ರೈತರಿಗೆ ಮಾಹಿತಿ ನೀಡಲು ಕೃಷಿ ಅಭಿಯಾನ

ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ವಸ್ತು ಪ್ರದರ್ಶನ, ವಿಚಾರಸಂಕಿರಣ

Team Udayavani, Aug 11, 2019, 3:47 PM IST

mandya-tdy-2

ಮದ್ದೂರು ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಕೃಷಿ ವಸ್ತು ಪ್ರದರ್ಶನಲ್ಲಿ ತಾಲೂಕಿನ ರೈತರು ಬೆಳೆದ ವಿವಿಧ ಬಗೆಯ ಹಣ್ಣು, ತರಕಾರಿ ಮತ್ತಿತರೆ ಕೃಷಿ ಉತ್ಪನ್ನಗಳನ್ನು ಜಿಪಂ ಸದಸ್ಯ ಬೋರಯ್ಯ ವೀಕ್ಷಿಸಿದರು.

ಮದ್ದೂರು: ರೈತರು ಕೃಷಿ ಮಾಹಿತಿ ಕೊರತೆ, ಸವಲುತ್ತು ಸಕಾಲದಲ್ಲಿ ತಲುಪದೆ, ಅಕಾಲಿಕ ಮಳೆ, ಬೆಳೆ ನಷ್ಟ ಸಂಭವಿಸಿ ಆತ್ಮಹತ್ಯೆಗಳಿಗೆ ಮುಂದಾಗುತ್ತಿರುವುದು ವಿಷಾದಕರ ಸಂಗತಿ ಎಂದು ಜಿಪಂ ಸದಸ್ಯ ಬೋರಯ್ಯ ತಿಳಿಸಿದರು.

ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ 2019-20ನೇ ಸಾಲಿನ ಸಮಗ್ರ ಕೃಷಿ ವಸ್ತು ಪ್ರದರ್ಶನ ಹಾಗೂ ವಿಚಾರಸಂಕಿರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ ಇಲಾಖೆ ಸೇರಿದಂತೆ ರೇಷ್ಮೆ, ತೋಟಗಾರಿಕೆ ಇಲಾಖೆಗಳು ರೈತರಿಗೆ ಕೃಷಿ ಅಭಿಯಾನ ನಡೆಸುವ ಮೂಲಕ ಸೂಕ್ತ ಮಾಹಿತಿ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ. ಸರ್ಕಾರಿ ಸೌಲಭ್ಯಗಳನ್ನು ನೇರವಾಗಿ ಹಾಗೂ ಸರಿಯಾದ ಸಮಯಕ್ಕೆ ತಲುಪಿಸಲು ಮುಂದಾಗಬೇಕೆಂದರು.

ರಾಜ್ಯ ಸರ್ಕಾರ ರೈತರಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು ಈ ಕುರಿತು ಇಲಾಖೆಗಳು ಮಾಹಿತಿ ನೀಡುವ ಜತೆಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ರೂಪಿಸಿ ರೈತರಲ್ಲಿ ಆತ್ಮಸ್ಥೈರ್ಯ ತುಂಬಲು ಕ್ರಮ ವಹಿಸಬೇ ಕೆಂದು ಸಲಹೆ ನೀಡಿದ‌ರು. ಸಹಾಯಕ ಕೃಷಿ ನಿರ್ದೇಶಕ ಶ್ರೀನಾಥ್‌ ಮಾತನಾಡಿ, ರಾಜ್ಯ ಸರ್ಕಾರ ಸಮಗ್ರ ಕೃಷಿ ಅಭಿಯಾನ ಯೋಜನೆ ಜಾರಿಗೆ ತಂದಿದ್ದು ರೈತರು ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಪಡೆದು ಆರ್ಥಿಕಾಭಿವೃದ್ಧಿ ಹೊಂದಬೇಕೆಂದು ಹೇಳಿದರು.

ವಸ್ತು ಪ್ರದರ್ಶನ: ರೇಷ್ಮೆ, ತೋಟಗಾರಿಕೆ, ಕೃಷಿ ಇಲಾಖೆ ಸೇರಿದಂತೆ ಆಗ್ರೋ ಕೇಂದ್ರಗಳಿಂದ ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ವಸ್ತು ಪ್ರದರ್ಶನ ಜರುಗುವ ಜತೆಗೆ ತಾಲೂಕಿನ ರೈತರು ಬೆಳೆದ ವಿವಿಧ ಬಗೆಯ ಹಣ್ಣು, ತರಕಾರಿ, ಕೃಷಿ ವಸ್ತು ಪ್ರದರ್ಶನ ನಡೆಯಿತು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ರೈತರಿಗೆ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ವತಿಯಿಂದ ಸಿಗಬಹುದಾದ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕೃಷಿ ವಿಜ್ಞಾನಿ ಅತಿಫಾ ರೈತರಿಗೆ ಆಧುನಿಕ ಕೃಷಿ ವಿಧಿ ವಿಧಾನಗಳ ಕುರಿತಿ ವಿಚಾರ ಸಂಕಿರಣ ನಡೆಸಿಕೊಟ್ಟರು.

ಮೌನಾಚರಣೆ: ಉತ್ತರ ಕರ್ನಾಟಕ ಹಾಗೂ ಕೊಡಗಿನಲ್ಲಿ ಸಂಭವಿಸುತ್ತಿರುವ ನೆರೆ ಹಾವಳಿಯಿಂದ ಮೃತಪಟ್ಟವರು ಹಾಗೂ ಆತ್ಮಹತ್ಯೆಗೆ ಶರಣಾದ ರೈತರಿಗೆ ಐದು ನಿಮಿಷ ಮೌನಾಚರಿಸಲಾಯಿತು.

ಕಾರ್ಯಕ್ರಮದಲ್ಲಿ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್‌, ಸದಸ್ಯ ಚಿಕ್ಕಮರಿಯಪ್ಪ, ಕೃಷಿಕ ಸಮಾಜದ ಅಧ್ಯಕ್ಷ ಶಿವರಾಮ್‌, ಉಪಾಧ್ಯಕ್ಷ ಕೃಷ್ಣ ಅಧಿಕಾರಿಗಳಾದ ಮಂಜು, ರೂಪಶ್ರೀ, ವಿ.ಎಲ್. ಚಂದ್ರಶೇಖರ್‌, ಸಂಪತ್‌, ಗಿರೀಶ್‌ಗೌಡ ಮುಖಂಡರಾದ ನ.ಲಿ.ಕೃಷ್ಣ, ನಂದೀಶ್‌ ಹಾಜರಿದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.