ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ್ದು ದೇವೇಗೌಡರು

Team Udayavani, Apr 10, 2019, 11:23 AM IST

anitha

ಶ್ರೀರಂಗಪಟ್ಟಣ: ಮಾಜಿ ಪ್ರಧಾನಿ ದೇವೇಗೌಡರು 1996ರಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳೆಯರಿಗೆ ಮೀಸಲಾತಿ ತಂದು ಕೊಟ್ಟಿದ್ದರಿಂದ ಇಂದು ಮಹಿಳೆಯರು ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯವಾಗಿ ಬೆಳೆಯಲು ಕಾರಣರಾಗಿದ್ದಾರೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.

ಪಟ್ಟಣದಲ್ಲಿ ನಡೆದ ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಮಂಡ್ಯ ಲೋಕಸಭಾ ಚುನಾವಣೆ ಪ್ರಯುಕ್ತ ಏರ್ಪಡಿಸಿದ್ದ ಸ್ತ್ರೀಶಕ್ತಿ ಸಂಘದ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ಸ್ಥಳೀಯ ಚುನಾವಣೆಯಲ್ಲಿ ಮಹಿಳೆಯರಿಗೆ ಮೀಸಲಾತಿ ತರದೇ ಹೋಗಿದ್ದರೆ ಮಹಿಳೆಯರು ರಾಜಕೀಯವಾಗಿ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ, ಹಾಗಾಗಿ ಪ್ರತಿಯೊಬ್ಬ ಮಹಿಳೆಯೂ ದೇವೇಗೌಡರನ್ನು ಸ್ಮರಿಸಿಕೊಳ್ಳಬೇಕಾಗುತ್ತದೆ ಎಂದರು.

ಮಹಿಳಾ ಸಬಲೀಕರಣಕ್ಕೆ ಆದ್ಯತೆ: ಮುಖ್ಯಮಂತ್ರಿ ಕುಮಾರಸ್ವಾಮಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತುಕೊಟ್ಟಿದ್ದಾರೆ. ಮಾತೃಶ್ರೀ ಯೋಜನೆ, ಸ್ತ್ರೀಶಕ್ತಿ ಗುಂಪುಗಳಿಗೆ ಬಡ್ಡಿರಹಿತ 5 ಲಕ್ಷದವರೆಗೆ ಸಾಲ, 4ರಷ್ಟು ಬಡ್ಡಿ ದರದಲ್ಲಿ ಸುಮಾರು 10 ಲಕ್ಷದವರೆಗೂ ಸಾಲ ಕೊಡುವ ಯೋಜನೆ, ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲಕ್ಕಾಗಿ ಬಡವರ ಬಂಧು ಯೋಜನೆ, ರೈತರ ಸಾಲ ಮನ್ನಾ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಅವರ ತಂದಿದ್ದಾರೆ. ಮತ್ತಷ್ಟು ಅಭಿವೃದ್ಧಿಗಾಗಿ ಕುಮಾರಸ್ವಾಮಿ ಅವರ ಕೈ ಬಲಪಡಿಸುವ ಉದ್ದೇಶದಿಂದ ಮಂಡ್ಯ ಲೋಕಸಭಾ ಚುನಾವಣೆಯಿಂದ ಸ್ಪರ್ಧಿಸಿರುವ ನಿಖೀಲ್‌ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕು ಎಂದು ಮಹಿಳಾ ಮತದಾರರಲ್ಲಿ ಮನವಿ ಮಾಡಿದರು.

ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಸಂತೋಷ್‌, ತಾಲೂಕು ಅಧ್ಯಕ್ಷ ಪೈ.ಮುಕುಂದ, ಜಿಪಂ ಸದಸ್ಯರಾದ ಸವಿತಾ, ಕಾವ್ಯ, ಎಂ.ಸಿ.ಮರಿಯಪ್ಪ, ತಾಪಂ ಅಧ್ಯಕ್ಷೆ ಮಂಜುಳಾ, ತಾಪಂ ಸದಸ್ಯರಾದ ಸರಸ್ವತಿ, ಭವ್ಯ, ಪುರಸಭೆ ಸದಸ್ಯರಾದ ವೆಂಕಟೇಶ್‌, ನಂದೀಶ್‌, ನಿಳಿನಿರಾಜ್‌ ಞಇತರ ಮುಖಂಡರು ಹಾಜರಿದ್ದರು.

ಅಂಬಿ ಬದುಕಿದ್ದಾಗ ಈ ಪ್ರೀತಿ ಎಲ್ಲಿ ಹೋಗಿತ್ತು?
ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಅಂಬರೀಶ್‌ ಆರೋಗ್ಯ ಹಾಗೂ ಅವರು ರಾಜಕೀಯವಾಗಿ ವಿಫ‌ಲರಾಗಲು ಸುಮಲತಾ ಅವರೇ ಕಾರಣ. ಜಿಲ್ಲೆಯ ಜನರ ಮೇಲೆ ಈಗಿರುವ ಕನಿಕರ ಹಾಗೂ ಪ್ರೀತಿ ಅಂಬರೀಶ್‌ ಬದುಕಿದ್ದಾಗ ಕೇವಲ ಶೇ.5ರಷ್ಟು ಪ್ರೀತಿ, ಕನಿಕರಇದ್ದಿದ್ದರೆ ಅಂಬರೀಶ್‌ ಇನ್ನು ಬಹಳ ಕಾಲ ಬದುಕಿ ಉಳಿಯುತ್ತಿದ್ದರು. ಜೊತೆಗೆ ಜಿಲ್ಲೆಯ ಜನರು ನಿಮ್ಮನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಿದ್ದರು ಎಂದು ಸುಮಲತಾ ವಿರುದ್ಧ ಹರಿಹಾಯ್ದರು.

ಪಕ್ಷೇತರ ಅಭ್ಯರ್ಥಿ ಸುಮಲತಾ ಈಗಅತಿಯಾದ ದುಃಖದಿಂದ ಚುನಾವಣಾ ಪ್ರಚಾರ ನಡೆಸಿ ಮಹಿಳೆಯರ ವೊಟು ನಮಗೇ ಎನ್ನುತ್ತಿದ್ದಾರೆ. ಸುಮಾರು 20 ವರ್ಷಗಳಿಂದ ಅಂಬರೀಶ್‌ ಹಾಗೂ ಮಂಡ್ಯ ಜಿಲ್ಲೆಯ ಸಂಬಂಧವಿದೆ. ಆದರೆ ಜಿಲ್ಲೆಯ ಹೆಣ್ಣುಮಕ್ಕಳು ಅವರ ಮನೆ ಬಾಗಿಲಿಗೆ ಹೋದಾಗ, ಇವರು ನಮ್ಮ ಜಿಲ್ಲೆಯವರು, ನಮ್ಮವರು ಎಂದು ಎಷ್ಟು ಮಹಿಳೆಯರಿಗೆ ನೀರು ಕೊಟ್ಟು ಸಂತೈಸಿದ್ದಾರೆ ಎಂದು ಪ್ರಶ್ನಿಸಿದರು. ಜಿಲ್ಲೆ ಹೆಣ್ಣುಮಕ್ಕಳು ಅಂಬರೀಶ್‌ರನ್ನು ನೋಡಲು ಅವರ ಮನೆ ಬಾಗಿಲಿಗೆ ಹೋದಾಗ ಸುಮಲತಾ ಸೌಜನ್ಯಕ್ಕಾದರೂ ಅವರನ್ನು ಮಾತನಾಡಿಸಿ ಕಳುಹಿಸುವ ಕನಿಷ್ಠ ನಡವಳಿಕೆ ನಿಮಗೆ ಇರಲಿಲ್ಲ. ಆದರೆ ಈಗ ಜಿಲ್ಲೆಯ ಮಹಿಳೆಯರ ವೋಟು ನಮಗೆ ಬೇಕು ಅಂತಾ ಕೇಳುತ್ತಿದ್ದಾರೆ. ಇದು ಮತದಾರರನ್ನು ದಾರಿ ತಪ್ಪಿಸುವ ಕೆಲಸ. ಇದಕ್ಕೆ ಜಿಲ್ಲೆಯ ಮತದಾರರು ಕಿವಿಗೊಡಬಾರದು. ಕಷ್ಟ ಸುಖಗಳಿಗೆ ಸ್ಪಂದಿಸುವ ಪ್ರಾಮಾಣಿಕ ವ್ಯಕ್ತಿ ನಿಖೀಲ್‌ ಗೆ ಮತ ಹಾಕುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ
ಸಹಕರಿಸಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.