ಆಂಗ್ಲದಲ್ಲಿ ಶೇ.70 ಗ್ರಾಮೀಣ ವಿದ್ಯಾರ್ಥಿಗಳು ಫೇಲ್

ಕಲಿಕೆಯ ಬಗ್ಗೆ ಭಯ, ಕೀಳರಿಮೆ ಸೃಷ್ಟಿ: ಪ್ರೊ.ಬಿ.ಕೆ.ಚಂದ್ರಶೇಖರ್‌ • ಕನ್ನಡ ಮಾಧ್ಯಮ- ಇಂಗ್ಲಿಷ್‌ ವಿಚಾರ ಸಂಕಿರಣ

Team Udayavani, Sep 1, 2019, 1:25 PM IST

mandya-tdy-2

ನಗರದ ಪ್ರವಾಸಿ ಮಂದಿರದಲ್ಲಿ ಕನ್ನಡ ಸೇನೆ ಕರ್ನಾಟಕ ಸಂಘಟನೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಶಿಕ್ಷಣ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್‌ ಮಾತನಾಡಿದರು.

ಮಂಡ್ಯ: ಗ್ರಾಮೀಣ ಶಾಲೆಗಳಲ್ಲಿ ಕಲಿಯುವ ಶೇ.70ರಷ್ಟು ವಿದ್ಯಾರ್ಥಿಗಳು ಇಂಗ್ಲಿಷ್‌ ವಿಷಯದಲ್ಲಿ ಅನುತೀರ್ಣರಾಗುತ್ತಿದ್ದಾರೆ. ಇದರಿಂದ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಭಯ ಹಾಗೂ ಕೀಳರಿಮೆ ಉಂಟಾಗುತ್ತಿದೆ ಎಂದು ಮಾಜಿ ಶಿಕ್ಷಣ ಸಚಿವ ಪ್ರೊ.ಬಿ.ಆರ್‌.ಚಂದ್ರಶೇಖರ್‌ ಆತಂಕ ವ್ಯಕ್ತಪಡಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಘಟಕ ಆಯೋಜಿಸಿದ್ದ ಕನ್ನಡ ಮಾಧ್ಯಮ-ಇಂಗ್ಲಿಷ್‌ ಭಾಷೆ ಕುರಿತ ವಿಚಾರ ಸಂಕಿರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂಗ್ಲಿಷ್‌ನಿಂದ ಆತಂಕ ಸೃಷ್ಟಿ: ಶಿಕ್ಷಣ ವ್ಯವಸ್ಥೆಯಲ್ಲಿ ಮೂರರಿಂದ ನಾಲ್ಕನೇ ತರಗತಿವರೆಗೆ ಇಂಗ್ಲಿಷ್‌ನ್ನು ಒಂದು ಭಾಷೆಯಾಗಿ ಕಲಿಯಲಿ. ಆದರೆ, ಅದಕ್ಕೆ ಪರೀಕ್ಷೆ ಇರಬಾರದು. ಇಂದಿನ ಶಿಕ್ಷಕರು ಇಂಗ್ಲಿಷ್‌ ಹೇಳಿಕೊಡುತ್ತಿರುವುದನ್ನು ನೋಡಿದರೆ ಮಕ್ಕಳು ಸತ್ತುಹೋಗುತ್ತಾರೆ. ಅದೇನು ಕಲಿತು ಹೇಳಿಕೊಡುತ್ತಾರೋ ಗೊತ್ತಿಲ್ಲ ಎಂದ ಅವರು, ಪ್ರಸ್ತುತ ಅಧಿಕಾರದಲ್ಲಿರುವ ರಾಜ್ಯ ಸರ್ಕಾರದಿಂದಲೂ ಮಾತೃಭಾಷಾ ಶಿಕ್ಷಣಕ್ಕೆ ಒತ್ತುಕೊಡಲು ಸಾಧ್ಯವಿಲ್ಲ. ಕಾರಣ ಬಿಜೆಪಿ ಏನೇ ಮಾಡಬೇಕಾದರೂ ಆರ್‌ಎಸ್‌ಎಸ್‌ ಆಜ್ಞೆ ಪಾಲಿಸಲೇಬೇಕಾಗುತ್ತದೆ ಎಂದರು.

ಕನ್ನಡದಲ್ಲಿ ಅನ್ನ ಕೊಡುವ ಶಕ್ತಿ: ಪ್ರಾಥಮಿಕ ಶಿಕ್ಷಣ ಮಕ್ಕಳಿಗೆ ಮಾತೃಭಾಷೆಯಲ್ಲೇ ದೊರಕಬೇಕು. ಆನಂತರ ಮಕ್ಕಳು ಯಾವುದೇ ಭಾಷೆಯನ್ನು ಕಲಿಯುವುದಕ್ಕೆ ಅವಕಾಶ ಮಾಡಿಕೊಡಬೇಕು. ಇಂಗ್ಲಿಷ್‌ ಎಂಬ ಪೆಡಂಭೂತವನ್ನು ಮೊದಲು ತಲೆಯಿಂದ ತೆಗೆದುಹಾಕಬೇಕು. ಇಂಗ್ಲಿಷ್‌ ಕಲಿಯದಿದ್ದರೆ ಬದುಕೇ ಇಲ್ಲ ಎಂಬಂಥ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ಕನ್ನಡ ಶ್ರೀಮಂತ ಭಾಷೆಯಾಗಿದ್ದು, ಶಬ್ಧ ಸಂಪತ್ತನ್ನು ತುಂಬಿಕೊಂಡಿರುವ ಭಂಡಾರವಾಗಿದೆ. ಜೀವನವನ್ನು ರೂಪಿಸುವ, ಅನ್ನ ಕೊಡುವ ಶಕ್ತಿ ಕನ್ನಡಕ್ಕಿದೆ. ಇದನ್ನು ಯಾರೂ ಅರ್ಥ ಮಾಡಿಕೊಳ್ಳುತ್ತಲೇ ಇಲ್ಲ. ಕನ್ನಡ ಭಾಷೆಯನ್ನು ಸಮರ್ಥವಾಗಿ ಬಳಸಿಕೊಂಡು ಬದುಕು ಕಟ್ಟಿಕೊಂಡಿರುವವರು ನಮ್ಮ ಕಣ್ಮುಂದೆ ಇದ್ದರೂ ಯಾರೂ ಸಹ ಅವರತ್ತ ತಿರುಗಿ ನೋಡುತ್ತಲೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷ ಮಂಜುನಾಥ್‌, ಮಹಿಳಾಧ್ಯಕ್ಷೆ ಸೌಭಾಗ್ಯಶಿವಲಿಂಗು, ನಗರಾಧ್ಯಕ್ಷ ಶಿವಾಲಿ, ಮಂಜುನಾಥ್‌, ರಾಜು, ಅಸ್ಲಂಪಾಷ, ವಿನಯ್‌, ಸತೀಶ್‌ ಪಾಲ್ಗೊಂಡಿದ್ದರು.

ಯೋಗ, ಸಂಗೀತ ಒತ್ತಡ ಕಡಿತಕ್ಕೆ ಅನುಕೂಲ:

ನಾನು ಶಿಕ್ಷಣ ಸಚಿವನಾಗಿದ್ದಾಗ ಪುಸ್ತಕದ ಹೊರೆ ಇಳಿಸಿದ್ದೆ. ತ್ತೈಮಾಸಿಕ ಪರೀಕ್ಷೆ ವ್ಯವಸ್ಥೆ ಜಾರಿಗೆ ತಂದಿದ್ದೆ. ಆದರೆ, ವರ್ಷಕ್ಕೊಂದು ಪರೀಕ್ಷೆ ಮಾಡಬೇಕೆಂಬ ಸಾಂಕ್ರಾಮಿಕ ರೋಗ ಈ ದೇಶದಲ್ಲಿದೆ. ಫ‌ಸ್ಟ್‌r ರ್‍ಯಾಂಕ್‌, ಸೆಕೆಂಡ್‌ ರ್‍ಯಾಂಕ್‌ ಹಾಕದಿದ್ದರೆ ಉತ್ತೇಜನ ಸಿಗಲ್ವಂತೆ. ಈಗ ಎಂಟನೇ ತರಗತಿ ಫೇಲಾದ ಮಕ್ಕಳು ನೇಣಿಗೆ ಶರಣಾಗುತ್ತಿದ್ದಾರೆ. ಯೋಗ, ಸಂಗೀತ ವಿಷಯಗಳನ್ನು ಸೇರ್ಪಡೆಗೊಳಿಸಿದ್ದೆ. ಕಾರಣ ಗಣಿತ ಹಾಗೂ ವಿಜ್ಞಾನ ಪಾಠ ಕೇಳಿ ಒತ್ತಡ ಇರುತ್ತದೆ. ಅದರಿಂದ ಮಕ್ಕಳ ಒತ್ತಡ ಕಡಿಮೆ ಮಾಡಲು ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಆ ಎಲ್ಲವನ್ನು ನಂತರ ಮುಂದುವರಿಸಲಿಲ್ಲ ಇದು ಬೇಸರದ ಸಂಗತಿ ಎಂದು ಮಾಜಿ ಶಿಕ್ಷಣ ಸಚಿವ ಪ್ರೊ.ಬಿ.ಆರ್‌.ಚಂದ್ರಶೇಖರ್‌ ತಿಳಿಸಿದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.