಣಿಯಾದಾಗ ವಿಚಾರ ಬೆಳಕಿಗೆ
Team Udayavani, Dec 3, 2020, 7:59 PM IST
ಸಾಂಧರ್ಭಿಕ ಚಿತ್ರ ಬಳಸಲಾಗಿದೆ
ಮಂಡ್ಯ: ಅಪ್ರಾಪ್ತ ಬಾಲಕಿ ಮೇಲೆ 61 ವರ್ಷದ ವೃದ್ಧನೊಬ್ಬ ಅತ್ಯಾಚಾರ ಮಾಡಿರುವ ಘಟನೆ ಮಂಡ್ಯದ ಗಾಂಧಿನಗರದ 8ನೇ ಕ್ರಾಸ್ನಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೋವಿಡ್ ಲಾಕ್ಡೌನ್ ಸಂದರ್ಭದಲ್ಲೇ ಮೂರ್ನಾಲ್ಕು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಬಾಲಕಿಯು ಗರ್ಭಿಣಿಯಾಗಿದ್ದರಿಂದ ಅತ್ಯಾಚಾರ ವಿಚಾರ ಬಯಲಾಗಿದೆ. ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣರಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಾoಧಿನಗರ 8ನೇ ಕ್ರಾಸ್ ನಿವಾಸಿ ವೆಂಕಟೇಶ್ (61) ಬಂಧಿತ ಆರೋಪಿ. ಈತ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಆರೋಪಿಯ ನೆರೆ ಮನೆಯ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಯಾರಿಗೂ ವಿಷಯ ತಿಳಿಸಿದಂತೆ ಪ್ರಾಣ ಬೆದರಿಕೆ ಹಾಕಿದ್ದನು. ಇದರಿಂದ ಬೆದರಿದ ಬಾಲಕಿಯು, ಮನೆಯವರಿಂದಲೂ ವಿಷಯ ಮುಚ್ಚಿಟ್ಟಿದ್ದಳು.
ಇದನ್ನೂ ಓದಿ: ಅರೆನಗ್ನ ದಿರಿಸಿನಲ್ಲಿ ಈಜಿಪ್ಟ್ ಪಿರಮಿಡ್ ಮುಂಭಾಗ ರೂಪದರ್ಶಿ ಫೋಟೋ ಶೂಟ್, ಇಬ್ಬರ ಬಂಧನ!
ಆದರೀಗ ಬಾಲಕಿಯು 3 ತಿಂಗಳ ಗರ್ಭಿಣಿಯಾಗಿದ್ದ ಹಿನ್ನೆಲೆಯಲ್ಲಿ ವಿಷಯ ಮನೆಯವರಿಗೆ ಗೊತ್ತಾಗಿದೆ. ಗರ್ಭಿಣಿಯಾಗಿರುವ ಬಗ್ಗೆ ಪ್ರಶ್ನಿಸಿದಾಗ ಬಾಲಕಿಯು ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ವಿಷಯ ತಿಳಿಸಿದ್ದಾಳೆ. ಅದರಂತೆ ಬಾಲಕಿಯರ ತಾಯಿಯು ಡಿ.3ರಂದು ರಾತ್ರಿ ಮಂಡ್ಯ ಪಶ್ಚಿಮ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಗುರುವಾರ ಆರೋಪಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ