ಕೊನೆ ಭಾಗದ ಬೆಳೆಗೆ ನೀರು ಹರಿಸಿ

Team Udayavani, Jun 4, 2023, 4:16 PM IST

ಕೊನೆ ಭಾಗದ ಬೆಳೆಗೆ ನೀರು ಹರಿಸಿ

ಮಂಡ್ಯ: ರೈತರು ಬೆಳೆಯುತ್ತಿರುವ ಬೆಳೆಗಳಿಗೆ ತೊಂದರೆ ಯಾಗದಂತೆ, ಜಿಲ್ಲೆಯ ಕೊನೆಯ ಭಾಗದ ಬೆಳೆಗಳಿಗೆ ನಾಲೆಗಳ ಮೂಲಕ ನೀರು ತಲುಪಿಸುವ ವ್ಯವಸ್ಥೆ ಮಾಡ ಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು.

ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರೈತರಿಗೆ ಬಿತ್ತನೆ ಬೀಜ, ಗೊಬ್ಬರದ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ರೈತರ ಕೃಷಿ ಮಾಡಲು ಬೇಕಿರುವ ವಿದ್ಯುತ್‌ ವ್ಯವಸ್ಥೆ ಬೆಳಿಗ್ಗೆ ಸಮಯದಲ್ಲಿ ಕಲ್ಪಿಸಬೇಕು ಎಂದರು.

ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಣೆ ಹಾಗೂ ಸೂಚನೆಗಳನ್ನು ನಿಗದಿತ ಸಮಯದಲ್ಲಿ ಅಧಿಕಾರಿಗಳು ಸರ್ಕಾರಕ್ಕೆ ಒದಗಿಸಬೇಕಾಗುತ್ತದೆ. ಅದಕ್ಕೆ ಅಗತ್ಯ ಸಿದ್ಧತೆ ಮತ್ತು ತಂಡಗಳನ್ನು ಮಾಡಿಕೊಂಡು ಅರ್ಹ ಫಲಾನುಭವಿಗಳು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು ಎಂದರು.

ಕೆಲಸ ವಿಳಂಬವಾದರೆ ಕ್ರಮ: ರೈತರು ಮತ್ತು ಸಾರ್ವಜನಿಕರ ಕೆಲಸ ಮಾಡಿಕೊಡಲು ತಾಲೂಕು ಕಚೇರಿಗಳಲ್ಲಿ ಅನಗತ್ಯ ವಿಳಂಬ ಹಾಗೂ ಹಣದ ಬೇಡಿಕೆ ಇಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಸಾರ್ವಜನಿಕರ ಕೆಲಸಕ್ಕೆ ವಿಳಂಬ ಮಾಡುವುದು ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ತೊಂದರೆಗಳಿದ್ದಲ್ಲಿ ಶಾಸಕರ ಗಮನಕ್ಕೆ ತರಬೇಕು. ಜನಪರ ಹೊಸ ಯೋಜನೆಗಳನ್ನು ರೂಪಿಸಿ, ಹಂತ ಹಂತವಾಗಿ ಜಾರಿಗೆ ತರಲಾಗುವುದು. ಜಿಲ್ಲೆಯ ಬಹಳಷ್ಟು ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಇಂತಹ ಸಮಸ್ಯೆಗಳಿಗೆ ಕೂಡಲೇ ಯೋಜನೆ ರೂಪಿಸಿ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಮೈಷುಗರ್‌ ಕಾರ್ಯಾರಂಭಕ್ಕೆ ಸರ್ಕಾರ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ಕೆಲಸ ನಿರ್ವಹಿಸಬೇಕು. ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆದಲಾಗುವುದು. ಇದಕ್ಕೆ ಬೇಕಿರುವ ಪೂರಕ ಮಾಹಿತಿಯನ್ನು ಸಿದ್ಧ ಮಾಡಿಕೊಳ್ಳಬೇಕು ಎಂದು ಹೇಳಿದರು.

ರೈತರ ಸಮಸ್ಯೆಗಳಿಗೆ ಸ್ಪಂದಿಸಿ: ಶಾಸಕ ಪಿ. ಎಂ.ನರೇಂದ್ರಸ್ವಾಮಿ ಮಾತನಾಡಿ, ಮುಂಗಾರು ಆರಂಭವಾಗಲಿದೆ. ಕೃಷಿ ಇಲಾಖೆ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವ ಹಿಸಬೇಕು. ಮಣ್ಣಿನ ಸವಕಳಿಯಾಗದಂತೆ ಫಲವತ್ತತೆ ಕಾಪಾಡುವ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು. ನೀರಿನ ಮಿತವ್ಯಯ ಬಳಕೆ ಮೈಕ್ರೋ ಇರಿಗೇಷನ್‌, ಅಂತರ್ಜಲ ಮರುಪೂರಣದ ಬಗ್ಗೆ ಚಿಂತಿಸಿ ಅನುಷ್ಠಾನಗೊಳಿಸಬೇಕು ಎಂದರು.

ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸಿ: ಶಾಸಕ ರಮೇಶ್‌ ಬಾಬು ಬಂಡಿಸಿದ್ದೇಗೌಡ ಮಾತನಾಡಿ, ಮಂಡ್ಯ ಕೃಷಿ ಪ್ರಧಾನ ಜಿಲ್ಲೆ. ಮುಂಗಾರು ಮಳೆ ಆರಂಭವಾಗಲಿದೆ. ರೈತರಿಗೆ ಅಗತ್ಯವಾಗಿರುವ ರಾಸಾಯನಿಕ ಗೊಬ್ಬರ, ಬಿತ್ತನೆ ಬೀಜ ಸೇರಿದಂತೆ ಎಲ್ಲವನ್ನೂ ಶೇಖರಣೆ ಮಾಡಿಟ್ಟುಕೊಳ್ಳಬೇಕು. ನಗರದ ಜಿಲ್ಲಾಸ್ಪತ್ರೆ, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್‌ ಆಸ್ಪತ್ರೆಯ ಅಗತ್ಯತೆ ಇದೆ. ಯುಜಿಡಿ ಸಮಸ್ಯೆ ಹಾಗೂ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳ್ಳರ ಸಮಸ್ಯೆ ಇದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಶಾಸಕರಾದ ರವಿಕುಮಾರ್‌ ಗೌಡ ಗಣಿಗ, ಮಧು ಜಿ.ಮಾದೇಗೌಡ, ದಿನೇಶ್‌ಗೂಳಿಗೌಡ, ಡೀಸಿ ಡಾ.ಎಚ್‌. ಎನ್‌.ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌, ಜಿಪಂ ಸಿಇಒ ಶೇಖ್‌ ತನ್ವೀರ್‌ ಆಸಿಫ್‌, ಅಪರ ಜಿಲ್ಲಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜು, ಜಿಪಂ ಉಪಕಾರ್ಯದರ್ಶಿ ಸಂಜೀವಪ್ಪ ಹಾಜರಿದ್ದರು.

ಮುಂದಿನ ತಿಂಗಳು ರಾಜ್ಯ ಬಜೆಟ್‌ ಮಂಡನೆಯಾಗಲಿದೆ. ಹೊಸ ಯೋಜನೆಗಳನ್ನು ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಿ, ಬಜೆಟ್‌ ಮೂಲಕ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನ ತರುವ ಪ್ರಯತ್ನಕ್ಕೆ ಅಧಿಕಾರಿಗಳು ಸಹಕಾರ ನೀಡಬೇಕು. – ಪಿ.ಎಂ.ನರೇಂದ್ರಸ್ವಾಮಿ, ಶಾಸಕ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.