ಶೀಘ್ರ ಜಿಲ್ಲಾ ಉಸ್ತುವಾರಿಗಳ ನೇಮಕ: ಕಾರಜೋಳ

Team Udayavani, Sep 4, 2019, 11:47 AM IST

mandya-tdy-1

ಮಂಡ್ಯದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿದರು. ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಇದ್ದರು.

ಮಂಡ್ಯ: ರಾಜ್ಯದಲ್ಲಿ ಆಡಳಿತ ಯಂತ್ರ ಸುಗಮವಾಗಿ ನಡೆಯಲು ಸಚಿವ ಸಂಪುಟ ರಚನೆಯಾಗಿದ್ದು, ಶೀಘ್ರ ಜಿಲ್ಲಾ ಉಸ್ತುವಾರಿಗಳ ನೇಮಕ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗಮಧ್ಯೆ ನಗರದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಸಹಜ ಬೆಳವಣಿಗೆ: ಸಚಿವ ಸಂಪುಟ ರಚನೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಂಪುಟ ರಚನೆಯಾದ ವೇಳೆ ಮಂತ್ರಿಸ್ಥಾನ ಸಿಗದವರು ಅತೃಪ್ತಿ ಹೊರಹಾಕಿದರು. ಅದೆಲ್ಲವೂ ಸಹಜ ಬೆಳವಣಿಗೆ. ಈಗ, ಅದೆಲ್ಲವೂ ನಿವಾರಣೆಯಾಗಿದ್ದು ಆಡಳಿತದ ಬಗ್ಗೆ ಹೆಚ್ಚು ಗಮನಹರಿಸಲಾಗುತ್ತಿದೆ ಎಂದರು.

ಅನುದಾನ ಕೊರತೆ ಇಲ್ಲ: ಲೋಕೋಪಯೋಗಿ ಇಲಾಖೆಯಿಂದ 400 ಕೋಟಿಗಿಂತ ಹೆಚ್ಚು ಕೆಲಸ ಕಾರ್ಯ ರಾಜ್ಯದಲ್ಲಿ ನಡೆಯುತ್ತಿವೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಇಲ್ಲ. ಉದ್ದೇಶಿತ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು ಎಂದು ಹೇಳಿದರು.

ಕಾರ್ಖಾನೆಗಳ ಆರಂಭಕ್ಕೆ ಕ್ರಮ: ಜಿಲ್ಲೆಯ ಮೈಷುಗರ್‌ ಮತ್ತು ಪಿಎಸ್‌ಎಸ್‌ಕೆ ಕಾರ್ಖಾನೆಗಳ ಸ್ಥಿತಿ-ಗತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಎರಡೂ ಕಾರ್ಖಾನೆಗಳ ಆರಂಭಕ್ಕೆ ಸರ್ಕಾರ ಶೀಘ್ರ ಕ್ರಮ ವಹಿಸಲಿದೆ ಎಂದರು.

ಮೈಸೂರು ದಸರಾ ಮಹೋತ್ಸವದ ಆಯೋಜನೆ ವಿಷಯದಲ್ಲಿ ಸ್ಥಳೀಯರನ್ನು ಕಡೆಗಣಿಸುತ್ತಿರುವ ಆರೋಪದ ಬಗ್ಗೆ ಕೇಳಿದಾಗ, ‘ನಾನು ಕನ್ನಡ ಸಂಸ್ಕೃತಿ ಇಲಾಖೆ ಸಚಿವನಾಗಿ ಕೆಲಸ ಮಾಡಿದವನು. ನಾಡಹಬ್ಬವನ್ನು ಆಚರಿಸುವ ಸಮಯದಲ್ಲಿ ಕೆಲವೊಂದು ಸಣ್ಣಪುಟ್ಟ ವ್ಯತ್ಯಾಸ ಸಹಜ. ಅದನ್ನು ಸರಿಪಡಿಸಿಕೊಂಡು ಮಾಡಬೇಕು’ ಎಂದು ಹೇಳಿದರು. ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌, ಬಿಜೆಪಿ ಜಿಲ್ಲಾಧ್ಯಕ್ಷ ಕಾಡೇನಹಳ್ಳಿ ನಾಗಣ್ಣಗೌಡ, ನಗರ ಘಟಕದ ಅಧ್ಯಕ್ಷ ಎಚ್.ಆರ್‌.ಅರವಿಂದ್‌, ಶಿವಕುಮಾರ ಆರಾಧ್ಯ ಮತ್ತಿತರರಿದ್ದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.