ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವಪತ್ತೆ: ಬೇರೆಡೆ ಕೊಲೆ ಮಾಡಿ ತಂದು ಸುಟ್ಟಿರುವ ಶಂಕೆ
Team Udayavani, Dec 4, 2020, 12:58 PM IST
ಮoಡ್ಯ: ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಪಂಡಿತಹಳ್ಳಿ ಗ್ರಾಮದ ಮಳವಳ್ಳಿ-ಚಾಮರಾಜನಗರ ಮುಖ್ಯರಸ್ತೆಯ ಬಳಿಯ ಶಿಂಷಾ ರಸ್ತೆಯಲ್ಲಿ ನಡೆದಿದೆ.
ಸುಮಾರು 30 ವರ್ಷದ ಯುವಕನನ್ನು ಯಾರೋ ದುಷ್ಕರ್ಮಿಗಳು ಪೆಟ್ರೋಲ್ ಅಥವಾ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದು, ವ್ಯಕ್ತಿಯ ದೇಹ ಅರೆಬೆಂದ ಸ್ಥಿತಿಯಲ್ಲಿದೆ.
ಸ್ಥಳಕ್ಕೆ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ, ಡಿವೈಎಸ್ಪಿ ಎಂ.ಜೆ.ಪೃಥ್ವಿ, ಟೌನ್ ಪಿಐ ಎ.ಕೆ.ರಾಜೇಶ್ ಹಾಗೂ ಗ್ರಾಮಾಂತರ ಪಿಎಸ್‌ಐ ಡಿ.ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯಾರೋ ದುಷ್ಕರ್ಮಿಗಳು ಬೇರೆ ಕಡೆ ಕೊಲೆ ಮಾಡಿ ಇಲ್ಲಿಗೆ ತಂದು ಸುಟ್ಟಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮಳವಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ ಗಲಭೆ ಪ್ರಕರಣ: 62 ಜನರ ಬಂಧನ, ಡಿ.5ರವರೆಗೆ ಕರ್ಫ್ಯೂ ಮುಂದುವರಿಕೆ
ಪ್ರಕರಣ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಸುಟ್ಟ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಕೂಡಲೇ ಪ್ರಕರಣವನ್ನು ಬೇಧಿಸಿ ಆರೋಪಿಗಳ ಪತ್ತೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444