ಕೋವಿಡ್ 19 ತಡೆಗೆ ಎಚ್ಚರವಹಿಸಿ: ಸಂಸದೆ
Team Udayavani, Jul 2, 2020, 5:11 AM IST
ಭಾರತೀನಗರ: ಕೋವಿಡ್ 19 ತಡೆಗಾಗಿ ಸಾರ್ವಜನಿಕರು ಎಚ್ಚರವಹಿಸಬೇಕು. ಇಲ್ಲದಿದ್ದರೆ ಸಂಕಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಸಂಸದೆ ಸುಮಲತಾ ತಿಳಿಸಿದರು. ಬಿದರಹಳ್ಳಿ ಗ್ರಾಪಂನಿಂದ ನಿರ್ಮಿಸಿರುವ ಶುದ್ಧ ನೀರಿನ ಘಟಕ ಉದ್ಘಾಟಿಸಿ ಮಾತನಾಡಿ, ಕೋವಿಡ್ 19 ಬಡವರು, ಶ್ರೀಮಂತರು ಎಂದು ನೋಡುವುದಿಲ್ಲ. ಹೀಗಾಗಿ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು. ಗುಂಪಾಗಿ ನಿಲ್ಲುವುದನ್ನು ಕಡಿಮೆ ಮಾಡಬೇಕು.
ಶುದ್ಧ ನೀರಿನ ಘಟಕವನ್ನು ಬಳಸಿಕೊಳ್ಳಬೇಕು. ನೀರನ್ನು ಮಿತವಾಗಿ ಬಳಸಿ ಎಂದರು. ಬಿದರಹೊಸಹಳ್ಳಿ ಗ್ರಾಮದ ಸಮುದಾಯ ಭವನಕ್ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಿದರಹೊಸಹಳ್ಳಿ ಸರ್ಕಾರ ಪ್ರೌಢಶಾಲೆಗೆ ಕಾಂಪೌಂಡ್ ನಿರ್ಮಿಸುವಂತೆ ಸಂಸದರಿಗೆ ಮನವಿ ಸಲ್ಲಿಸಲಾಯಿತು. ತಹಶೀಲ್ದಾರ್ ಎಚ್.ವಿಜಿಕುಮಾರ್, ಇಒ ಮುನಿರಾಜು, ಡಿವೈಎಸ್‌ಪಿ ಪೃಥ್ವಿ, ಜಿಪಂ ಸದಸ್ಯ ಎ.ಎಸ್.ರಾಜೀವ್, ಗ್ರಾಪಂ ಅಧ್ಯಕ್ಷ ಚಿಕ್ಕಹನುಮೇಗೌಡ, ಪಿಡಿಒ ಮಹದೇವು, ತಾಪಂ ಸದಸ್ಯ ದೇವೇಗೌಡ, ಉಪಾಧ್ಯಕ್ಷ ನಾಗೇಶ್, ಬೇಲೂರು ಸೋಮಶೇಖರ್ ಇದ್ದರು.
ಕೂಲಿಕಾರರ ಮನವಿ: ಉದ್ಯೋಗ ಖಾತರಿ ಯೋಜನೆಯಡಿ 200 ದಿನ ಕೆಲಸ ನೀಡಬೇಕು. ದಿನದ ಕೂಲಿ 600 ರೂ ಹೆಚ್ಚಿಸಬೇಕು. ಮೈಷುಗರ್ ಕಾರ್ಖಾನೆ ಸರ್ಕಾರದ ಸ್ವಾಮ್ಯದಲ್ಲೇ ಉಳಿಸುವಂತೆ ಸದನದಲ್ಲಿ ಚರ್ಚಿಸಬೇಕು ಎಂದು ಕೃಷಿಕೂಲಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಸಂಸದೆ ಸುಮಲತಾ ಅವರಿಗೆ ಮನವಿ ಸಲ್ಲಿಸಿದರು. ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್ ಮತ್ತು ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿಯಲ್ಲಿ ಅತೃಪ್ತಿಯ ಹೊಗೆ
ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ: ಮತ್ತೆ ಭಯದಲ್ಲಿ ಜನ
ಗರಿಷ್ಠ ರಾಜಸ್ವ ಸಂಗ್ರಹವಿದ್ದರೂ ತೀವ್ರ ಸಿಬಂದಿ ಕೊರತೆ: ಇದು ಮಂಗಳೂರು ಆರ್ಟಿಒ ವ್ಯಥೆ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಫೆ.11ರಂದು ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಸಹಕಾರಿ ಸಮಾವೇಶ ಯಶಸ್ಸಿಗೆ ಸಂಸದ ನಳಿನ್ ಸೂಚನೆ