ನಾಗಮಂಗಲ: ಬಸ್ ಢಿಕ್ಕಿ; ಕಾರಿನಲ್ಲಿದ್ದ ನವ ದಂಪತಿ ಸೇರಿ, ಮೂವರು ದಾರುಣ ಸಾವು
Team Udayavani, Jan 2, 2022, 7:35 PM IST
ಮಂಡ್ಯ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಕೆಂಪನಕೊಪ್ಪಲು ಗೇಟ್ ಸಮೀಪದ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಸುದೀಪ್(35), ಶ್ರೀಜಾ(30) ಹಾಗೂ ಸಂಗಮ್ಮ(55) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿದ್ದ ಮತ್ತೊಬ್ಬ 18 ವರ್ಷದ ಯುವತಿಗೆ ತೀವ್ರ ಗಾಯಗೊಂಡು ಬಿ.ಜಿ.ನಗರದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಲ್ಲದೆ, ಬಸ್‌ನಲ್ಲಿದ್ದ ಚಾಲಕ ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ.
ಮೃತರಾದ ಸುದೀಪ್ ಹಾಗೂ ಶ್ರೀಜಾ ಡಿ.11ರಂದು ಮದುವೆಯಾಗಿದ್ದರು. ಮದುವೆಯಾಗಿ ಒಂದು ತಿಂಗಳು ಕಳೆಯುವುದರೊಳಗೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಬ್ಯಾಂಕ್‌ವೊಂದರಲ್ಲಿ ಮ್ಯಾನೇಜರ್ ಆಗಿದ್ದ ಸುದೀಪ್ ದಂಪತಿ ಬೆಂಗಳೂರಿನಲ್ಲಿಯೇ ನೆಲೆಸಿದ್ದರು. ಅಮಾವಾಸ್ಯೆ ಪೂಜೆ ಮುಗಿಸಿ ಬರುತ್ತಿದ್ದ ನವಜೋಡಿ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
ಅತಿ ವೇಗವಾಗಿ ಬಸ್ ಹಾಗೂ ಕಾರು ಚಲಿಸುತ್ತಿದ್ದು, ಮುಖಾಮುಖಿ ಢಿಕ್ಕಿಯಾಗಲು ಕಾರಣ ಎನ್ನಲಾಗುತ್ತಿದೆ. ಕಾರಿನಲ್ಲಿದ್ದವರು ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಅಮಾವಾಸ್ಯೆಯ ಪೂಜೆ ಮುಗಿಸಿ ಮೈಸೂರು ಮಾರ್ಗವಾಗಿ ತೆರಳುವಾಗ ಜಾರನಕಟ್ಟೆ ತಿರುವಿನಲ್ಲಿರುವ ಕೆಂಪನಕೊಪ್ಪಲು ಗೇಟ್ ಬಳಿ ಎದುರಾದ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ.
ಸ್ಥಳದಲ್ಲೇ ಮೃತಪಟ್ಟ ಮೂವರನ್ನು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಜನಾದ್ರಿಗೆ ಭೂಸ್ವಾಧೀನ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ, ಹೆಚ್ಚಿನ ಪರಿಹಾರಕ್ಕೆ ಪಟ್ಟು
ವಿದ್ಯುತ್ ಕಂಪೆನಿಗಳ ಸುಧಾರಣೆ: ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ ;ಸಿಎಂ ಸೂಚನೆ
ಬಹುನಿರೀಕ್ಷಿತ ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ: ಸರಕಾರದಿಂದ ಅಧಿಕೃತ ಆದೇಶ
ರಸ್ತೆಯಲ್ಲಿ ಸಿಕ್ಕ ಹಣವನ್ನು ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಟೀ ಅಂಗಡಿ ಮಾಲೀಕ
ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನ
MUST WATCH
ತನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಖಾದರ್
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಹೊಸ ಸೇರ್ಪಡೆ
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?
ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ: ಲಷ್ಕರ್ ಉಗ್ರನ ಬಂಧನ; ಶಸ್ತ್ರಾಸ್ತ್ರಗಳು ವಶ
ಮಹೀಂದ್ರಾ ಸ್ಕಾರ್ಪಿಯೋ-ಎನ್ ಬಿಡುಗಡೆ: ಜು.30ರಿಂದ ಮುಂಗಡ ಬುಕಿಂಗ್ ಆರಂಭ
ಕೆಂಪೇಗೌಡ ಭಾವಚಿತ್ರಕ್ಕೆ ಅಪಮಾನ : ತಪ್ಪಿಸ್ಥರ ವಿರುದ್ದ ಕ್ರಮ ; ಶಾಸಕ ಡಾ.ರಂಗನಾಥ್